ETV Bharat / state

ರಾಸಾಯನಿಕ ಸೋರಿಕೆ : ಕಾರವಾರದಲ್ಲಿ 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ - CHEMICAL LEAK

ಕೆಲಸದ ವೇಳೆ ರಾಸಾಯನಿಕ ಸೋರಿಕೆಯಾಗಿ 12ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥರಾದ ಘಟನೆ ಕಾರವಾರದಲ್ಲಿ ನಡೆದಿದೆ.

ಕಾರವಾರ ಆಸ್ಪತ್ರೆಗೆ ಕಾರ್ಮಿಕರ ರವಾನೆ
ಕಾರವಾರ ಆಸ್ಪತ್ರೆಗೆ ಕಾರ್ಮಿಕರ ರವಾನೆ (ETV Bharat)
author img

By ETV Bharat Karnataka Team

Published : Jan 11, 2025, 4:09 PM IST

ಕಾರವಾರ: ರಾಸಾಯನಿಕ ಸೋರಿಕೆಯಾಗಿ 12 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಕಾರವಾರದ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಕಂಪನಿಯಲ್ಲಿ ಶನಿವಾರ ನಡೆದಿದೆ.

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಹಾಗೂ ಬಿಹಾರ ಮೂಲದವರಾದ ನೀಲಕಂಠ (22), ಜಹಾನೂರ (20), ಕಮಲೇಶ ವರ್ಮಾ (22), ನಂದಕಿಶೋರ (21), ದೀಪು (28), ಅಜೀಜ್ (23), ಕಲ್ಲು (37), ಸುಜನ್ (26), ನಜೀದುಲ್ಲಾ (24), ಬೇಜನಕುಮಾರ್ (27), ಕಿಶನ್ ಕುಮಾರ್ (28) ಮತ್ತು ಮೋಹಿತ ವರ್ಮಾ(21) ಅಸ್ವಸ್ಥಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರವಾರದಲ್ಲಿ ರಾಸಾಯನಿಕ ಸೋರಿಕೆ (ETV Bharat)

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಕ್ಲೋರಿನ್ ರಾಸಾಯನಿಕ ಸೋರಿಕೆಯಾಗಿ ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅಸ್ವಸ್ಥಗೊಂಡ ಕಾರ್ಮಿಕರನ್ನು ಕಾರವಾರದ ಜಿಲ್ಲಾ‌ ಆಸ್ಪತ್ರೆಗೆ ರವಾನೆ ಮಾಡಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕಂಪನಿ ಅಧಿಕಾರಿಗಳು, ಪೊಲೀಸರು ದೌಡಾಯಿಸಿದ್ದಾರೆ.

ಕಳೆದ ಕೆಲ‌ ದಿನಗಳ ಹಿಂದೆ ಕ್ಲೋರಿನ್ ಸೋರಿಕೆಯಿಂದ ಕಾರ್ಮಿಕನೋರ್ವ ಮೃತಪಟ್ಟಿದ್ದು, ಆದರೂ ಕಂಪನಿಯವರು ಯಾವುದೇ ಕ್ರಮ ಕೈಗೊಂಡಿಲ್ಲ. ಮಾತನಾಡಲು ಕಂಪನಿಯವರು ಸಂಪರ್ಕಕಕ್ಕೂ ಸಿಗುತ್ತಿಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಕಾರವಾರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: LPG ಸಿಲಿಂಡರ್​​ ಸೋರಿಕೆ ಬಗ್ಗೆ ಇರಲಿ ಎಚ್ಚರ; ಮುನ್ನೆಚ್ಚರಿಕೆ ಕ್ರಮ, ವಿಮೆ ಸೌಲಭ್ಯ ಸೇರಿ ಅಗತ್ಯ ಮಾಹಿತಿ ಇಲ್ಲಿದೆ

ಇದನ್ನೂ ಓದಿ: ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು; ಸಾವಿನ ಸಂಖ್ಯೆ 8ಕ್ಕೇರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.