ETV Bharat / state

ದೇವನಹಳ್ಳಿ: ಬ್ಯಾಗ್​ನಲ್ಲಿ ಬಾಂಬ್ ಇದೆಯೆಂದು ತಮಾಷೆ ಮಾಡಿದ ಪ್ರಯಾಣಿಕನ ವಿರುದ್ಧ ಕೇಸ್​ - Case Against Passenger - CASE AGAINST PASSENGER

ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ತಮಾಷೆ ಮಾಡಿದ ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಾಗಿದೆ.

KEMPEGOWDA AIRPORT
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ETV Bharat)
author img

By ETV Bharat Karnataka Team

Published : May 19, 2024, 12:53 PM IST

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಬ್ಯಾಗ್‌ನಲ್ಲಿ ಬಾಂಬ್ ಇದೆ ಅಂತಾ ಅವಾಂತರ ಸೃಷ್ಟಿಸಿದ್ದ. ಬ್ಯಾಗೇಜ್ ಚೆಕ್ ಮಾಡುವಾಗ ಬಾಂಬ್ ಇದೆ ಅಂತಾ ಜೋಕ್ ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ.

ಈ ಸಂಬಂಧ ಪ್ರಯಾಣಿಕನನ್ನು ವಶಕ್ಕೆ ಪಡೆದ ವಿಮಾನ ನಿಲ್ದಾಣದ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಪ್ರಯಾಣಿಕ ರಾಜೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ರಾಜೇಶ್ ಕುಮಾ‌ರ್ ಟರ್ಮಿನಲ್-2 ನಲ್ಲಿ ಚೆಕ್ ಇನ್ ವೇಳೆ ಅವಾಂತರ ಸೃಷ್ಟಿಸಿದ್ದಾನೆ. ಚೆಕ್‌ ಇನ್ ವೇಳೆ ಬ್ಯಾಗ್​ನಲ್ಲಿ ಬಾಂಬ್ ಇದೆ ಅಂದಿದ್ದಾನೆ. ಇದರಿಂದ ಭದ್ರತಾ ಸಿಬ್ಬಂದಿ ಆತಂಕಗೊಂಡು ಪ್ರಯಾಣಿಕನ ಬ್ಯಾಗ್ ತಪಾಸಣೆ ನಡೆಸಿದ್ದಾರೆ. ಈ ವೇಳೆ ರಾಜೇಶ್ ತಾನು ತಮಾಷೆ ಮಾಡಿದ್ದಾಗಿ ಹೇಳಿದ್ದಾನೆ. ಭದ್ರತಾ ಸಿಬ್ಬಂದಿ ಪ್ರಯಾಣಿಕ ರಾಜೇಶ್​ನನ್ನು ಕೆಐಎಎಲ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ವ್ಯಕ್ತಿ ಹರಿಯಾಣ ಮೂಲದವನೆಂದು ತಿಳಿದು ಬಂದಿದೆ.

ಪೊಲೀಸರ ವಿಚಾರಣೆ ವೇಳೆ ಚೆಕ್ ಇನ್ ವೇಳೆ ಜೋಕ್ ಮಾಡಿದ್ದಾಗಿ ರಾಜೇಶ್ ಹೇಳಿದ್ದಾನೆ. ರಾಜೇಶ್ ಕುಮಾ‌ರ್ ವಿರುದ್ಧ ಪ್ರಕರಣ ದಾಖಲಿಸಿದ ಕೆಐಎಎಲ್ ಪೊಲೀಸರು, ನಂತರ ಬಂಧನ ಪ್ರಕ್ರಿಯೆ ಮುಗಿಸಿ, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ - AI FLIGHT EMERGENCY LANDING

ETV Bharat Logo

Copyright © 2024 Ushodaya Enterprises Pvt. Ltd., All Rights Reserved.