ETV Bharat / state

ಪ್ರಧಾನಮಂತ್ರಿ ಆವಾಸ್ ಯೋಜನೆ ಟೀಕಿಸಿದ ಸಿಎಂ ಸಿದ್ದರಾಮಯ್ಯ - CM Siddaramaiah Campaign

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಇಂದು ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದರು.

election campaign meeting
ಚುನಾವಣೆ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ ಮಾತನಾಡಿದರು..
author img

By ETV Bharat Karnataka Team

Published : Apr 1, 2024, 10:54 PM IST

ಮೈಸೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ ಜಿಎಸ್‌ಟಿ ರೂಪದಲ್ಲಿ ವಸೂಲಿ ಮಾಡುವ ಹಣದ ಲೆಕ್ಕಾಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಹಿರಂಗ ಸಭೆಯಲ್ಲಿ ಸಾರ್ವಜನಿಕರ ಮುಂದೆ ತಮ್ಮದೇ ಶೈಲಿಯಲ್ಲಿ ಮಂಡಿಸಿದರು.

ಈ ಯೋಜನೆಯಲ್ಲಿ ಪ್ರತೀ ಫಲಾನುಭವಿಗೆ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ ಒಂದು ಲಕ್ಷ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕು. ಆಗ ಅವರಿಗೆ ಮನೆ ಸಿಗುತ್ತದೆ. ಆದರೆ ಕೇಂದ್ರ ಸರ್ಕಾರ ಪ್ರತೀ ಮನೆಗೆ 18% ಜಿಎಸ್‌ಟಿ ವಸೂಲಿ ಮಾಡುತ್ತದೆ. ಅಂದರೆ ಪ್ರತೀ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು ಜಿಎಸ್‌ಟಿ ಹೆಸರಲ್ಲಿ ಕೇಂದ್ರ ಸರ್ಕಾರ ವಾಪಸ್ ಪಡೆದುಕೊಳ್ಳುತ್ತದೆ.

ಅಂದ್ರೆ ಒಂದೂವರೆ ಲಕ್ಷ ರೂಪಾಯಿ ಸಹಾಯಧನ ಕೊಟ್ಟು, ಅದರಲ್ಲಿ ಒಂದು ಲಕ್ಷದ 38 ಸಾವಿರ ರೂಪಾಯಿ ವಾಪಸ್ ವಸೂಲಿ ಮಾಡಿದರೆ ಕೇಂದ್ರ ಸರ್ಕಾರ ಎಷ್ಟು ಕೊಟ್ಟಂಗಾಯ್ತು? ಬರೀ 12 ಸಾವಿರ ರೂಪಾಯಿ ಮಾತ್ರ. ಬರೀ 12 ಸಾವಿರ ಕೊಟ್ಟು ಅದಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿದ್ದಾರೆ ಎಂದು ಹೇಳಿದರು.

ಕೊಳೆಗೇರಿ ನಿವಾಸಿಗಳಿಂದಲೂ 18% GST ಸುಲಿಗೆ ಮಾಡುವ ಈ ಕ್ರಮ ನನಗೆ ಬಹಳ ಬೇಸರ ಆಯಿತು. ಹೀಗಾಗಿ ಪ್ರತೀ ಫಲಾನುಭವಿಗಳು ಕಟ್ಟಬೇಕಿದ್ದ ಅವರ ಪಾಲಿನ 3 ಲಕ್ಷ 80 ಸಾವಿರ ರೂಪಾಯಿಯಲ್ಲಿ ಒಂದು ಲಕ್ಷ ಮಾತ್ರ ಅವರಿಂದ ಕಟ್ಟಿಸಿಕೊಂಡು ಉಳಿದ ಹಣವನ್ನು ನಮ್ಮ ಸರ್ಕಾರದಿಂದಲೇ ಕಟ್ಟಿಸಲು ನಾನು ನಿರ್ಧರಿಸಿದೆ ಎಂದರು.

ಹೀಗಾಗಿ ಪ್ರತೀ ಕೊಳೆಗೇರಿ ಮನೆಗೆ 4 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ನಮ್ಮ ರಾಜ್ಯ ಸರ್ಕಾರ ಕಟ್ಟುತ್ತೆ. ಕೇಂದ್ರ ಸರ್ಕಾರದ ಪಾಲು ಕೇವಲ 12 ಸಾವಿರ ರೂಪಾಯಿ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ. ಇದು ವಂಚನೆ ಅಲ್ವಾ? ಇದು ಅನ್ಯಾಯ ಅಲ್ವಾ? ಈ ಅನ್ಯಾಯಕ್ಕೆ ಮೋದಿ ಸರ್ಕಾರಕ್ಕೆ ಮತ ಹಾಕಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಹಾಗೆಯೇ ರಾಜ್ಯದಿಂದ ಕೇಂದ್ರಕ್ಕೆ ಹೋಗುವ ತೆರಿಗೆ ಹಣ 4 ಲಕ್ಷ ಕೋಟಿ. ಇದರಲ್ಲಿ ರಾಜ್ಯಕ್ಕೆ ವಾಪಸ್ ಬರುವುದು ಕೇವಲ 53 ಸಾವಿರ ಕೋಟಿ. ಇದು ಅನ್ಯಾಯ ಅಲ್ವಾ? ಈ ಅನ್ಯಾಯಕ್ಕೆ ಬಿಜೆಪಿಗೆ ಮತ ಹಾಕ್ಬೇಕಾ ?. ರಾಜ್ಯಕ್ಕೆ ಪ್ರವಾಹ ಬಂದಾಗ ಮೋದಿ ಬರಲಿಲ್ಲ. ರಾಜ್ಯಕ್ಕೆ ಬರವಿದ್ದಾಗ ಮೋದಿ ಸಹಾಯ ಮಾಡಲಿಲ್ಲ. ಈಗ ಓಟು ಕೇಳೋಕೆ ಮಾತ್ರ ಬರುತ್ತಿದ್ದಾರೆ. ಈಗ ಮೋದಿಗೆ ಓಟು ಹಾಕ್ಬೇಕಾ ಎಂದು ವ್ಯಂಗ್ಯವಾಗಿ ಟೀಕಿಸಿದರು.

ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿ ಕೇಂದ್ರದ ಮೋದಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಬಲಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.‌

ಇದನ್ನೂಓದಿ: ಶಿವಮೊಗ್ಗದಲ್ಲಿ ಗೆದ್ದು, ನರೇಂದ್ರ ಮೋದಿಯವರ ಕೈ ಎತ್ತುವೆ: ಕೆ.ಎಸ್.ಈಶ್ವರಪ್ಪ - K S Eshwarappa

ETV Bharat Logo

Copyright © 2024 Ushodaya Enterprises Pvt. Ltd., All Rights Reserved.