ಚಿಕ್ಕಮಗಳೂರು: ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಗೆ ಭವ್ಯ ಸ್ವಾಗತ ಕೋರಲಾಗಿದ್ದು, ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.
ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಕಾರ್ಯಕರ್ತರು ಘೋಷಣೆ ಕೂಗಿದ್ದು, ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. 1995ನೇ ಇಸವಿಯಿಂದ ನಾನು ಯಾವುದನ್ನೂ ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕೋ ಅದನ್ನು ಪಕ್ಷ ನಿರ್ಧಾರ ಮಾಡುತ್ತದೆ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.
ಸಮೀಕ್ಷೆಗಳಲ್ಲಿ ಎನ್ಡಿಎ ಮುನ್ನಡೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿ ಎಂದು ಖಾತ್ರಿಪಡಿಸಿವೆ. ಪ್ರಾಮಾಣಿಕ ನಾಯಕತ್ವ ಹಾಗೂ ದೇಶ ಮೊದಲು ಎಂಬ ವಿಚಾರದ ಮೇಲೆ ನಂಬಿಕೆ ಇಟ್ಟು, ಜನರು ಆಶೀರ್ವಾದ ಮಾಡಿರುವುದಕ್ಕೆ ನಾನು ಅಭಿನಂದಿಸುತ್ತೇನೆ ಎಂದರು.
ಈ ಸಮೀಕ್ಷೆಗಿಂತ ನಾವು ಹೆಚ್ಚಿನ ಸ್ಥಾನ ಪಡೆದುಕೊಳ್ಳುತ್ತೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ, ಭಾರತ ವಿಶ್ವ ಗುರುವಾಗಲು ಬೇಕಾಗುವ ಎಲ್ಲ ಯೋಜನೆಯೊಂದಿಗೆ ಕೆಲಸ ಮಾಡುತ್ತೇವೆ. I.N.D.I.A ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಅವರು ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲಿ ಎಂದು ಹೇಳಿಕೆ ನೀಡಿದರು.
ಇದನ್ನೂ ಓದಿ: ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ, ಸುಮಲತಾಗಿಲ್ಲ ಅವಕಾಶ - Council Election Candidates