ETV Bharat / state

ಪ್ರಯಾಣಿಕರೇ ಗಮನಿಸಿ: ನೈರುತ್ಯ ರೈಲ್ವೆ ಪ್ರಮುಖ ರೈಲುಗಳ ಸಂಚಾರದಲ್ಲಿ ಬದಲಾವಣೆ - South Western Railway

ವಿವಿಧೆಡೆ ಕಾಮಗಾರಿ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆಯ ಪ್ರಮುಖ ರೈಲುಗಳ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ.

SOUTH WESTERN RAILWAY
ರೈಲ್ವೆ ನಿಲ್ದಾಣ (ETV Bharat)
author img

By ETV Bharat Karnataka Team

Published : Jul 24, 2024, 7:30 AM IST

ಹುಬ್ಬಳ್ಳಿ: ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್-64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆಯ ವಿವಿಧ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಕೆಲ ರೈಲುಗಳನ್ನು ರದ್ದು, ಭಾಗಶಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗುತ್ತಿದೆ.

8 ರೈಲುಗಳ ಸಂಚಾರ ರದ್ದು:

ಈ ಕೆಳಗಿನ ರೈಲುಗಳ ಸಂಚಾರ ಆಗಸ್ಟ್ 8 ಮತ್ತು 15ರಂದು ತಾತ್ಕಾಲಿಕವಾಗಿ 2 ದಿನ ರದ್ದು ಮಾಡಲಾಗುತ್ತಿದೆ.

1. ರೈಲು ಸಂಖ್ಯೆ 07346 ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್.

2. ರೈಲು ಸಂಖ್ಯೆ 07328 ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್.

3. ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್.

4. ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್.

5. ರೈಲು ಸಂಖ್ಯೆ 06576 ತಮಕೂರು-ಕೆಎಸ್ಆರ್ ಬೆಂಗಳೂರು ಮೆಮು ಸ್ಪೆಷಲ್.

6. ರೈಲು ಸಂಖ್ಯೆ 06575 KSR ಬೆಂಗಳೂರು-ತಮುಕೂರು ಮೆಮು ಸ್ಪೆಷಲ್.

7. ರೈಲು ಸಂಖ್ಯೆ 16579 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್.

8. ರೈಲು ಸಂಖ್ಯೆ 16580 ಶಿವಮೊಗ್ಗ ಟೌನ್-ಯಶವಂತಪುರ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್.

5 ರೈಲುಗಳ ಸಂಚಾರ ಭಾಗಶಃ ರದ್ದು:

ಆಗಸ್ಟ್ 8 ಮತ್ತು 15ರಂದು ಈ ಕೆಳಗಿನ ರೈಲು ಸಂಚಾರವನ್ನು ತಾತ್ಕಾಲಿಕವಾಗಿ 2 ದಿನ ಭಾಗಶಃ ರದ್ದುಪಡಿಸಲಾಗುತ್ತಿದೆ.

1. ರೈಲು ಸಂಖ್ಯೆ 06571 ಕೆಎಸ್ಆರ್ ಬೆಂಗಳೂರು-ತುಮಕೂರು ಮೆಮು ವಿಶೇಷ ರೈಲನ್ನು ಹಿರೇಹಳ್ಳಿ-ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಹಿರೇಹಳ್ಳಿಯಲ್ಲಿ ಕೊನೆಗೊಳ್ಳುತ್ತದೆ.

2. ರೈಲು ಸಂಖ್ಯೆ 06572 ತುಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು ತುಮಕೂರು-ಹಿರೇಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಹಿರೇಹಳ್ಳಿಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.

3. ರೈಲು ಸಂಖ್ಯೆ 20652 ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಅರಸೀಕೆರೆಯಲ್ಲಿಯೇ ಕೊನೆಗೊಳ್ಳುತ್ತದೆ.

4. ರೈಲು ಸಂಖ್ಯೆ 12726 ಧಾರವಾಡ-ಕೆಎಸ್‌ಆರ್ ಬೆಂಗಳೂರು ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ಅರಸೀಕೆರೆ-ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಹಾಗೂ ಅರಸೀಕೆರೆಯಲ್ಲಿ ಕೊನೆಗೊಳ್ಳಲಿದೆ.

5. ರೈಲು ಸಂಖ್ಯೆ 12725 ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ಪ್ರೆಸ್ ಕೆಎಸ್‌ಆರ್ ಬೆಂಗಳೂರು-ಅರಸಿಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಅರಸೀಕೆರೆಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.

