ETV Bharat / state

ಬೊಂಬೆನಗರಿಗೆ ಮತ್ತೊಂದು ಬೈ ಎಲೆಕ್ಷನ್: ಅಂದು ಗೆಲುವಿಗಾಗಿ ಪೈಪೋಟಿ, ಈಗ ಟಿಕೆಟ್​ ಕಗ್ಗಂಟು!

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಉಪಚುನಾವಣೆ ಎದುರಾಗಿದೆ. ಈ ಮೊದಲು ಜೆಡಿಎಸ್, ಬಿಜೆಪಿ ತಲಾ ಒಂದು ಬಾರಿ ಉಪಚುನಾವಣೆ ಜಯಿಸಿದ್ದವು. ಆದರೆ ಈ ಸಲ ಈ ಎರಡು ಪಕ್ಷಗಳೇ ಟಿಕೆಟ್​ಗಾಗಿ ಪಟ್ಟು ಹಿಡಿದಿವೆ.

author img

By ETV Bharat Karnataka Team

Published : 7 hours ago

BY ELECTION
ಬೈ ಎಲೆಕ್ಷನ್ (ETV Bharat)

ರಾಮನಗರ: ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇದೀಗ ಮೂರನೇ ಬಾರಿ ಉಪಚುನಾವಣೆ ಎದುರಾಗಿದೆ. ಈ ಹಿಂದೆ ನಡೆದಿದ್ದ ಎರಡು ಉಪಚುನಾಣೆಯಲ್ಲಿ ಒಮ್ಮೆ ಜೆಡಿಎಸ್ ಹಾಗೂ ಮತ್ತೊಮ್ಮೆ ಬಿಜೆಪಿ ಜಯಿಸಿತ್ತು. ಆದರೆ, ಈ ಬಾರಿ ಎನ್​ಡಿಎ ಮೈತ್ರಿ ಹಿನ್ನೆಲೆಯಲ್ಲಿ ಈ ಎರಡೂ ಪಕ್ಷಗಳೇ ಕ್ಷೇತ್ರದ ಟಿಕೆಟ್‌ಗಾಗಿ ಪರಸ್ಪರ ಪೈಪೋಟಿ ನಡೆಸುವ ಪರಿಸ್ಥಿತಿ ಎದುರಾಗಿದೆ.

ಬೊಂಬೆನಗರಿಗೆ ಮತ್ತೊಂದು ಬೈ ಎಲೆಕ್ಷನ್: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಈ ಹಿಂದೆ 2009, 2011ರಲ್ಲಿ ಎರಡು ಬಾರಿ ಉಪ ಚುನಾವಣೆ ಎದುರಾಗಿತ್ತು. 2009ರ ಉಪ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಿದ್ದರೆ, 2011ರಲ್ಲಿ ಕ್ಷೇತ್ರವನ್ನು ಬಿಜೆಪಿ ವಶಪಡಿಸಿಕೊಂಡಿತ್ತು.

2008 ರಲ್ಲಿ ನಡೆದಿದ್ದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದ ಸಿ.ಪಿ. ಯೋಗೇಶ್ವರ್ 2009ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ತಮ್ಮ ಶಾಸಕರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಬಳಿಕ 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿ ಯೋಗೇಶ್ವರ್ ಸೋಲು ಅನುಭವಿಸಿದ್ದರು. ಅದೇ ವರ್ಷ ನಡೆದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಎಂ.ಸಿ. ಅಶ್ವತ್, ಕಾಂಗ್ರೆಸ್​​ನಿಂದ ಟಿ.ಕೆ. ಯೋಗೇಶ್, ಬಿಜೆಪಿಯಿಂದ ಸಿ.ಪಿ. ಯೋಗೇಶ್ವರ್ ಸ್ಪರ್ಧಿಸಿದ್ದರು. ಇಲ್ಲಿ ಎಂ.ಸಿ. ಅಶ್ವತ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿ.ಪಿ.ಯೋಗೇಶ್ವರ್ ವಿರುದ್ಧ ಜಯ ಗಳಿಸಿದ್ದರು. ಇದರಿಂದಾಗಿ ಮೊದಲ ಉಪಚುನಾವಣೆಯಲ್ಲಿ ಜೆಡಿಎಸ್‌ ಮೇಲುಗೈ ಸಾಧಿಸಿತ್ತು.

