ETV Bharat / state

ಬೆಂಗಳೂರು: ವಿವಾಹಿತೆಯ ಖಾಸಗಿ ಫೋಟೊ ಇಟ್ಟುಕೊಂಡು ಬೆದರಿಸಿ ಸುಲಿಗೆ - ರೌಡಿಶೀಟರ್‌ ವಿರುದ್ಧ ಕೇಸ್ - EXTORTION CASE AGAINST ROWDYSHEETER

ವಿವಾಹಿತ ಮಹಿಳೆ ಬೆದರಿಸಿ ಸುಲಿಗೆ ಮಾಡಿದ ಆರೋಪದ ಮೇಲೆ ರೌಡಿಶೀಟರ್ ವಿರುದ್ಧ ಪ್ರಕರಣ ದಾಖಲಾಗಿದೆ.

EXTORTION CASE AGAINST ROWDYSHEETER  BENGALURU  MARRIED WOMAN EXTORTED  MONEY EXTORTION CASE  ರೌಡಿಶೀಟರ್‌ ವಿರುದ್ಧ ಪ್ರಕರಣ
ಬ್ಯಾಡರಹಳ್ಳಿ ಪೊಲೀಸ್ ಠಾಣೆ (ETV Bharat)
author img

By ETV Bharat Karnataka Team

Published : 15 hours ago

ಬೆಂಗಳೂರು: ವಿವಾಹಿತೆಯ ಜೊತೆಗಿನ ಖಾಸಗಿ ಕ್ಷಣಗಳ ಫೋಟೋ, ವಿಡಿಯೋಗಳನ್ನು ಇಟ್ಟುಕೊಂಡು ಬೆದರಿಸಿ ಸುಲಿಗೆ ಮಾಡಿದ್ದಲ್ಲದೇ, ಅವುಗಳನ್ನು ವೈರಲ್​ ಮಾಡಿದ ಆರೋಪದ ಮೇಲೆ ರೌಡಿಶೀಟರ್ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

37 ವರ್ಷದ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಅನ್ವಯ ಸದ್ಯ ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ರೌಡಿಶೀಟರ್ ಸುರೇಶ್ ಅಲಿಯಾಸ್ ಕುಣಿಗಲ್ ಸೂರಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಾಡಿ ವಾರಂಟ್​​ ಪಡೆದು ಆರೋಪಿಯ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ವಿವರ: ಸಂತ್ರಸ್ತೆಗೆ ಸೇರಿದ ಮನೆಯನ್ನು ಭೋಗ್ಯಕ್ಕೆ ಪಡೆದಿದ್ದ ಆರೋಪಿ, ಹಲವು ವರ್ಷಗಳಿಂದ ಅಲ್ಲಿಯೇ ವಾಸವಿದ್ದ. ತಾನು ಕ್ಯಾಬ್ ಚಾಲಕ ಎಂದು ಪರಿಚಯಿಸಿಕೊಂಡಿದ್ದ ಆರೋಪಿಯು ಮಹಿಳೆಯ ಸ್ನೇಹ ಸಂಪಾದಿಸಿ ಸಲುಗೆಯಿಂದಿದ್ದ. ಈ ನಡುವೆ ಇಬ್ಬರ ನಡುವೆ ದೈಹಿಕ ಸಂಬಂಧವೂ ಬೆಳೆದಿತ್ತು. ಅಲ್ಲದೇ, ಮಹಿಳೆಯ ವಿರೋಧದ ನಡುವೆಯೂ ಖಾಸಗಿ ಕ್ಷಣಗಳ ಫೋಟೋ ಹಾಗೂ ವಿಡಿಯೋಗಳನ್ನು ಸೆರೆಹಿಡಿದುಕೊಂಡಿದ್ದ. ಅಲ್ಲದೇ ಆರೋಪಿಯ ಫೋನ್‌ನಲ್ಲಿ ಹಲವು ಮಹಿಳೆಯರ ಖಾಸಗಿ ವಿಡಿಯೋ, ಫೋಟೋಗಳು ಇರುವುದನ್ನು ಗಮನಿಸಿದ್ದ ಸಂತ್ರಸ್ತೆ, ಆತನೊಂದಿಗೆ ಗಲಾಟೆ ಮಾಡಿಕೊಂಡು ನಿರ್ಲಕ್ಷ್ಯಿಸಲಾರಂಭಿಸಿದ್ದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ಕೋಪಗೊಂಡ ಆರೋಪಿ ಮಹಿಳೆಯ ಖಾಸಗಿ ಫೋಟೋ, ವಿಡಿಯೋಗಳನ್ನು ತೋರಿಸಿ ಬೆದರಿಸಿ ಹಣ ಸುಲಿಗೆ ಮಾಡಲಾರಂಭಿಸಿದ್ದಾನೆ. ಅಲ್ಲದೇ, ಆ ಫೋಟೋ, ವಿಡಿಯೋಗಳನ್ನು ಮಹಿಳೆಯ ಪತಿ ಮತ್ತು ಸಂಬಂಧಿಕರಿಗೆ ಕಳುಹಿಸಿ ಮಾನಹಾನಿ ಮಾಡಿದ್ದಾನೆ. ನವೆಂಬರ್ 30 ರಂದು ವಾಲ್ಮಿಕಿ ಸರ್ಕಲ್ ಬಳಿ ಮಹಿಳೆಯನ್ನು ಅಡ್ಡಗಟ್ಟಿದ್ದ ಆರೋಪಿ, "ಯಾಕೆ ನನ್ನ ಕಾಲ್ ರಿಸೀವ್ ಮಾಡ್ತಿಲ್ಲ" ಎಂದು ಪ್ರಶ್ನಿಸಿ, ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಸಂತ್ರಸ್ತ ಮಹಿಳೆ "ತನ್ನ ಬಳಿ‌ ಹಣವಿಲ್ಲ" ಎಂದಾಗ ಚಾಕು ತೋರಿಸಿ ಬೆದರಿಸಿ ಮೊಬೈಲ್ ಫೋನ್, ಕಾರು ಹಾಗೂ 18 ಗ್ರಾಂ ಚಿನ್ನದ ಓಲೆ ದೋಚಿ ಪರಾರಿಯಾಗಿದ್ದಾನೆ ಎಂದು ದೂರಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಬ್ಯಾಡರಹಳ್ಳಿ ಠಾಣೆ ಪೊಲೀಸರು ಆರೋಪಿ ರೌಡಿಶೀಟರ್ ಸುರೇಶ್ ಹುಡುಕಾಟದಲ್ಲಿರುವಾಗಲೇ ಆತ ತುಮಕೂರು ನ್ಯಾಯಾಲಯದ ಬಳಿ ತನ್ನ ಸಹೋದರನಿಗೆ ಚಾಕು ಇರಿದ ಪ್ರಕರಣದಲ್ಲಿ ಜೈಲುಪಾಲಾಗಿದ್ದಾನೆ. ಸದ್ಯ ಆರೋಪಿಯನ್ನು ಬಾಡಿ ವಾರಂಟ್​​ ಆಧಾರದಲ್ಲಿ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಇನ್ಶೂರೆನ್ಸ್​ ಹಣಕ್ಕಾಗಿ ತಂದೆಯನ್ನೇ ಕೊಲೆಗೈದು ಅಪಘಾತದ ಕಥೆ ಕಟ್ಟಿದ ಮಗ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.