ETV Bharat / state

ಚನ್ನಪಟ್ಟಣ ಉಪಚುನಾವಣೆ: ನಾಳೆ ಬಹಿರಂಗ ಪ್ರಚಾರ ಅಂತ್ಯ, ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರಕ್ಕೆ ನಿರ್ಬಂಧ - CHANNAPATNA BY ELECTION

ನಾಳೆ ಸಂಜೆ 5.30ರಿಂದ ನ.20 ಸಂಜೆ 6.30ರ ವರೆಗೆ ಯಾವುದೇ ಸುದ್ದಿ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಸುದ್ದಿಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಡಿಸಿ ಯಶವಂತ್ ವಿ. ಗುರುಕರ್ ತಿಳಿಸಿದ್ದಾರೆ.

DC Yashwant V Gurukar
ಡಿಸಿ ಯಶವಂತ್ ವಿ. ಗುರುಕರ್ (ETV Bharat)
author img

By ETV Bharat Karnataka Team

Published : Nov 10, 2024, 5:48 PM IST

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನ.13 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. 11ರ ಸಂಜೆ 5.30ಕ್ಕೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

"ನ.11 ರ ಸಂಜೆ 5.30 ಗಂಟೆಯಿಂದ ನ.20 ಸಂಜೆ 6.30 ಗಂಟೆಯವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ನಿರ್ಬಂಧಿಸಲಾಗಿದೆ" ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದರು.

"ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು" ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

"ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ. ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ" ಎಂದು ಹೇಳಿದರು.

ಎಕ್ಸಿಟ್ ಪೋಲ್ ನಿಷೇಧ: ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಅಂದರೆ ನ.20ರ ಸಂಜೆ 6.30 ಗಂಟೆಯವರೆಗೆ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕು" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಅವಿವಾಹಿತರಿಗೆ ಕಂಕಣಭಾಗ್ಯದ ಭರವಸೆ ನೀಡಿದ ಅಭ್ಯರ್ಥಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.