ETV Bharat / state

ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿರುವಾಗ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ : ಹೈಕೋರ್ಟ್ - Divorce case

ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ವಿಚಾರಣಾ ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡುವಂತೆ ಸೂಚಿಸಿರುವ ಹೈಕೋರ್ಟ್​, ಪತಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

cannot-refuse-maintenance-when-family-court-order-is-challenged-high-court
ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿರುವಾಗ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ : ಹೈಕೋರ್ಟ್
author img

By ETV Bharat Karnataka Team

Published : Feb 10, 2024, 8:25 PM IST

Updated : Feb 10, 2024, 10:53 PM IST

ಬೆಂಗಳೂರು : ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿರುವ ಸಂದರ್ಭದಲ್ಲಿ ಪತ್ನಿ ಮತ್ತು ಮಗುವಿಗೆ ಜೀವನಾಂಶ ನೀಡುವುದರಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಮಹಾರಾಷ್ಟ್ರದ ನಾಸಿಕ್​​ನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅರ್ಜಿದಾರರು ಹೆಂಡತಿ ಮತ್ತು ಮಗುವನ್ನು ಮತ್ತೆ ವೈವಾಹಿಕ ಮನೆಗೆ ಕರೆದೊಯ್ಯಲು ಸಾಧ್ಯವಿಲ್ಲ. ಆದ್ದರಿಂದ, ಪತಿಯು ಹೆಂಡತಿ ಮತ್ತು ಮಗುವನ್ನು ಮರಳಿ ಬಯಸದಿದ್ದರೆ, ವೈವಾಹಿಕ ಹಕ್ಕುಗಳನ್ನು ಮರುಸ್ಥಾಪಿಸುವ ಆದೇಶವನ್ನು ಹೈಕೋರ್ಟ್​​​ನಲ್ಲಿ ಪ್ರಶ್ನಿಸಿದ್ದಾರೆ ಎಂಬ ಕಾರಣ ನೀಡಿದ್ದಾರೆ. ಆದ್ದರಿಂದ ಜೀವನಾಂಶ ಪಾವತಿ ಮಾಡುವುದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಕೌಟುಂಬಿಕ ದೌರ್ಜನ್ಯ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಜೀವನಾಂಶ ಪಾವತಿಸುವುದು ಕಡ್ಡಾಯವಾಗಲಿದೆ. ಜೀವನಾಂಶ ಪಾವತಿ ಮಾಡುವಂತೆ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ದೋಷ ಕಂಡು ಬಂದಿಲ್ಲ ಎಂದು ತಿಳಿಸಿದ ನ್ಯಾಯಪೀಠ ಜೀವನಾಂಶ ನೀಡುವಂತೆ ಸೂಚನೆ ನೀಡಿ, ಪತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ: 2015ರಲ್ಲಿ ಪತ್ನಿ ತನ್ನ ವೈವಾಹಿಕ ಮನೆಯನ್ನು ತೊರೆದಿದ್ದಾಳೆ ಎಂದು ಹೇಳಿ ಪತಿ ಮದುವೆಯನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅರ್ಜಿಯನ್ನು ವಜಾಗೊಳಿಸಿ ವೈವಾಹಿಕ ಹಕ್ಕುಗಳನ್ನು ಮರುಸ್ಥಾಪಿಸುವಂತೆ ಕೋರಿ ಪತ್ನಿ ಅರ್ಜಿ ಸಲ್ಲಿಸಿದರು. 2020ರ ಸೆಪ್ಟೆಂಬರ್ 28ರಂದು ಕುಟುಂಬ ನ್ಯಾಯಾಲಯವು ಪತಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು, ಜೊತೆಗೆ ಪತ್ನಿಯ ಅರ್ಜಿಯನ್ನು ಪುರಸ್ಕರಿಸಿತ್ತು.

ಆದಾಗ್ಯೂ, ಪತಿ ತನ್ನನ್ನು ಮರಳಿ ತೆಗೆದುಕೊಳ್ಳದ ಕಾರಣ, ಹೆಂಡತಿ ಮಧ್ಯಂತರ ಜೀವನಾಂಶವನ್ನು ಕೋರಿ ಅರ್ಜಿಯೊಂದಿಗೆ ಆದೇಶವನ್ನು ಜಾರಿಗೊಳಿಸಲು ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯ, ಪತ್ನಿ ಮತ್ತು ಮಗುವಿಗೆ ಮಾಸಿಕ 20,000 ರೂ.ಗಳನ್ನು ಜೀವನಾಂಶವಾಗಿ ಪಾವತಿಸುವಂತೆ ಪತಿಗೆ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ಪತಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಚೆನ್ನೈ-ಬೆಂಗಳೂರು ಕಾರಿಡಾರ್​​​​ನಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಅರ್ಜಿ: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್

Last Updated : Feb 10, 2024, 10:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.