ETV Bharat / state

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ - REVATI NIKHIL

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಅವರ ಪತ್ನಿ ರೇವತಿ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ, ಮತಯಾಚಿಸಿದರು.

ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ
ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ (ETV Bharat)
author img

By ETV Bharat Karnataka Team

Published : Nov 4, 2024, 4:30 PM IST

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ಅಖಾಡದಲ್ಲಿ ಪ್ರಚಾರ ಜೋರಾಗಿದೆ. ಎನ್​​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಅವರ ಧರ್ಮಪತ್ನಿ ರೇವತಿ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ.

2019 ರಲ್ಲಿ ನಡೆದ ಲೋಕಸಭಾ ಚುನಾವಣೆ ವೇಳೆಯಲ್ಲಿ ನಿಖಿಲ್ ಕುಮಾರಸ್ವಾಮಿ ಇನ್ನೂ ಮದುವೆಯಾಗಿರಲಿಲ್ಲ. 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆ ಹೊತ್ತಿಗೆ ಅವರು ರೇವತಿ ಅವರನ್ನು ವಿವಾಹವಾಗಿದ್ದರು. ಆದರೆ, ಆ ಚುನಾವಣೆ ಸಂದರ್ಭದಲ್ಲಿ ಪತಿ ಜೊತೆ ಯಾವುದೇ ಚುನಾವಣಾ ಪ್ರಚಾರದಲ್ಲಿ ರೇವತಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಆದರೆ, ಈ ಬಾರಿಯ ಉಪಚುನಾವಣೆ ಪ್ರಚಾರದಲ್ಲಿ ಮೊದಲ ಬಾರಿಗೆ ಪತಿ ನಿಖಿಲ್ ಅವರಿಗೆ ಪತ್ನಿ ರೇವತಿ ಸಾಥ್ ನೀಡುತ್ತಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ (ETV Bharat)

ಈ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎಂಬ ಆತ್ಮವಿಶ್ವಾಸದಲ್ಲಿ ಗೌಡರ ಕುಟುಂಬ ಇದೆ. ಹಾಗಾಗಿ ನಿಖಿಲ್ ಅವರು ನಾಮಪತ್ರ ಸಲ್ಲಿಸಿದ ದಿನದಿಂದಲೂ ರೇವತಿ ಅವರೂ ಸಹ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈಗಾಗಲೇ ಕೇಂದ್ರ ಸಚಿವ ಹೆಚ್.ಡಿ‌. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಕ್ಷೇತ್ರಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇವರಿಗೆ ಬಿಜೆಪಿ ನಾಯಕರೂ ಸಹ ಸಾಥ್ ನೀಡಿದ್ದಾರೆ.

ಮತ್ತೊಂದೆಡೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಇಂದಿನಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ತಮ್ಮ ಮೊಮ್ಮಗ ಜೆಡಿಎಸ್ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಪರ ಪ್ರಚಾರ ನಡೆಸಬೇಕಿತ್ತು. ಆದರೆ, ಅನಾರೋಗ್ಯದ ಕಾರಣದಿಂದ ಪ್ರಚಾರದ ದಿನಾಂಕ ಮುಂದಕ್ಕೆ ಹೋಗಿದೆ.

ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ
ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ (ETV Bharat)

ರೇವತಿ ನಿಖಿಲ್ ಭರ್ಜರಿ ಪ್ರಚಾರ: ಇಂದು ಬೆಳಗ್ಗೆಯಿಂದಲೇ ಚನ್ನಪಟ್ಟಣದ ಬಸ್ ನಿಲ್ದಾಣ ಹಾಗೂ ಪದವಿ ಕಾಲೇಜಿನ ಸಮೀಪ ನಿಖಿಲ್ ಪರವಾಗಿ ರೇವತಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು, ಪಟ್ಟಣದ ಸಾರ್ವಜನಿಕರನ್ನು ಭೇಟಿಯಾದ ರೇವತಿ ಅವರು, ಕರಪತ್ರಗಳನ್ನು ನೀಡಿ ಎನ್​​ಡಿಎ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು.

