ETV Bharat / state

ರಾಮಮಂದಿರ ನಿರ್ಮಾಣದಿಂದ ಭಾರತೀಯರ ಶತ ಶತಮಾನಗಳ ಕನಸು ನನಸು: ಕುಮಾರಸ್ವಾಮಿ - ayodhya

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಖುಷಿ ಹಂಚಿಕೊಂಡಿದ್ದಾರೆ.

Former CM H D kumaraswamy
ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ
author img

By ETV Bharat Karnataka Team

Published : Jan 22, 2024, 11:24 AM IST

Updated : Jan 22, 2024, 11:45 AM IST

ಬೆಂಗಳೂರು: "ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಗೊಂಡು, ಇಂದು ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತಿದೆ. ಈ ಮೂಲಕ ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗುತ್ತಿದೆ" ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

  • || ಜೈ ಶ್ರೀರಾಮ್ ||

    ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ಶ್ರೀ @narendramodi ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ… pic.twitter.com/dQEpBWjnC8

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 22, 2024 " class="align-text-top noRightClick twitterSection" data=" ">

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಅವರು, "ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ" ಎಂದು ತಿಳಿಸಿದ್ದಾರೆ.

"ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.

ಇಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು, ಭಾನುವಾರವೇ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅವರು ತಂದೆ ಹೆಚ್​.ಡಿ.ದೇವೇಗೌಡ, ತಾಯಿ ಚನ್ನಮ್ಮ ಹಾಗೂ ಪುತ್ರ ನಿಖಿಲ್​ ಕುಮಾರಸ್ವಾಮಿ ಅವರೊಂದಿಗೆ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದ್ದಾರೆ. ಈ ಬಗ್ಗೆಯೂ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿದ್ದರು.

ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಿರುವ ನಿಖಿಲ್​: ನಟ ಹಾಗೂ ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಎಕ್ಸ್​ ಪೋಸ್ಟ್​ ಮೂಲಕ ಹೆಚ್​ಡಿಕೆ ತಮ್ಮ ಮಗನಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. "ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್​ಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ನೆರವೇರುತ್ತಿರುವ ಈ ಪುಣ್ಯಕ್ಷಣದಲ್ಲಿಯೇ ನಿಖಿಲ್‌ ಶ್ರೀರಾಮ ಸನ್ನಿಧಿಯಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾನೆ. ಇದು ಅವರ ಅದೃಷ್ಟವೇ ಹೌದು. ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬಹುದಾದ ಸುಸಂದರ್ಭಕ್ಕೆ ಅವನೂ ಸಾಕ್ಷಿಯಾಗುತ್ತಿದ್ದಾನೆ. ಅಲ್ಲದೆ; ನಾಡಿನ ಜನರ ಸಂಕಷ್ಟಕ್ಕೆ ಮಿಡಿಯುವ, ನೊಂದವರಿಗೆ ನಿಸ್ವಾರ್ಥ ಮನಸ್ಸಿನಿಂದ ಸೇವೆ ಮಾಡುವ ಅವಕಾಶ ನಿಖಿಲ್​ಗೆ ದೊರೆಯಲಿ. ಆ ರಾಮದೇವರ ಕೃಪೆ ಸದಾ ಅವರ ಮೇಲಿರಲಿ ಎಂದು ಹರಸುತ್ತೇನೆ." ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಮ ಲಲ್ಲಾ ಮೂರ್ತಿ ಪ್ರಾಣ ಪ್ರತಿಪ್ಠಾಪನೆ; ಅಯೋಧ್ಯೆಯತ್ತ ದೇವೇಗೌಡ ಕುಟುಂಬ, ಕುಂಬ್ಳೆ ಸೇರಿ ಗಣ್ಯರ ದಂಡು

Last Updated : Jan 22, 2024, 11:45 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.