ETV Bharat / state

ಪುತ್ತೂರಿನ ಎರಡು ಗೇರು ತಳಿ ಬಿಡುಗಡೆಗೊಳಿಸಲಿರುವ ಪ್ರಧಾನಿ ಮೋದಿ - Cashew Breed

ಪುತ್ತೂರಿನ ಎರಡು ಗೇರು ತಳಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಡುಗಡೆಗೊಳಿಸಲಿದ್ದಾರೆ.

Prime Minister Narendra Modi
ಪುತ್ತೂರಿನ ಎರಡು ಗೇರು ತಳಿ ಬಿಡುಗಡೆಗೊಳಿಸಲಿರುವ ಪ್ರಧಾನಿ ಮೋದಿ (ETV Bharat)
author img

By ETV Bharat Karnataka Team

Published : Aug 9, 2024, 9:44 PM IST

ಮಂಗಳೂರು(ದಕ್ಷಿಣ ಕನ್ನಡ): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್ ಎರಡನೇ ವಾರ ವಿವಿಧ ವಾರ್ಷಿಕ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ, ಪೋಷಕಾಂಶ ಸಮೃದ್ಧ ತಳಿಗಳು ಲೋಕಾರ್ಪಣೆಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

ಇದು ಕೇಂದ್ರ ಸರ್ಕಾರ 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಅಂಗವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ತಳಿಗಳು ಸೇರಿಕೊಂಡಿವೆ.

Cashew breed
ಗೇರು (ETV Bharat)

ನೇತ್ರಾ ಜಂಬೋ-1 ತಳಿಯನ್ನು ಸಂಸ್ಥೆಯ ಈಗಿನ ನಿರ್ದೇಶಕರಾದ ಡಾ.ದಿನಕರ ಅಡಿಗ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಈ ತಳಿ ಕೂಲಿ ಖರ್ಚನ್ನು ಗಮನಾರ್ಹ ಪ್ರಮಾಣದಲ್ಲಿ ಉಳಿಸುತ್ತದೆ. ಇದರಲ್ಲಿ 12 ಗ್ರಾಂ ತೂಕದ ಬೀಜಗಳಿರುತ್ತವೆ. ಶೇಕಡಾ 90ಕ್ಕೂ ಹೆಚ್ಚಿನ ಬೀಜಗಳದ್ದು ಒಂದೇ ಗಾತ್ರ. ನೂರು ಕೆಜಿ ಬೀಜ ಸಂಸ್ಕರಣೆಯಿಂದ ಸುಮಾರು 29 ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್ (ಡಬ್ಲ್ಯೂ 130) ಈ ತಳಿಯ ತಿರುಳಿನದ್ದು ಆಗಿದೆ.

Cashew
ಗೇರು (ETV Bharat)

ಈಗಿನ ಮಾರುಕಟ್ಟೆ ದರದಲ್ಲಿ ದೊಡ್ಡ ಗಾತ್ರದ ಬೀಜಕ್ಕೆ ಒಂದು ಟನ್ನಿಗೆ ಸುಮಾರು 10,000 ರೂ ಜಾಸ್ತಿ ಸಿಗುತ್ತದೆ. ಒಟ್ಟು 26000 ರೂ. ಗಳಷ್ಟು ಹೆಚ್ಚುವರಿ ಲಾಭ ಒಂದು ಟನ್ನಿಗೆ ಸಿಗುತ್ತದೆ. ಇದರ ತಿರುಳಿನ ಸಿಪ್ಪೆ ಸುಲಭದಲ್ಲಿ ಬಿಡಿಸಬಹುದು. ಹಾಗಾಗಿ ಕಾರ್ಖಾನೆಯಲ್ಲೂ ಕೂಲಿ ಖರ್ಚು ಉಳಿಸುತ್ತದೆ. ಜೊತೆಗೆ ತಿರುಳು ತುಂಬಾ ರುಚಿಕರವಾಗಿದೆ ಎಂಬುದು ತಿಳಿದುಬಂದಿದೆ.

Cashew
ಗೇರು (ETV Bharat)

ನೇತ್ರಾ ಗಂಗಾ ತಳಿಯನ್ನು ಹಿಂದಿನ ಪ್ರಭಾರ ನಿರ್ದೇಶಕರಾದ ಡಾ.ಗಂಗಾಧರ ನಾಯಕ್ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಇದು ದೊಡ್ಡ ಗಾತ್ರದ ಬೀಜವನ್ನು (12 ರಿಂದ 13 ಗ್ರಾಂ), ಗೊಂಚಲುಗಳಲ್ಲಿ ಬಿಡುವ ತಳಿಯಾಗಿದ್ದು ಉತ್ತಮ ಫಸಲನ್ನು ಕೊಡುತ್ತದೆ. ಪ್ರಾರಂಭದ ಒಂದೆರಡು ವರ್ಷಗಳಲ್ಲೇ ಹೂ ಬಿಡುವ ಹಾಗೂ ದೀರ್ಘಾವಧಿ (ಡಿಸೆಂಬರ್ ನಿಂದ ಏಪ್ರಿಲ್ ತನಕ) ಹೂವು ಮತ್ತು ಗೇರು ಬೀಜ ಬಿಡುವ ತಳಿ. ತಿರುಳಿನ ಪ್ರಮಾಣ ಶೇಕಡಾ 29.5% ಇರುತ್ತದೆ. ಮೂರನೆ ವರ್ಷದಲ್ಲಿಯೇ ಗಿಡವೊಂದಕ್ಕೆ 5 ಕೆಜಿಗಿಂತ ಮೇಲ್ಪಟ್ಟು ಇಳುವರಿ ಕೊಡುತ್ತದೆ.

Cashew
ಗೇರು ಬೀಜ (ETV Bharat)

ಗೇರಿನಲ್ಲಿ ಸದ್ಯ ಕೃಷಿ ಮಾಡುತ್ತಿರುವ ತಳಿಗಳು (ಭಾಸ್ಕರ, ವಿಆರ್​ಐ-3, ಉಳ್ಳಾಲ -3 ಇತ್ಯಾದಿ) ಬಹುತೇಕ ಸಣ್ಣ ಹಾಗೂ ಮಧ್ಯಮ ಗಾತ್ರದವು. ಹಾಗಾಗಿ ಈ ದೊಡ್ಡ ಗಾತ್ರದ ಬೀಜದ ತಳಿಗಳು ಒಣಭೂಮಿ ಕೃಷಿಯಲ್ಲಿ ಹೊಸ ಭರವಸೆ ಹುಟ್ಟಿಸಬಲ್ಲವು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಬರೀ 30 ರೂಪಾಯಿಗೆ ಒಂದು ಕೆ.ಜಿ : ಪ್ರಸಿದ್ಧಿ ಪಡೆದ ಜಾರ್ಖಂಡ್‌ನ 'ಜಮ್ತರಾ ಗೋಡಂಬಿ'..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.