ETV Bharat / state

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವಧಿ ಫೆ. 29ರವರೆಗೆ ವಿಸ್ತರಣೆ - ಹಿಂದುಳಿದ ವರ್ಗಗಳ ಆಯೋಗ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಫೆಬ್ರವರಿ 29 ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಯಪ್ರಕಾಶ್ ಹೆಗ್ಡೆ
ಜಯಪ್ರಕಾಶ್ ಹೆಗ್ಡೆ
author img

By ETV Bharat Karnataka Team

Published : Jan 31, 2024, 10:30 PM IST

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 29ರ ವರೆಗೆ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ವಿಸ್ತರಣೆ ಮಾಡಲಾಗಿದೆ. ಅದೇ ರೀತಿ ಆಯೋಗದ ಸದಸ್ಯರುಗಳನ್ನೂ ಸಹ ಮುಂದುವರಿಸಲಾಗಿದೆ.

ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಫೆ. 29ರವರೆಗೆ ವಿಸ್ತರಣೆ

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ 2023ರ ನವೆಂಬರ್‌ನಲ್ಲಿ ಮುಕ್ತಾಯವಾಗಿತ್ತು. ನಂತರ ಎರಡು ತಿಂಗಳವರೆಗೆ ಅವರ ಅಧಿಕಾರಾವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದರ ಪ್ರಕಾರ, ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹಾಗೂ ಐವರು ಸದಸ್ಯರ ಅಧಿಕಾರವನ್ನು 2024ರ ಜನವರಿ 31ರವರೆಗೆ ಮುಂದುವರಿಸಲಾಗಿತ್ತು. ಇಂದು (ಜನವರಿ 31ಕ್ಕೆ) ಅವಧಿ ಮುಕ್ತಾಯವಾಗಿದೆ. ಈ ಹಿನ್ನೆಲೆ ಅವಧಿ ವಿಸ್ತರಣೆ ಮಾಡಿ ಸರ್ಕಾರ ಆದೇಶ ಮಾಡಿದೆ.

ಜಾತಿ ಗಣತಿ ವರದಿಯನ್ನು ಅಂತಿಮಗೊಳಿಸುವ ಸಂಬಂಧ ಫೆ‌. 15ರವರೆಗೆ ವಿಸ್ತರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗವು ಮನವಿ ಮಾಡಿತ್ತು. ಈ ಹಿನ್ನೆಲೆ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಇನ್ನು 15 ದಿನದಲ್ಲಿ ಜಾತಿ ಗಣತಿ ವರದಿಯು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ಶಾಶ್ವತ ಹಿಂದುಳಿದ ವರ್ಗದ ಆಯೋಗ ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಿದ್ದೇವೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಫೆಬ್ರವರಿ 29ರವರೆಗೆ ಅವಧಿ ವಿಸ್ತರಣೆ ಸಂಬಂಧ ಮನವಿ ಮಾಡಿದ್ದರು. ಹೀಗಾಗಿ ಕ್ರಮ ಕೈಗೊಂಡಿದ್ದೇವೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ.

ಇದನ್ನೂ ಓದಿ : ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.