ETV Bharat / state

ಚನ್ನಪಟ್ಟಣ ಉಪಚುನಾವಣೆ: ಶಕ್ತಿ ಪ್ರದರ್ಶನದ ಮೂಲಕದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ - ROAD SHOW

ತೆರೆದ ವಾಹನದಲ್ಲಿ ಭರ್ಜರಿ ರೋಡ್​ ಶೋ ನಡೆಸುವ ಮೂಲಕ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದರು.

NIKHIL KUMARASWAMY FILES NOMINATION
ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ (ETV Bharat)
author img

By ETV Bharat Karnataka Team

Published : Oct 25, 2024, 2:05 PM IST

ರಾಮನಗರ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡಲಾಯಿತು.

ಅದ‍್ಧೂರಿ ಮೆರವಣಿಗೆಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ್, ಮಾಜಿ ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಘಟಾನುಘಟಿ ನಾಯಕರು ಸಾಥ್ ನೀಡಿದರು. ಮೆರವಣಿಗೆಗೆ ಜನಸಾಗರವೇ ಹರಿದು ಬಂದಿತ್ತು.

ಶಕ್ತಿ ಪ್ರದರ್ಶನದ ಮೂಲಕದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ (ETV Bharat)

ಚುನಾವಣಾಧಿಕಾರಿ ಕಚೇರಿವರೆಗೆ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಲಾಯಿತು. ಮೈತ್ರಿ ನಾಯಕರ ಮೆರವಣಿಗೆಗೆ ಹಲವು ಕಲಾತಂಡಗಳು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂಯೆ ಸಾವಿರಾರು ಮಂದಿ ಸಾಕ್ಷಿಯಾದರು. ಶೇರ್ವಾ ಸರ್ಕಲ್​ನಿಂದ ತಹಶೀಲ್ದಾರ್ ಕಚೇರಿವರೆಗೆ ಜನಸಾಗರವೇ ತುಂಬಿತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

NIKHIL KUMARASWAMY FILES NOMINATION
ಬೃಹತ್ ಮೆರವಣಿಯಲ್ಲಿ ಪಾಲ್ಗೊಂಡ ಜನಸಾಗರ (ETV Bharat)

ಇದೇ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಗಾಗಲೇ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಇಂದು ನಿಖಿಲ್ ಕುಮಾರಸ್ವಾಮಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಚನ್ನಪಟ್ಟಣ ಉಪಚುನಾವಣೆ ಅಗ್ನಿ ಪರೀಕ್ಷೆಗೆ ನಿಖಿಲ್ ಕುಮಾರಸ್ವಾಮಿ ಎಂಟ್ರಿಯಾಗಿದ್ದು ಮುಂಬರುವ ದಿನಗಳಲ್ಲಿ ಮತ್ತಷ್ಟು ರಂಗು ಪಡೆಯಲಿದೆ.

NIKHIL KUMARASWAMY FILES NOMINATION
ತೆರೆದ ವಾಹನದಲ್ಲಿ ಭರ್ಜರಿ ರೋಡ್​ ಶೋ (ETV Bharat)

ಕಳೆದೆರಡು ದಿನಗಳಿಂದ ಏನೇ ಬೆಳವಣಿಗೆಗಳು ನಡೆದರೂ ಅದು ಎನ್‌ಡಿಎ ತೆಗೆದುಕೊಂಡ ನಿರ್ಧಾರ. ನನ್ನನ್ನು ಅಭ್ಯರ್ಥಿಯನ್ನಾಗಿಸಿದ್ದು, ಪಕ್ಷದ ಕಾರ್ಯಕರ್ತರಲ್ಲಿ ವಿಶ್ವಾಸವಿದೆ. ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಮತ್ತು ಹೆಚ್​.ಡಿ.ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಅವರು ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಆದ್ದರಿಂದ ಜನರು ನನಗೆ ಅವಕಾಶ ನೀಡುತ್ತಾರೆಂಬ ಭರವಸೆ ಇದೆ. ನಿಖಿಲ್ ಕುಮಾರಸ್ವಾಮಿ - ಎನ್​ಡಿಎ ಅಭ್ಯರ್ಥಿ

ಚನ್ನಪಟ್ಟಣದ ಮತದಾರರು ಹಾಗೂ ಜನಸಾಮಾನ್ಯರೂ ಜೆಡಿಎಸ್-ಎನ್‌ಡಿಎ ಜೊತೆಗಿದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕಳೆದ 40 ವರ್ಷಗಳಿಂದ ಕ್ಷೇತ್ರದ ಜನ ಆ ಪ್ರೀತಿಯನ್ನು ತೋರಿಸಿಕೊಂಡು ಬಂದಿದ್ದಾರೆ. ಅದು ಮುಂದುವರಿಯುತ್ತದೆ. ಹೆಚ್​.ಡಿ. ಕುಮಾರಸ್ವಾಮಿ - ಕೇಂದ್ರ ಸಚಿವ

ಇದನ್ನೂ ಓದಿ: ಕೋಟಿ ಒಡೆಯರಾದರೂ ಸಾಲಗಾರರು, ಅಫಿಡವಿಟ್‌ನಲ್ಲಿ ಬಹಿರಂಗ; ಸಂಡೂರಿನ ಕೈ ಅಭ್ಯರ್ಥಿಗಿಂತ ಕಮಲ ಅಭ್ಯರ್ಥಿ ಅತ್ಯಧಿಕ ಶ್ರೀಮಂತ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.