2011ರಲ್ಲಿ ಅರಳಿದ ಕಮಲ: ಜೆಡಿಎಸ್‌ನಿಂದ ಆಯ್ಕೆ ಆಗಿದ್ದ ಎಂ.ಸಿ. ಅಶ್ವತ್ 2011ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ರಾಜೀನಾಮೆ ನೀಡಿದ್ದರು. ಇದರಿಂದಾಗಿ ಎದುರಾದ ಮತ್ತೊಂದು ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ನಾಗರಾಜ್, ಕಾಂಗ್ರೆಸ್‌ನಿಂದ ರಘುನಂದನ್ ರಾಮಣ್ಣ ಹಾಗೂ ಬಿಜೆಪಿಯಿಂದ ಸಿ.ಪಿ. ಯೋಗೇಶ್ವರ್ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಯೋಗೇಶ್ವರ್ ಗೆಲುವು ಸಾಧಿಸಿದ್ದು, ತಾಲೂಕಿನಲ್ಲಿ ಮೊದಲ ಬಾರಿ ಬಿಜೆಪಿ ಅರಳಿತ್ತು.

ಇದೀಗ ಮಂಡ್ಯ ಲೋಕಸಭಾ ಚುನಾವಣೆಯ ಗೆಲುವು ಸಾಧಿಸಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ 3ನೇ ಬಾರಿ ಉಪಚುನಾವಣೆ ಎದುರಾಗಿದೆ. ಮೊದಲ ಎರಡು ಉಪಚುನಾವಣೆಯಲ್ಲಿ ಎದುರಾಳಿ ಪಕ್ಷಗಳಾಗಿ ಸೆಣಸಾಡಿದ್ದ ಬಿಜೆಪಿ-ಜೆಡಿಎಸ್ ಇಂದು ಮೈತ್ರಿ ಪಕ್ಷಗಳಾಗಿದ್ದು, ಟಿಕೆಟ್​ ಬಿಕ್ಕಟ್ಟು ಎದುರಾಗಿದೆ.

ಜೆಡಿಎಸ್ ಗೆಲುವು ಸಾಧಿಸಿದ್ದ ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಳ್ಳಬೇಕು ಎಂಬ ಇರಾದೆ ಕುಮಾರಸ್ವಾಮಿ ಅವರದ್ದಾದರೆ, ಕ್ಷೇತ್ರದಲ್ಲಿ ತಮ್ಮದೇ ಆದ ಪ್ರಾಬಲ್ಯ ಹೊಂದಿರುವ ಯೋಗೇಶ್ವರ್ ಕ್ಷೇತ್ರವನ್ನು ಶತಾಯಗತಾಯ ಉಳಿಸಿಕೊಳ್ಳಲೇಬೇಕು ಎಂದು ಹರಸಾಹಸ ಪಡುತ್ತಿದ್ದಾರೆ. ಇದರಿಂದಾಗಿ ಚನ್ನಪಟ್ಟಣ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮೂಡಿಸಿದೆ.

ಕ್ಷೇತ್ರ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ: 2009ರಲ್ಲಿ ಕ್ಷೇತ್ರದ ಶಾಸಕತ್ವಕ್ಕೆ ಸಿ. ಪಿ. ಯೋಗೇಶ್ವರ್ ರಾಜೀನಾಮೆ ನೀಡಿದ ನಂತರ ಇಲ್ಲಿಯವರೆಗೆ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಿಸಿಲ್ಲ. 2009, 2011ರ ಉಪಚುನಾವಣೆ, 2013, 2018, 2023 ಸಾರ್ವತ್ರಿಕ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸೋಲು ಅನುಭವಿಸಿದ್ದಾರೆ. ಇದೀಗ ಮತ್ತೊಂದು ಉಪಚುನಾವಣೆ ಎದುರಾಗಿದ್ದು, ಕಾಂಗ್ರೆಸ್ ಈ ಬಾರಿ ತೀವ್ರ ಪೈಪೋಟಿ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಚನ್ನಪಟ್ಟಣ ಅಭ್ಯರ್ಥಿ ಕಗ್ಗಂಟು: ಇಂದು ಜೆಡಿಎಸ್​-ಬಿಜೆಪಿ ಮತ್ತೊಂದು ಸುತ್ತಿನ ಸಭೆ, ಅಂತಿಮ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.