ETV Bharat / state

ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದ್ದ ಪ್ರಕರಣ: ಮುಖ್ಯ ಶಿಕ್ಷಕಿ, ಸಹ ಶಿಕ್ಷಕ ಅಮಾನತು - Teachers suspended - TEACHERS SUSPENDED

ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಬಿಸಿಯೂಟ ಸೇವಿಸಿ 32ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು, ಮುಖ್ಯ ಶಿಕ್ಷಕಿ ಮತ್ತು ಸಹಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

midday meal  Headmaster co teacher suspended  Department Of School Education  Koppal
ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡಿದ್ದ ಪ್ರಕರಣ: ಮುಖ್ಯ ಶಿಕ್ಷಕಿ, ಸಹಶಿಕ್ಷಕ ಅಮಾನತು
author img

By ETV Bharat Karnataka Team

Published : Apr 6, 2024, 10:29 AM IST

ಗಂಗಾವತಿ: ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಬಿಸಿಯೂಟ ಸೇವಿಸಿ 32ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು, ಮುಖ್ಯ ಶಿಕ್ಷಕಿ ಹಾಗೂ ಸಹಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಸಂಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾವತಿ ಮತ್ತು ಸಹಶಿಕ್ಷಕ ಶರಣಬಸವರಾಜ ಅವರನ್ನು ಕರ್ತವ್ಯ ಲೋಪದ ಆರೋಪದ ಮೇರೆಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ ಅವರ ಸೂಚನೆ ಮೆರೆಗೆ ಡಿಡಿಪಿಐ ಈ ಅಮಾನತು ಶಿಕ್ಷೆ ನೀಡಿದ್ದಾರೆ. ಅಶುದ್ಧ ನೀರಿನಿಂದ ಅಡುಗೆ ಮಾಡಿದ್ದರಿಂದ ಮಕ್ಕಳ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂಬ ಪ್ರಾಥಮಿಕ ಮಾಹಿತಿ ಮೆರೆಗೆ ಇಲಾಖೆ ಈ ಕ್ರಮ ಕೈಗೊಂಡಿದೆ.

ಡಿಡಿಪಿಐ ಪ್ರತಿಕ್ರಿಯೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಡಿಪಿಐ ಶ್ರೀಶೈಲ ಬಿರಾದಾರ ಅವರು, ಅಶುದ್ಧ ಕುಡಿಯುವ ನೀರನ್ನು ಅಡುಗೆಗೆ ಬಳಕೆ ಮಾಡಿರುವುದು ಮತ್ತು ಶಾಲಾ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳದಿರುವ ಹಿನ್ನೆಲೆ ಮುಂದಿನ ಆದೇಶದವರೆಗೂ ಈ ಇಬ್ಬರನ್ನು ಅಮಾನತು ಮಾಡಲಾಗಿದೆ'' ಎಂದರು.

ಪ್ರತ್ಯೇಕ ಪ್ರಕರಣ, ಇಬ್ಬರು ಮುಖ್ಯ ಶಿಕ್ಷಕರ ಅಮಾನತು: ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ ಕಾಸ್ಟಿಂಗ್ ಹಾಗೂ ಸಿಸಿಟಿವಿ ಕ್ಯಾಮೆರಾಗಳ ನಿರ್ವಹಣೆಯಲ್ಲಿ ಲೋಪವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್. ನಗರ ತಾಲೂಕಿನ ಇಬ್ಬರು ಮುಖ್ಯ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಕೆ.ಆರ್. ನಗರ ತಾಲೂಕಿನ ಭೇರ್ಯ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕಾತ್ಯಾಯಿನಿ ಮತ್ತು ಹಂಪಾಪುರ ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಆದೇಶ ಹೊರಡಿಸಿದ್ದಾರೆ.

ಏಪ್ರಿಲ್ 2ರಂದು ಪರೀಕ್ಷೆ ಸಮಯದಲ್ಲಿ ಈ ಕೇಂದ್ರಗಳಿಗೆ ಉಪನಿರ್ದೇಶಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಕೇಂದ್ರಗಳಲ್ಲಿ ನಿಯಮಾನುಸಾರ ಪರೀಕ್ಷೆ ವೇಳೆ ಪರೀಕ್ಷಾ ಕೊಠಡಿಗಳ ವೆಬ್‌ ಕಾಸ್ಟಿಂಗ್‌ ಮಾಡಿಲ್ಲ. ಕೆಲವು ಅವಧಿವರೆಗೆ ಉದ್ದೇಶಪೂರ್ವಕವಾಗಿ ಕ್ಯಾಮೆರಾಗಳನ್ನು ಬಂದ್ ಮಾಡಲಾಗಿದೆ. ಹೀಗಾಗಿ ಪರೀಕ್ಷಾ ಅಕ್ರಮ ನಡೆದಿರುವ ಸಾಧ್ಯತೆ ಇದೆ ಎನ್ನುವ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ: ಎಸ್​ಎಸ್ಎಲ್​ಸಿ ಪರೀಕ್ಷಾ ನಿಯಮ ಉಲ್ಲಂಘನೆ ಆರೋಪ: ಇಬ್ಬರು ಮುಖ್ಯ ಶಿಕ್ಷಕರ ಅಮಾನತು - Two headmasters suspended

ETV Bharat Logo

Copyright © 2025 Ushodaya Enterprises Pvt. Ltd., All Rights Reserved.