ETV Bharat / state

ದ್ವಿತೀಯ ಪಿಯುಸಿ - 2 ಪರೀಕ್ಷೆಯ ಫಲಿತಾಂಶದ ನಂತರವೇ ಸಿಇಟಿ ರಿಸಲ್ಟ್​​​ : ಕೆಇಎ ಸ್ಪಷ್ಟನೆ - CET result - CET RESULT

ಸಿಇಟಿ ಫಲಿತಾಂಶವನ್ನು ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶದ ನಂತರವೇ ಪ್ರಕಟಿಸಲಾಗುವುದು ಎಂದು ಕೆಇಎ ಸ್ಪಷ್ಟನೆ ನೀಡಿದೆ.

Kea
ಕೆಇಎ (ETV Bharat)
author img

By ETV Bharat Karnataka Team

Published : May 20, 2024, 3:12 PM IST

ಬೆಂಗಳೂರು : ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶಗಳು ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವುದರ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಇದು ಸತ್ಯಕ್ಕೆ ದೂರವಾದುದು. ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ ಶೇ.50ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರ‍್ಯಾಂಕ್‌ ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದು ಮೊದಲಿನಿಂದಲೂ ಪಾಲಿಸುತ್ತಿರುವ ನಿಯಮ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣಿಸಬೇಕಾಗುತ್ತದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ.

ಬಿಎಸ್ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದೆ. ಅದರ ಫಲಿತಾಂಶ ಕೂಡ ಬರಬೇಕಾಗುತ್ತದೆ. ಇದು ಸಿಇಟಿ ರ‍್ಯಾಂಕ್‌ಗೂ ಅನಿವಾರ್ಯ ಎಂದು ಅವರು ವಿವರಣೆ ನೀಡಿದ್ದಾರೆ.

ಇದನ್ನೂ ಓದಿ : ಸಿಇಟಿ ಮರು ಪರೀಕ್ಷೆ ನಡೆಸಲ್ಲ, ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಗೆ ಕೃಪಾಂಕ: ಉನ್ನತ ಶಿಕ್ಷಣ ಇಲಾಖೆ ಸ್ಪಷ್ಟನೆ - NO RE EXAMINATION FOR CET

ETV Bharat Logo

Copyright © 2025 Ushodaya Enterprises Pvt. Ltd., All Rights Reserved.