ETV Bharat / state

ಚಾಮರಾಜನಗರ: ಕಾಂಗ್ರೆಸ್ Vs ಬಿಜೆಪಿ, ಗಡಿ ಜಿಲ್ಲೆಯ ಜನರ ತೀರ್ಪಿನ ಮೇಲೆ ಎಲ್ಲರ ಚಿತ್ತ - Chamarajanagar Constituency

ಚಾಮರಾಜನಗರ ಲೋಕಸಭೆ ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಿಸುವ ನಿರೀಕ್ಷೆಯಲ್ಲಿರುವ ಬಿಜೆಪಿ ಮತ್ತು ಗಡಿ ಜಿಲ್ಲೆಯಲ್ಲಿ ಮತ್ತೆ ಅಧಿಪತ್ಯ ಸಾಧಿಸಲು ಕಸರತ್ತು ನಡೆಸಿರುವ ಕಾಂಗ್ರೆಸ್​​ ಕುರಿತು ಮತದಾರರು ನೀಡಿರುವ ತೀರ್ಪು ಜೂನ್ 4ರಂದು ಬಹಿರಂಗವಾಗಲಿದೆ.

author img

By ETV Bharat Karnataka Team

Published : Jun 2, 2024, 3:48 PM IST

ಎಸ್.ಬಾಲರಾಜು, ಸುನೀಲ್ ಬೋಸ್
ಎಸ್.ಬಾಲರಾಜು, ಸುನೀಲ್ ಬೋಸ್ (ETV Bharat)

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಬಿಜೆಪಿ ವಶದಲ್ಲಿರುವ ಕ್ಷೇತ್ರವನ್ನು ವಶಪಡಿಸಿಕೊಳ್ಳುವ ವಿಶ್ವಾಸದಲ್ಲಿ ಕೈ ಪಾಳಯ ಇದ್ದರೆ, ಕ್ಷೇತ್ರದಲ್ಲಿ ಎರಡನೇ ಬಾರಿ ಕಮಲ ಅರಳಲಿದೆ ಎಂಬುದು ಬಿಜೆಪಿಗರ ಬಲವಾದ ನಂಬಿಕೆ. ಮೋದಿ ಅಲೆ, ಸಿದ್ದರಾಮಯ್ಯ ವರ್ಚಸ್ಸಿನ ನಡುವೆ ಜಂಗಿಕುಸ್ತಿಯಿಂದಾಗಿ ಚಾಮರಾಜನಗರವೂ ಕೂಡ ಹೈವೋಲ್ಟೇಜ್ ಕ್ಷೇತ್ರವಾಗಿದೆ.

ಈ ಮೀಸಲು (ಎಸ್​​ಸಿ) ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಸ್.ಬಾಲರಾಜು, ಕಾಂಗ್ರೆಸ್​ನಿಂದ ಸಚಿವ ಹೆಚ್.ಸಿ.ಮಹಾದೇವಪ್ಪ ಪುತ್ರ ಸುನಿಲ್ ಬೋಸ್ ಹುರಿಯಾಳಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳು ಹಾಗೂ ಮೈಸೂರು ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳೂ ಸೇರಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತವೆ. ಕಾಂಗ್ರೆಸ್​ನ 7 ಹಾಗೂ ಜೆಡಿಎಸ್​​ನ ಓರ್ವ ಶಾಸಕರು ಕ್ಷೇತ್ರದಲ್ಲಿದ್ದಾರೆ. ಬಿಜೆಪಿಯ ಓರ್ವ ಶಾಸಕರೂ ಇಲ್ಲಿಲ್ಲ. ಇದರ ಜೊತೆಗೆ ಸಿದ್ದರಾಮಯ್ಯ ಅವರ ವರುಣ ಕೂಡ ಈ ಕ್ಷೇತ್ರಕ್ಕೆ ಒಳಪಡುತ್ತದೆ. ಹಾಗಾಗಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಲದಿಂದ ಈ ಬಾರಿ ಮತ್ತೆ ಕಾಂಗ್ರೆಸ್ ಮೇಲುಗೈ ಸಾಧಿಸುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ಮೋದಿ ನಾಮಬಲ ಹಾಗೂ ಸಜ್ಜನ ರಾಜಕಾರಣಿಯಾಗಿ ಬಾಲರಾಜು ಮತ ಸೆಳೆಯಲಿದ್ದಾರೆ ಅನ್ನೋದು ಬಿಜೆಪಿ ಲೆಕ್ಕಾಚಾರ.

ಎಸ್. ಬಾಲರಾಜು
ಎಸ್. ಬಾಲರಾಜು (ETV Bharat)

ಲೋಕಸಭಾ ಕಣದಲ್ಲಿ ಒಟ್ಟು 14 ಅಭ್ಯರ್ಥಿಗಳಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಕಳೆದ ಚುನಾವಣೆಯಲ್ಲಿ ಬಿಎಸ್ಪಿ ಉತ್ತಮ ಸ್ಪರ್ಧೆಯೊಡ್ಡಿದ್ದರಿಂದ ಈ ಬಾರಿ 'ಆನೆ'ಯ ಮತ ಗಳಿಕೆಯೂ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

2019ರಲ್ಲಿ ಮೊದಲ ಬಾರಿ ಅರಳಿದ ಕಮಲ: ಎರಡು ಬಾರಿ ಸಂಸದರಾಗಿದ್ದ ಆರ್.ಧ್ರುವನಾರಾಯಣ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಹಿರಿಯ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್ ಎದುರು ಸೋತಿದ್ದರು. ಇದರಿಂದಾಗಿ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಕಮಲ ಅರಳಿತ್ತು.

ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ಅವರ ಪುತ್ರರಾಗಿದ್ದು, ತಂದೆಯ ರಾಜಕೀಯ ಗರಡಿಯಲ್ಲಿ ಪಳಗಿದ್ದಾರೆ. ಉಪ ಚುನಾವಣೆಗಳಲ್ಲಿ ಪಕ್ಷದ ಜವಾಬ್ದಾರಿ ನಿರ್ವಹಿಸಿ ಮೊದಲ ಬಾರಿ ಲೋಕ ಅಖಾಡದಿಂದ ಚುನಾವಣಾ ರಾಜಕೀಯಕ್ಕೆ ಎಂಟ್ರಿ‌ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ತಂದೆಯ ವರ್ಚಸ್ಸಿನಿಂದ ಮತಗಳು ಕೈಗೆ ಬರಲಿವೆ ಎಂದು ಹೇಳಲಾಗುತ್ತಿದೆ.

ಸುನೀಲ್ ಬೋಸ್
ಸುನೀಲ್ ಬೋಸ್ (ETV Bharat)

ಇದನ್ನೂ ಓದಿ: ಬೆಳಗಾವಿ ಲೋಕಸಮರ: ಶೆಟ್ಟರ್ - ಮೃಣಾಲ್ ಮಧ್ಯೆ ಜಿದ್ದಾಜಿದ್ದಿ, ಹೇಗಿದೆ ಲೆಕ್ಕಾಚಾರ? - Belagavi Lokasabha Fight

ಇನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು 1991ರಲ್ಲಿ ಮುತ್ಸದ್ಧಿ ರಾಜಕಾರಣಿ ಎಂ.ರಾಜಶೇಖರಮೂರ್ತಿ ಅವರ ಗರಡಿಯಿಂದ ಬಂದಿದ್ದಾರೆ. ರಾಜಶೇಖರಮೂರ್ತಿ ಶಿಷ್ಯನಾಗಿ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಬಂದು ಕಾಂಗ್ರೆಸ್​​ನ ವಿವಿಧ ಘಟಕಗಳಲ್ಲಿ ಕಾರ್ಯನಿರ್ವಹಿಸಿದ್ದರು. 1999ರಲ್ಲಿ ರಾಜಶೇಖರಮೂರ್ತಿ ಜೊತೆ ಬಿಜೆಪಿಗೆ ಸೇರ್ಪಡೆಗೊಂಡು ಕೊಳ್ಳೇಗಾಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 5,421 ಮತಗಳಿಂದ ಸೋಲುಂಡಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಟಿಕೆಟ್ ತಪ್ಪಿದ್ದರಿಂದ 2004ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಮೊದಲ ಬಾರಿಗೆ ಶಾಸಕರಾದರು. 2013ರಲ್ಲಿ ಯಡಿಯೂರಪ್ಪ ಅವರನ್ನು ಹಿಂಬಾಲಿಸಿ ಕೆಜೆಪಿ ಸೇರಿದ ಬಳಿಕ ಮತ್ತೇ ಚುನಾವಣೆಗೆ ನಿಂತು ಸೋತರು. ನಂತರ 2013ರಲ್ಲಿ ಕಾಂಗ್ರೆಸ್​ಗೆ ವಾಪಸಾದರು. 2023ರ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಹೊರಬಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ, ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ.

ಈ ಸಲ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶೇ 75.18ರಷ್ಟು ಮತದಾನವಾಗಿದೆ. ಈ ಪೈಕಿ 6,82,961 ಪುರುಷರು, 6,82,952 ಮಹಿಳೆಯರು, 31 ಇತರೆ ಸೇರಿದಂತೆ ಒಟ್ಟು 13,65,944 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದಾಗಿ ಮಹಿಳೆಯರು 'ಕೈ' ಹಿಡಿಯುವ ಸಾಧ್ಯತೆ ಹೆಚ್ಚಿದೆ. ಇಲ್ಲದೇ ಹೋದರೆ ಮೋದಿ ಅಲೆಯಲ್ಲಿ ಮತ್ತೆ ಬಿಜೆಪಿ ಮುನ್ನಡೆ ಸಾಧಿಸಬಹುದು ಎಂಬ ಲೆಕ್ಕಾಚಾರ ಕ್ಷೇತ್ರದಲ್ಲಿದೆ. 2019ರಲ್ಲಿ ಇದೇ ಕ್ಷೇತ್ರದಲ್ಲಿ ಶೇ 69.60ರಷ್ಟು ಮತದಾನವಾಗಿತ್ತು. ಈ ಬಾರಿ ಸುಮಾರು ಶೇ 6ರಷ್ಟು ಹೆಚ್ಚುವರಿ ಮತದಾನವಾಗಿದೆ. ಈ ಮತ ಕರ್ನಾಟಕದ ಗ್ಯಾರಂಟಿಗಳ ಪರ ಬಿದ್ದಿದೆಯೋ ಅಥವಾ ಮೋದಿ ಗ್ಯಾರಂಟಿಯತ್ತ ಒಲವು ಹೊಂದಿದೆಯೋ ಎಂಬುದೇ ಈಗ ಯಕ್ಷ ಪ್ರಶ್ನೆ.

ಇದನ್ನೂ ಓದಿ: ಹೊಸ ಅಭ್ಯರ್ಥಿಗಳ ಮಧ್ಯೆ ಹಣಾಹಣಿ; ಬಿಜೆಪಿ ಕೋಟೆಯಲ್ಲಿ ಮತದಾರರ ಗುಟ್ಟೇನು? - DAKSHIN KANNADA CONSTITUENCY

ETV Bharat Logo

Copyright © 2024 Ushodaya Enterprises Pvt. Ltd., All Rights Reserved.