ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ) : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಭಸವಾಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸಿನಿಮೀಯ ರೀತಿ ಮೂರ್ನಾಲ್ಕು ಸುತ್ತು ಪಲ್ಟಿಯಾಗಿದೆ. ಅಪಘಾತದ ಭಯಾನಕ ಸ್ಥಳೀಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ತಾಲೂಕಿನ ಕತ್ತಿಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಅಪಘಾತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಮ್ಮದ್ ಯೂನಿಸ್ (20) ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಿಶೋರ್, ಯತೀಶ್, ಚೇತನ್ ಮತ್ತು ವಿಶಾಲ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರು ದೇವನಹಳ್ಳಿಯ ವಿಜಯಪುರದವರಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದದಲ್ಲಿನ ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಬರುವ ವೇಳೆ ಈ ಅವಘಡ ಸಂಭವಿಸಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು - TWO WHEELER HIT WOMAN