ರಾಮನಗರ: ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ ಗ್ರಾಮದ ನಿವಾಸದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಗೌರಿ, ಗಣೇಶ ಹಬ್ಬವನ್ನು ಆಚರಿಸಿದರು.
ಶ್ರೀ ಗಣೇಶ ಚತುರ್ಥಿಯ ಹಬ್ಬದ ಅಂಗವಾಗಿ ಬಿಡದಿಯ ತೋಟದಲ್ಲಿ ವಿಘ್ನನಿವಾರಕ ವಿನಾಯಕನ ಪೂಜೆ ನೆರವೇರಿಸಲಾಯಿತು. #GaneshChaurthi pic.twitter.com/qN0xLi4N1r
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 7, 2024
ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಕುಟುಂಬ ಸಮೇತರಾಗಿ ಸ್ವಗ್ರಾಮದಲ್ಲಿ ಗಣೇಶ ಹಬ್ಬವನ್ನು ಸಂಭ್ರಮಿಸಿದರು. ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿಯ ಶುಭಾಶಯ ಕೋರಿದರು. ಪ್ರಥಮ ಪೂಜಿತ ವಿನಾಯಕನು ಪ್ರತಿಯೊಬ್ಬರ ಕಷ್ಟಗಳನ್ನು ನಿವಾರಿಸಿ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದರು.
ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
— H D Devegowda (@H_D_Devegowda) September 7, 2024
ವಿಘ್ನೇಶ್ವರನ ಅನುಗ್ರಹದಿಂದ ಸಮಸ್ತರಿಗೂ ಒಳ್ಳೆಯದಾಗಲಿ ಹಾಗೂ ಎಲ್ಲೆಡೆ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ.
ಮಣ್ಣಿನ ಮೂರ್ತಿಗಳನ್ನು ಪೂಜಿಸುವ ಮೂಲಕ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. pic.twitter.com/GbDuMoimXQ
ಶುಭ ಕೋರಿದ ದೇವೇಗೌಡರು: 'ನಾಡಿನ ಸಮಸ್ತ ಜನತೆಗೆ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನೇಶ್ವರನ ಅನುಗ್ರಹದಿಂದ ಸಮಸ್ತರಿಗೂ ಒಳ್ಳೆಯದಾಗಲಿ. ಎಲ್ಲೆಡೆ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುತ್ತೇನೆ. ಮಣ್ಣಿನ ಮೂರ್ತಿಗಳನ್ನು ಪೂಜಿಸುವ ಮೂಲಕ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ' ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ X ಪೋಸ್ಟ್ ಮೂಲಕ ಗಣೇಶನ ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಬೆಂಗಳೂರಿನ ಜೆ.ಪಿ ನಗರ ನಿವಾಸದಲ್ಲಿ ಕುಟುಂಬ ಸಮೇತರಾಗಿ ಗೌರಿ ಗಣೇಶ ಹಬ್ಬವನ್ನು ಆಚರಿಸಿದೆವು.
— Nikhil Kumar (@Nikhil_Kumar_k) September 7, 2024
ಮತೊಮ್ಮೆ ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಚತುರ್ಥಿಯ ಶುಭಾಶಯಗಳು. ಪ್ರಥಮ ಪೂಜಿತ ವಿನಾಯಕನನು ಪ್ರತಿಯೊಬ್ಬರ ಕಷ್ಟಗಳನ್ನು ನಿವಾರಿಸಿ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಮತ್ತು ಆಯುರಾರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.… pic.twitter.com/S5IBFOVHDw
'ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ವಿಘ್ನೇಶ್ವರನು ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಆದಷ್ಟು ಮಣ್ಣಿನ ಗಣಪನನ್ನು ಪೂಜೆ ಮಾಡುವುದರೊಂದಿಗೆ ನೆಲ, ಜಲ, ಪರಿಸರ ಸಂರಕ್ಷಣೆಯ ಸಂಕಲ್ಪವನ್ನ ಮಾಡೋಣ' ಎಂದು X ಮೂಲಕ ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ: ಸತ್ಯಗಣಪತಿ ದೇವಸ್ಥಾನದಲ್ಲಿ ವೈಭವದ ರೈತ ಗಣೇಶೋತ್ಸವ: ತರಕಾರಿ, ಹೂಗಳಿಂದ ಸಿಂಗಾರ - Sathyaganapati Temple