ETV Bharat / state

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸಮ್ಮತಿ: ಕ್ವಿಂಟಾಲ್​ಗೆ ಎಷ್ಟು ದರ ನಿಗದಿ? - GROUND NUT MSP

ಶೇಂಗಾ ಸೇರಿದಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗಿದೆ.

Central approval for purchase of groundnuts at  MSP : How much price per quintal?
ಮಾರುಕಟ್ಟೆಯಲ್ಲಿ ಶೇಂಗಾ ರಾಶಿ (ETV Bharat)
author img

By ETV Bharat Karnataka Team

Published : Oct 25, 2024, 1:43 PM IST

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಕಾರತ್ಮಕವಾಗಿ ಸ್ಪಂದಿಸಿದ್ದು ತನ್ನ ಸಮ್ಮತಿ ನೀಡಿದೆ. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್​, "ಕೇಂದ್ರ ಸರಕಾರವು ಶೇಂಗಾವನ್ನು ಬೆಂಬಲ ಬೆಲೆಗೆ ಖರೀದಿಸಲು ಒಪ್ಪಿಗೆ ನೀಡಿದೆ. ಹಾಗೂ ಪ್ರತಿ ಕ್ವಿಂಟಾಲ್​ಗೆ 6,783 ರೂ. ದರವನ್ನು ನಿಗದಿಪಡಿಸಲಾಗಿದೆ" ಎಂದು ಹೇಳಿದ್ದಾರೆ.

"ಬೆಂಬಲ ಬೆಲೆಯ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ" ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ಮನವಿ ಪುರಸ್ಕರಿಸಿದ ಕೇಂದ್ರ: "ಈಗ ಅನುಮತಿ ದೊರೆತಿರುವ ಶೇಂಗಾ ಸೇರಿದಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗಿದೆ. ಇದುವರೆಗೆ ಉಂಡೆ ಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿಯನ್ನು ಖರೀದಿಸಲಾಗಿದೆ. ಬೆಲೆ ಕುಸಿತದ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ರಾಜ್ಯದ ಮನವಿಯನ್ನು ಕೇಂದ್ರ ಸರಕಾರ ಪುರಸ್ಕರಿಸಿದೆ" ಎಂದು ಸಚಿವರು ತಿಳಿಸಿದ್ದಾರೆ.

ಟಾಸ್ಕ್ಫೋರ್ಸ್ ಸಮಿತಿಗಳಿಗೆ ನಿರ್ದೇಶನ: "ಶೇಂಗಾ ಖರೀದಿಗೆ ಕೇಂದ್ರ ಸರ್ಕಾರದಿಂದ ಎರಡು, ರಾಜ್ಯ ಸರ್ಕಾರದಿಂದ ನಾಲ್ಕು ಏಜನ್ಸಿಗಳನ್ನು ಗುರುತಿಸಲಾಗಿದೆ. ಅವಶ್ಯಕತೆಗನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಾಫೆಡ್ ಸಂಸ್ಥೆ, ಎನ್ಸಿಸಿಎಫ್ ಸಂಸ್ಥೆ ಹಾಗೂ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ" ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು. ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಪೂರ್ವದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರಬಾರದು" ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಾಸಿವೆ, ಕಡಲೆ, ಗೋಧಿ ಸೇರಿದಂತೆ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.