ETV Bharat / state

ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡಲು ಸಾಧ್ಯವಿಲ್ಲ: ಸಚಿವ ಎಂ.ಬಿ.ಪಾಟೀಲ್ - Minister M B Patil

author img

By ETV Bharat Karnataka Team

Published : Jun 8, 2024, 1:40 PM IST

Updated : Jun 8, 2024, 4:35 PM IST

ರಾಜ್ಯದಲ್ಲಿ ಕಾಂಗ್ರೆಸ್​ 9 ಲೋಕಸಭಾ ಸ್ಥಾನಗಳನ್ನಷ್ಟೇ ಗೆದ್ದಿದ್ದು, ನಿರೀಕ್ಷೆಯಷ್ಟು ತಲುಪದೇ ಇರುವುದಕ್ಕೆ ಪಕ್ಷದ ಯಾರೋ ಒಬ್ಬರನ್ನು ಹೊಣೆ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್​ ಹೇಳಿದರು.

Minister M B Patil
ಸಚಿವ ಎಂ.ಬಿ.ಪಾಟೀಲ್ (ETV Bharat)

ಸಚಿವ ಎಂ.ಬಿ.ಪಾಟೀಲ್ (ETV Bharat)

ಬೆಂಗಳೂರು: "ಲೋಕಸಭಾ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿಕೊಳ್ಳಲಿದೆ" ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, "ಕಳೆದ ಒಂದು ವರ್ಷದಲ್ಲಿ ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ಕಂಡುಕೊಳ್ಳಲಿದ್ದೇವೆ. ಗೆಲ್ಲಬಹುದಾಗಿದ್ದ ಕೆಲವು ಕ್ಷೇತ್ರಗಳು ಕೈಜಾರಿರುವುದು ನಮಗೆ ಗೊತ್ತಾಗಿದೆ. ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು" ಎಂದರು.

"ಈಗ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುತ್ತಿದ್ದಾರೆ. ಕಳೆದ ಎರಡು ಬಾರಿಗಿಂತ ಈ ಸಲ ಬಿಜೆಪಿ ಬಲ ಕುಂದಿದೆ. ಹೀಗಾಗಿ ಈ ಸಲ ಅವರ ಸರ್ಕಾರ ಎಷ್ಟು ದಿನ ಇರುತ್ತದೋ ಹೇಳಲು ಸಾಧ್ಯವಿಲ್ಲ. ಅದರಲ್ಲೂ ನಿತೀಶ್​ ಕುಮಾರ್ ತರಹದ ವ್ಯಕ್ತಿಯನ್ನು ಇಟ್ಟುಕೊಂಡು ಸರ್ಕಾರ ನಡೆಸುವುದು ಎಷ್ಟು ಕಷ್ಟ ಎನ್ನುವುದು ನಮಗೆ ಗೊತ್ತಿದೆ" ಎಂದು ಭವಿಷ್ಯ ನುಡಿದರು.

ಇದನ್ನೂ ಓದಿ: ರಾಹುಲ್ ಗಾಂಧಿ ಸೂಚನೆಗೆ ಬದ್ಧ, ಹಾಗೆಯೇ ನಡೆದುಕೊಳ್ಳುತ್ತೇವೆ: ಗೃಹ ಸಚಿವ ಪರಮೇಶ್ವರ್ - Home Minister Parameshwar

Last Updated : Jun 8, 2024, 4:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.