ಸೆಲ್ಫಿಗೆ ಮುಗಿಬಿದ್ದ ವಿದ್ಯಾರ್ಥಿನಿಯರು: ಈ ವೇಳೆ ವಿದ್ಯಾರ್ಥಿಗಳ ಕುಶಲೋಪರಿ ವಿಚಾರಿಸಿದ ರೇವತಿ ಜೊತೆಗೆ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಪ್ರೀತಿ ಹಾಗೂ ವಿಶ್ವಾಸಕ್ಕೆ ರೇವತಿ ಸಂತಸ ವ್ಯಕ್ತಪಡಿಸಿದರು. ರೇವತಿ ಅವರೊಂದಿಗೆ ರಾಜ್ಯ ಮಹಿಳಾ ಜನತಾದಳ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಹಾಗೂ ಜೆಡಿಎಸ್ ಮಹಿಳಾ ಘಟಕದ ಅನೇಕ ನಾಯಕರು ಸಾಥ್ ನೀಡಿದರು.

ಚನ್ನಪಟ್ಟಣದಲ್ಲಿ ಏನೇ ಕುತಂತ್ರ ರಾಜಕಾರಣ ಮಾಡಿದ್ರೂ ಜನ ನನ್ನ ಕೈ ಬಿಡುವುದಿಲ್ಲ: ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಕುಂದ, ಹುಲುವಾಡಿ, ಆಣಿಗೆರೆ ಹೆಚ್. ಬ್ಯಾಡರಹಳ್ಳಿ, ತೌಟನಹಳ್ಳಿ, ತೆಂಕನಹಳ್ಳಿ, ಗುಡ್ಡೆಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಇಂದು ನಿಖಿಲ್ ಬಿರುಸಿನ ಪ್ರಚಾರ ನಡೆಸಿದರು. ಅಣಿಗೆರೆ ಗ್ರಾಮದಲ್ಲಿ ಪ್ರಚಾರ ಸಭೆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಏನೇ ಕುತಂತ್ರ ರಾಜಕಾರಣ ಮಾಡಿದ್ರೂ ಚನ್ನಪಟ್ಟಣ ಜನತೆ ನನ್ನ ಕೈ ಬಿಡುವುದಿಲ್ಲ. ಕ್ಷೇತ್ರದ ಜನ ಕೈ ಹಿಡಿಯುವ ವಿಶ್ವಾಸವಿದೆ ಎಂದು ತಿಳಿಸಿದರು.

ಇಂದು ನನ್ನ ಶ್ರೀಮತಿ ಕೂಡ ನನ್ನ ಪರ ಪ್ರಚಾರ ಮಾಡಿದ್ದಾರೆ. ವಿದ್ಯಾರ್ಥಿಗಳ ಬಳಿ ಮತಯಾಚನೆ ಮಾಡಿದ್ದಾರೆ. ಮಹಿಳಾ ಕಾರ್ಯಕರ್ತರು ಒತ್ತಾಯ ಮಾಡಿ ಪ್ರಚಾರಕ್ಕೆ ಕರೆತಂದಿದ್ದಾರೆ. ರೇವತಿ ಅವರ ತಾಯಿ ಕೂಡಾ ಸಾಮಂದಿಪುರು ಗ್ರಾಮದವರು. ಹಾಗಾಗಿ ಅಲ್ಲಿಗೆ ಹೋಗಿದ್ದಾಗ ಅದರ ಬಗ್ಗೆ ಮಾತನಾಡಿದೆ ಅಷ್ಟೇ. ಅದನ್ನೇ ಪ್ರಚಾರಕ್ಕೆ ಬಳಸಿಕೊಳ್ಳುವುದಿಲ್ಲ ಎಂದರು.

ಇದನ್ನೂ ಓದಿ: ಕೇಂದ್ರದಿಂದ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಡುತ್ತೇನೆ, ಜೋಶಿ ರಾಜಕೀಯ ಬಿಡ್ತಾರಾ?: ಸಿಎಂ ಸವಾಲು

ಇದನ್ನೂ ಓದಿ: ಹುಟ್ಟಿದ್ದು ಹಾಸನ, ಬೆಳೆಸಿದ್ದು ರಾಮನಗರ ಜನ, ಕೊನೆಗೆ ಹೋಗೋದು ಇದೇ ಮಣ್ಣಿನಲ್ಲಿ: ಹೆಚ್​ಡಿಕೆ ಭಾವುಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.