ETV Bharat / state

ಮುಸ್ಲಿಂ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೋರಿದ ಚಂದ್ರಶೇಖರನಾಥ ಸ್ವಾಮೀಜಿ - CHANDRASHEKHAR SWAMIJI APOLOGIZES

ಫ್ರೀಡಂ ಪಾರ್ಕ್​ನಲ್ಲಿ ನಡೆದ ರೈತ ಘರ್ಜನೆ ರ‍್ಯಾಲಿಯಲ್ಲಿ ನೀಡಿದ್ದ ಹೇಳಿಕೆ ಕುರಿತಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮಿಗಳು ಕ್ಷಮೆ ಕೋರಿದ್ದಾರೆ.

chandrashekharnath swamiji
ಕುಮಾರ ಚಂದ್ರಶೇಖರನಾಥ ಸ್ವಾಮೀಜಿ (ETV Bharat)
author img

By ETV Bharat Karnataka Team

Published : Nov 27, 2024, 10:39 PM IST

ಬೆಂಗಳೂರು: ''ಮುಸ್ಲಿಂ ಸಮುದಾಯದ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕು'' ಎಂಬ ಹೇಳಿಕೆಯು ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಈ ಕುರಿತಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮಿಗಳು ಕ್ಷಮೆ ಕೋರಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ವಿಷಾದ ವ್ಯಕ್ತಪಡಿಸಿರುವ ಸ್ವಾಮೀಜಿಯವರು, "ಮುಸ್ಲಿಮರು ಕೂಡ ಈ ದೇಶದ ಪ್ರಜೆಗಳು. ಎಲ್ಲರಂತೆ ಅವರಿಗೂ ಮತದಾನದ ಹಕ್ಕಿದೆ. ನಿನ್ನೆಯ ನನ್ನ ಹೇಳಿಕೆಯಿಂದ ನಮ್ಮ ಮುಸ್ಲಿಂ ಬಾಂಧವರಿಗೆ ನೋವಾಗಿದ್ದರೆ, ಅದಕ್ಕಾಗಿ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ" ಎಂದಿದ್ದಾರೆ.

''ತಮ್ಮ ಹೇಳಿಕೆಯು ಯಾವುದೇ ಸಮುದಾಯವನ್ನು ಗುರಿಯಾಗಿಸುವ ಉದ್ದೇಶ ಹೊಂದಿಲ್ಲ, ಆದರೆ ವಕ್ಫ್ ಆಸ್ತಿಗಳ ದುರುಪಯೋಗವನ್ನು ಪರಿಹರಿಸುವ ಗುರಿ ಹೊಂದಿದೆ'' ಎಂದು ಸ್ಪಷ್ಟಪಡಿಸಿರುವ ಸ್ವಾಮೀಜಿ, ''ಒಕ್ಕಲಿಗ ಸಮುದಾಯ ಎಲ್ಲರನ್ನೂ ಒಳಗೊಳ್ಳುವ ಮತ್ತು ಸಾಮರಸ್ಯದ ಸ್ವಭಾವಕ್ಕೆ ಒತ್ತು ನೀಡುತ್ತದೆ. ನಮ್ಮ ಮಠವು ಐತಿಹಾಸಿಕವಾಗಿ ಮುಸ್ಲಿಮರು ಮತ್ತು ಇತರ ಧರ್ಮಗಳೊಂದಿಗೆ ಸೌಹಾರ್ದ ಸಂಬಂಧ ಹೊಂದಿದೆ'' ಎಂದು ಹೇಳಿದ್ದಾರೆ.

"ನಾವು ಯಾವಾಗಲೂ ಎಲ್ಲ ಧರ್ಮದ ಜನರನ್ನು ಸಮಾನವಾಗಿ ಕಾಣುತ್ತೇವೆ. ಮುಸ್ಲಿಮರು ಆಗಾಗ್ಗೆ ನಮ್ಮ ಮಠಕ್ಕೆ ಭೇಟಿ ನೀಡುತ್ತಾರೆ. ಮತ್ತು ಅವರ ಸಾಮಾಜಿಕ ಕಾರ್ಯಗಳಲ್ಲಿ ನಾವು ಸಕ್ರಿಯವಾಗಿ ಭಾಗವಹಿಸುತ್ತೇವೆ. ಯಾವುದೇ ಸಮುದಾಯದ ಬಗ್ಗೆ ಅಸಹಿಷ್ಣುತೆ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಕ್ಕೆ ಕಾರಣವಾಗಿದ್ದ ಸ್ವಾಮಿಗಳ ಹೇಳಿಕೆ: ವಕ್ಫ್ ಮಂಡಳಿಯಿಂದ ರೈತರ ಭೂಮಿಗಳ ಕಬಳಿಕೆ ಆರೋಪದ ವಿಚಾರವಾಗಿ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಕರ್ನಾಟಕ ಘಟಕದ ವತಿಯಿಂದ ಇಂದು (ಮಂಗಳವಾರ) ಫ್ರೀಡಂ ಪಾರ್ಕ್​ನಲ್ಲಿ ರೈತ ಘರ್ಜನೆ ರ‍್ಯಾಲಿಯಲ್ಲಿ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ವಕ್ಫ್ ಕಾಯ್ದೆ ವಿರೋಧಿಸಿ ರೈತ ಘರ್ಜನೆ ರ‍್ಯಾಲಿ: ಮಠಾಧೀಶರ ಬೆಂಬಲ: ವಿವಾದಕ್ಕೆ ಕಾರಣವಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.