5 ರೈಲುಗಳ ಮಾರ್ಗ ಬದಲಾವಣೆ:

1. ಆಗಸ್ಟ್ 7 ಮತ್ತು 14ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.

2. ಆಗಸ್ಟ್ 8 ಮತ್ತು 15ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 22687 ಮೈಸೂರು-ವಾರಣಾಸಿ ದ್ವಿ-ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇರಲ್ಲ.

3. ಆಗಸ್ಟ್ 8 ಮತ್ತು 15ರಂದು ಯಶವಂತಪುರ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 82653 ಯಶವಂತಪುರ-ಜೈಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರಿನಲ್ಲಿ ನಿಗದಿತ ನಿಲುಗಡೆ ಇಲ್ಲ.

4. ಆಗಸ್ಟ್ 8 ಮತ್ತು 15ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 19668 ಮೈಸೂರು-ಉದಯಪುರ ಸಿಟಿ ಸಾಪ್ತಾಹಿಕ ಎಕ್ಸ್​ಪ್ರೆಸ್ ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ.

5. ಆಗಸ್ಟ್ 8 ಮತ್ತು 15ರಂದು ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್​ಪ್ರೆಸ್ ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇಲ್ಲ.

5 ರೈಲುಗಳ ನಿಯಂತ್ರಣ:

1. ಆಗಸ್ಟ್ 6 ಮತ್ತು 13ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16588 ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯೆ 150 ನಿಮಿಷ ನಿಯಂತ್ರಿಸಲಾಗುತ್ತದೆ.

2. ಆಗಸ್ಟ್ 8 ಮತ್ತು 15ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 12629 ಯಶವಂತಪುರ-ಹಜರತ್ ನಿಜಾಮುದ್ದೀನ್ ರೈಲನ್ನು ಮಾರ್ಗ ಮಧ್ಯೆ 50 ನಿಮಿಷ ನಿಯಂತ್ರಿಸಲಾಗುತ್ತದೆ.

3. ಆಗಸ್ಟ್ 8 ಮತ್ತು 15ರಂದು ರೈಲು ಸಂಖ್ಯೆ 20651 ಕೆಎಸ್ಆರ್ ಬೆಂಗಳೂರು-ತಾಳಗುಪ್ಪ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಮಾರ್ಗದಲ್ಲಿ 10 ನಿಮಿಷಗಳವರೆಗೆ ನಿಯಂತ್ರಿಸಲ್ಪಡುತ್ತದೆ.

4. ಆಗಸ್ಟ್ 8 ಮತ್ತು 15ರಂದು ಬೆಳಗಾವಿಯಿಂದ ಹೊರಡುವ ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗದಲ್ಲಿ 55 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.

5. ಆಗಸ್ಟ್ 8 ಮತ್ತು 15ರಂದು ರೈಲು ಸಂಖ್ಯೆ 07345 ಚಾಮರಾಜನಗರ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಮಾರ್ಗದಲ್ಲಿ 120 ನಿಮಿಷಗಳವರೆಗೆ ನಿಯಂತ್ರಿಸಲ್ಪಡಲಿದೆ.

• 2 ರೈಲುಗಳ ಸಮಯ ಮರುನಿಗದಿ:

1. ಆಗಸ್ಟ್ 8 ಮತ್ತು 15ರಂದು ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋಡಗಾಮಾ ಡೈಲಿ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ 60 ನಿಮಿಷ ತಡವಾಗಿ ಹೊರಡಲಿದೆ.

2. ಆಗಸ್ಟ್ 14ರಂದು ರೈಲು ಸಂಖ್ಯೆ 06513 ತುಮಕೂರು-ಶಿವಮೊಗ್ಗ ಟೌನ್ ಮೆಮು ಸ್ಪೆಷಲ್ ರೈಲು ತುಮಕೂರಿನಿಂದ 85 ನಿಮಿಷ ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹವಾಮಾನ ಇಲಾಖೆಯಿಂದ ಐದು ದಿನ ಕರಾವಳಿ, ಮಲೆನಾಡಿಗೆ ಹೈ ಅಲರ್ಟ್ ಘೋಷಣೆ - high alert to malnad and coastal

ETV Bharat Logo

Copyright © 2024 Ushodaya Enterprises Pvt. Ltd., All Rights Reserved.