ETV Bharat / state

ಜನಪ್ರಿಯ ಗ್ರಾಮೀಣ ಕ್ರೀಡೆ ಕಂಬಳಕ್ಕೆ ಸರ್ಕಾರದಿಂದ ನೆರವು: ಸಿಎಂ ಸಿದ್ದರಾಮಯ್ಯ - CM SIDDARAMAIAH INAUGURATES KAMBALA

ಉಳ್ಳಾಲದ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Jan 12, 2025, 7:03 AM IST

ಮಂಗಳೂರು : ''ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮದು ಬಹುತ್ವದ ದೇಶ‌'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ''ಜನಪದ ಕ್ರೀಡೆ ಕಂಬಳ ಸರ್ವ ಜಾತಿ, ಧರ್ಮದ ಜನ ಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಕರಾವಳಿ ಜಿಲ್ಲೆಗಳ ಒಂದು ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ'' ಎಂದರು.

''ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರ್ಕಾರ. ಸುಪ್ರೀಂಕೋರ್ಟ್ ನಿಷೇಧವನ್ನು ತೆರವುಗೊಳಿಸಲು ಸರ್ಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರ್ಕಾರ ಕೊಟ್ಟ ಕೊಡುಗೆ'' ಎಂದು ತಿಳಿಸಿದರು.

ಕಂಬಳ ಕ್ರೀಡೆಯ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿದರು (ETV Bharat)

''ತಮ್ಮ ಮನೆ ಮಕ್ಕಳಂತೆ ಕಂಬಳ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ, ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ. 24 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರ್ಕಾರ ನೀಡಿದೆ'' ಎಂದು ಹೇಳಿದರು.

ತುಳು ಎರಡನೇ ಭಾಷೆಯಾಗಿ ಸರ್ಕಾರ ಪರಿಗಣಿಸುತ್ತದೆ : ''ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೆಯ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು'' ಎಂದು ಭರವಸೆ ನೀಡಿದರು.

ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ : ''ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪ್ರೋಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ'' ಎಂದರು.

ಈ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ರಹೀಂ ಖಾನ್, ಇತರರು ಉಪಸ್ಥಿತರಿದ್ದರು.

ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು : ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ''ಆರು ನಕ್ಸಲರು ಶರಣಾಗಿದ್ದು, ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಮಾಡಲಾಗಿದೆ. ನಕ್ಸಲರು ಶಸ್ತ್ರಾಸ್ತ್ರ ಹೋರಾಟ ನಿಲ್ಲಿಸಿ ಮುಖ್ಯವಾಹಿನಿಗೆ ಬರಬೇಕು. ಅವರ ಶಾಂತಿಯುತ ಹೋರಾಟಕ್ಕೆ ನಮ್ಮ ತಕರಾರೇನಿಲ್ಲ. ಸಂವಿಧಾನದಲ್ಲಿ ಶಾಂತಿಯುತ ಹೋರಾಟಕ್ಕೆ ಅವಕಾಶವಿದ್ದು, ಅದರಂತೆ ಹೋರಾಟ ಮಾಡಿದರೆ ಅದಕ್ಕೆ ಸಹಕಾರವಿದೆ'' ಎಂದು ತಿಳಿಸಿದರು.

ನಕ್ಸಲರ ಶರಣಾಗತಿಯ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ''ಜಿಲ್ಲಾ ವರಿಷ್ಠಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ನೌಕರರಾಗಿದ್ದರು. ಈಗ ರಾಜಕೀಯದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅವರಿಂದ ನಾವೇನು ನಿರೀಕ್ಷೆ ಮಾಡಲು ಸಾಧ್ಯ'' ಎಂದರು.

''ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ ಅದನ್ನು ಭರಿಸಲಿದೆ'' ಎಂದು ತಿಳಿಸಿದರು.

ಇದನ್ನೂ ಓದಿ : ಮಂಗಳೂರು: ಕಂಬಳಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಹೂಮಳೆ ಸುರಿಸಿ ಭರ್ಜರಿ ಸ್ವಾಗತ - CM SIDDARAMAIAH

ETV Bharat Logo

Copyright © 2025 Ushodaya Enterprises Pvt. Ltd., All Rights Reserved.