ETV Bharat / state

ಅತ್ಯಾಚಾರ ಆರೋಪ: ಉದ್ಯಮಿ ಸೋಮಶೇಖರ್ ಜಯರಾಜ್ ವಿರುದ್ಧ ಎಫ್‌ಐಆರ್​ - RAPE ALLEGATION

ಅತ್ಯಾಚಾರ ಆರೋಪದಡಿ ಸೋಮಶೇಖರ್ ಜಯರಾಜ್ ವಿರುದ್ಧ ಬೆಂಗಳೂರಿನ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jan 7, 2025, 10:40 AM IST

Updated : Jan 7, 2025, 10:53 AM IST

ಬೆಂಗಳೂರು: ಅತ್ಯಾಚಾರ ಎಸಗಿದ ಆರೋಪದಡಿ ಉದ್ಯಮಿ ಹಾಗೂ ಮಾಜಿ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ (ಜಿಮ್ ಸೋಮ) ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರ್ಥಿಕ ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ 26 ವರ್ಷದ ಸಂತ್ರಸ್ತ ಮಹಿಳೆ ನೀಡಿದ‌ ದೂರಿನನ್ವಯ ಅಶೋಕ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೂರುದಾರರಿಗೆ ಆಕೆಯ ಸ್ನೇಹಿತೆಯೊಬ್ಬಳ ಮೂಲಕ‌ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಮದುವೆ ನಿಗದಿಯಾಗಿದ್ದರಿಂದ 6 ಲಕ್ಷ ರೂ ಆರ್ಥಿಕ ಸಹಾಯ ಮಾಡುವಂತೆ ಸೋಮಶೇಖರ್ ಬಳಿ ದೂರುದಾರೆ ಕೇಳಿಕೊಂಡಿದ್ದರು. ಕಳೆದ ಅಕ್ಟೋಬರ್‌ನಲ್ಲಿ ದೂರುದಾರೆಯ ಪಿಜಿ ಬಳಿ ಹೋಗಿದ್ದ ಸೋಮಶೇಖರ್, ಹಣ ಕೊಡುವುದಾಗಿ ಆಕೆಯನ್ನು ಲಾಂಗ್ ಫೋರ್ಡ್ ರಸ್ತೆಯಲ್ಲಿರುವ ತಮ್ಮ ಫ್ಲ್ಯಾಟ್‌ಗೆ ಕರೆದೊಯ್ದಿದ್ದರು. ಅಲ್ಲಿ ದೂರುದಾರೆಯ ಇಚ್ಛೆಗೆ ವಿರುದ್ಧವಾಗಿ ಮದ್ಯಪಾನ ಮಾಡಿಸಿ ಅತ್ಯಾಚಾರ ಎಸಗಿದ್ದಾರೆ ಅಲ್ಲದೆ, ನಡೆದ ಘಟನೆಯನ್ನು ಯಾರಿಗಾದರೂ ಹೇಳಿದರೆ ಪ್ರಾಣಹಾನಿ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಈ ದೂರಿನನ್ವಯ ಅಶೋಕನಗರ ಠಾಣೆ ಪೊಲೀಸರು ಸೋಮಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿರುವುದಾಗಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಸೋಮಶೇಖರ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೋಮಶೇಖರ್, ಜೆಡಿಎಸ್​ನ ಎಚ್.ಕೆ.ಕುಮಾರಸ್ವಾಮಿ ವಿರುದ್ಧ ಸೋಲು ಕಂಡಿದ್ದರು.

ಇದನ್ನೂ ಓದಿ: ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಗೌಡ ದಂಪತಿಗೆ ಜಾಮೀನು ಮಂಜೂರು

Last Updated : Jan 7, 2025, 10:53 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.