ETV Bharat / state

ಗುತ್ತಿಗೆದಾರ ಸಚಿನ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ - CONTRACTOR DEATH CASE

ಗುತ್ತಿಗೆದಾರ ಸಚಿನ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಸಚಿವರನ್ನು ಬಂಧಿಸಬೇಕೆಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಾಣಸ್ವಾಮಿ ಆಗ್ರಹಿಸಿದರು.

ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ (ETV Bharat)
author img

By ETV Bharat Karnataka Team

Published : Dec 28, 2024, 5:32 PM IST

ಬೆಂಗಳೂರು: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ಖರ್ಗೆಯವರ ಅಟ್ಟಹಾಸ ಬಹಳ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಲಬುರಗಿಗೆ ತೆರಳಿದ್ದೆ. ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಇದ್ದುದರಿಂದ ನಾನು ಅಲ್ಲಿಂದ ವಾಪಸ್ ಬರಬೇಕಾಯಿತು. ಕಲಬುರಗಿಯಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಎಲ್ಲದರಲ್ಲೂ ತಮಗೆ ಬೇಕಾದವರನ್ನು ಸಹಚರರನ್ನಾಗಿ ಜೋಡಿಸಿಕೊಂಡು ಎಲ್ಲ ರೀತಿಯ ದಂಧೆಗಳಲ್ಲಿ ತೊಡಗಿದ್ದಾರೆ ಎಂದು ದೂರಿದರು.

ಛಲವಾದಿ ನಾರಾಯಣಸ್ವಾಮಿ (ETV Bharat)

ಕಾಂಟ್ರ್ಯಾಕ್ಟ್ ವಿಚಾರಕ್ಕೂ ಬೇಕಾದವರ ನೇಮಕ ಆಗಿದೆ. ಇದೇ ಕಾರಣಕ್ಕೂ ಸಚಿನ್ ಅವರ ಆತ್ಮಹತ್ಯೆ ಆಗಿದೆ ಎಂದು ಆರೋಪಿಸಿದರು. ಈ ಕುರಿತು ಉನ್ನತ ತನಿಖೆ ಆಗಲೇಬೇಕು. ಪ್ರಿಯಾಂಕ್​ ಖರ್ಗೆ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟು, ತಕ್ಷಣವೇ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಇಲ್ಲವಾದರೆ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮೃತ ಸಚಿನ್ ಅವರು 7 ಪುಟಗಳ ಡೆತ್ ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅದರಲ್ಲಿ ಬೇರೆಯವರನ್ನು ಸುಪಾರಿ ಕೊಟ್ಟು ಸಾಯಿಸುವ ವಿಚಾರವೂ ಪ್ರಸ್ತಾಪವಾಗಿದೆ ಎಂದು ದೂರಿದರು.

ರಿಪಬ್ಲಿಕ್ ಆಫ್ ಕಲಬುರಗಿ ವ್ಯವಸ್ಥೆ: ಅದು ರಿಪಬ್ಲಿಕ್ ಆಫ್ ಕಲಬುರಗಿ ಆಗಿದೆ. ಕರ್ನಾಟಕದ ವ್ಯವಸ್ಥೆಯೇ ಬೇರೆ, ಕಲಬುರಗಿಯ ವ್ಯವಸ್ಥೆಯೇ ಬೇರೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಪೊಲೀಸರು ಕೂಡ ಅಲ್ಲಿ ಪ್ರಿಯಾಂಕ್​ ಖರ್ಗೆಯವರು ಹೇಳಿದ್ದೇ ಆಡಳಿತ ಎಂಬಂತೆ ನಡೆದುಕೊಳ್ಳುತ್ತಾರೆ. ಅಲ್ಲಿ ಖರ್ಗೆ ಮನೆತನದ ದೊಡ್ಡ ಪಾರುಪತ್ಯ ನಡೆದಿದೆ. ಬೇರೆ ಯಾರಿಗೂ ಮಾತನಾಡಲು ಅವಕಾಶ ಇಲ್ಲ; ವಿಶೇಷವಾಗಿ ದಲಿತ ಸಮುದಾಯಗಳು ಅವರ ವಿರುದ್ಧ ಮಾತನಾಡಿದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ. ವಿರುದ್ಧ ಮಾತನಾಡಿದವರ ಮನೆ ಮುಂದೆ ಪೊಲೀಸರು ಇರುತ್ತಾರೆ ಎಂದು ಹೇಳಿದರು.

ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ತಂದು ನಿಲ್ಲಿಸಲಾಗಿದೆ: ಪಿ ರಾಜೀವ್

ಸಾರಿಗೆ ಇಲಾಖೆಯನ್ನು ಸಮಾಧಿ ಮಾಡುವ ಮಟ್ಟಕ್ಕೆ ಈ ಸರ್ಕಾರ ತಂದು ನಿಲ್ಲಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಕಿಡಿಕಾರಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾರಿಗೆ ಇಲಾಖೆ ನೌಕರರು ನಾಳೆಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಸಾರಿಗೆ ಇಲಾಖೆ ನೌಕರರ ಜೊತೆಗೆ ಬಿಜೆಪಿ ನಿಲ್ಲಲಿದೆ. ಸಚಿವರಿಗೆ ತಮ್ಮ ಇಲಾಖೆಯ ಆರ್ಥಿಕ ಸ್ಥಿತಿಗತಿ ಅರ್ಥವಾಗದಿರುವುದೇ ದುರಂತ ಎಂದು ಟೀಕಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ (ETV Bharat)

ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಪ್ರಾಮಾಣಿಕ ಅಧಿಕಾರಿಗಳು ಶೇಖರಿಸಿಟ್ಟ ಆಸ್ತಿಯನ್ನು ಮಾರಾಟ ಮಾಡಲು ಈ ಸರ್ಕಾರ ಹೊರಟಿದೆ.
ಸಿದ್ದರಾಮಯ್ಯನವರು ಜಾತ್ರೆ ಮಾಡುತ್ತಲೇ ಇದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಅಂದರೆ ಇಂದಿನವರೆಗೆ ಸಾರಿಗೆ ಇಲಾಖೆಗೆ ಈ ಸರ್ಕಾರವು 7,401 ಕೋಟಿ ಕೊಡಬೇಕಿದೆ. ಭವಿಷ್ಯ ನಿಧಿ ನ್ಯಾಸ ಮಂಡಳಿಗೆ 2,500 ಕೋಟಿ, ನಿವೃತ್ತ ನೌಕರರ ಬಾಕಿ 362 ಕೋಟಿ, ಸಿಬ್ಬಂದಿ ಬಾಕಿ ಪಾವತಿ, ಸರಬರಾಜುದಾರರ ಬಿಲ್ ಪಾವತಿ, ಇಂಧನ ಬಾಕಿ ಸೇರಿ 1,000 ಕೋಟಿ, ಎಂವಿಸಿ ಕ್ಲೈಮ್‍ಗಳು, ಇತರ ಬಿಲ್‍ಗಳು, ನಿವೃತ್ತ ನೌಕರರ ಪರಿಷ್ಕೃತ ಉಪ ಧನ, ರಜೆ ನಗದೀಕರಣ- 700 ಕೋಟಿ, ಒಟ್ಟು ಸಾಲದ ಬಾಕಿ ಹೊಣೆಗಾರಿಕೆ ಸೇರಿದಾಗ 5,614 ಕೋಟಿ ರೂಪಾಯಿ ಆಗುತ್ತದೆ ಎಂದು ಪಿ. ರಾಜೀವ್ ಅವರು ವಿವರ ನೀಡಿದರು.

ರಾಜ್ಯದಲ್ಲಿ ಕಾನೂನು - ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕುಟುಂಬದ ಜೊತೆ ಬಿಜೆಪಿ ನಿಲ್ಲಲಿದೆ. ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಈ ಸರ್ಕಾರ ಸಾವಿನ ಭಾಗ್ಯವನ್ನು ಕೊಟ್ಟಿದೆ. ಬಿಜೆಪಿ ಈ ಸಾವಿನ ಸಂಬಂಧ ರಾಜ್ಯಾದ್ಯಂತ ಹೋರಾಟ ನಡೆಸಲಿದೆ. ನಾಳೆ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ದೆಹಲಿಯಿಂದ ಹಿಂತಿರುಗಿದ ಬಳಿಕ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸುತ್ತೇವೆ ಎಂದು ಪಿ. ರಾಜೀವ್ ತಿಳಿಸಿದರು.

ಇದನ್ನೂ ಓದಿ: ವಿಜಯೇಂದ್ರರ ರಕ್ಷಣೆಗಾಗಿ ಮಾಣಿಪ್ಪಾಡಿ ಮಾತು ಬದಲಿಸಲು ಎಷ್ಟು 'ಆಫರ್' ಬಂದಿದೆ: ಸಚಿವ ಪ್ರಿಯಾಂಕ್​ ಖರ್ಗೆ

ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು: ಪೊಲೀಸ್, ಸಿವಿಲ್ ಡಿಫೆನ್ಸ್, ಗೃಹರಕ್ಷಕ ದಳ 11,830 ಸಿಬ್ಬಂದಿಯಿಂದ ಭದ್ರತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.