ETV Bharat / state

ಕಿತ್ತೂರು ಉತ್ಸವ; ಅ.22 ರಂದು ಬೆಳಗಾವಿಯಲ್ಲಿ ಕುನಾಲ್ ಗಾಂಜಾವಾಲಾ, ಸಾಧು ಕೋಕಿಲ ರಸಮಂಜರಿ

ಕಿತ್ತೂರು ಉತ್ಸವಕ್ಕೆ ಕುಂದಾ ನಗರಿ ಬೆಳಗಾವಿ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಖ್ಯಾತ ಗಾಯಕ ಕುನಾಲ್​ ಗಾಂಜಾವಾಲಾ ಮತ್ತು ನಟ/ಸಂಗೀತ ನಿರ್ದೇಶಕ ಸಾಧುಕೋಕಿಲ ಅವರ ರಸಮಂಜರಿ ಆಯೋಜಿಸಲಾಗಿದೆ.

ಕಿತ್ತೂರು ಉತ್ಸವ
ಕಿತ್ತೂರು ಉತ್ಸವ (ETV Bharat)
author img

By ETV Bharat Karnataka Team

Published : Oct 17, 2024, 2:21 PM IST

ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚೆನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ‌ ಬಾರಿಗೆ ಕುಂದಾ ನಗರಿಯಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳನ್ನು‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ರಾಷ್ಟ್ರ ಮಟ್ಟದ ಪ್ರಖ್ಯಾತ ಗಾಯಕ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಹಿಂದಿನ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ.

ಕಿತ್ತೂರು ಉತ್ಸವ
ಕಿತ್ತೂರು ಉತ್ಸವ (ETV Bharat)

ಅದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಹಾಸ್ಯ ಕಲಾವಿದ, ಸಂಗೀತ ನಿರ್ದೇಶಕ ಸಾಧು ಕೋಕಿಲ್ ಅವರು ಮತ್ತು ಜೀ ಕನ್ನಡ ಸರಿಗಮಪ ತಂಡದವರು ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ.

ಆಕ್ಸಿಜೆನ್ ಡ್ಯಾನ್ಸ್ ಗ್ರೂಪ್ ವತಿಯಿಂದ ನೃತ್ಯ; ರೇಖಾ ಹೆಗಡೆ ಮತ್ತು ತಂಡದವರಿಂದ ನೃತ್ಯ ರೂಪಕ; ಪ್ರಕಾಶ್ ಚಂದನ್ನವರ ತಂಡದಿಂದ ಜೋಗತಿ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಇದಲ್ಲದೇ ಫೈರ್ ಶೋ ಹಾಗೂ ಶಾಡೋ ಆ‌್ಯಕ್ಟ್ ವಿಶೇಷ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿದೆ. ಎಲ್ಲರಿಗೂ ಉಚಿತ ಪ್ರವೇಶವಿದ್ದು, ಯುವಕ-ಯುವತಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಣಿ ಚೆನ್ನಮ್ಮನ ಹುಟ್ಟೂರು ಕಾಕತಿ ನಿರ್ಲಕ್ಷ್ಯ: ಅರಮನೆ ಪ್ರತಿರೂಪ ನಿರ್ಮಾಣ, ಕೋಟೆ ಅಭಿವೃದ್ಧಿಗೆ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.