ETV Bharat / state

ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ಕಾರು ಪಲ್ಟಿ: ಚಾಲಕ ಸಾವು, ಕಾನ್ಸ್‌ಟೇಬಲ್​ಗೆ ಗಾಯ - CAR OVERTURNS

ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟಿದ್ದು, ಕಾನ್ಸ್‌ಟೇಬಲ್​ಗೆ ಗಾಯಗೊಂಡಿದ್ದಾರೆ.

CAR OVERTURNS
ಪಲ್ಟಿಯಾದ ಕಾರು (ETV Bharat)
author img

By ETV Bharat Karnataka Team

Published : Nov 27, 2024, 10:52 AM IST

Updated : Nov 27, 2024, 10:58 AM IST

ಚಾಮರಾಜನಗರ: ಔಡಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ.

ಕಾರು ಚಲಾಯಿಸುತ್ತಿದ್ದ ಹರೀಶ್ ಗೌಡ ಎಂಬವರು ಸ್ಥಳದಲ್ಲೇ ಅಸುನೀಗಿದ್ದು, ಮೈಸೂರಿನ ಪೊಲೀಸ್ ಕಾನ್ಸ್‌ಟೇಬಲ್ ವಿಜಯ್ ಕುಮಾರ್‌ ತೀವ್ರವಾಗಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಇವರಿಬ್ಬರು ಬರುತ್ತಿದ್ದರು ಎಂದು ತಿಳಿದು ಬಂದಿದೆ.

ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮೂರನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ವಶಕ್ಕೆ ಪಡೆಯಲಾಗಿದೆ.

Last Updated : Nov 27, 2024, 10:58 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.