ETV Bharat / state

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ರೂ ಯಾಕಿಂಗಾಯ್ತು?: ಸಂಸದರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ - CM QUESTION TO BJP JDS MLAS

ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್​ ಶಾಸಕರನ್ನು ತರಾಟೆಗೆ ತೆಗೆದುಕೊಂಡರು.

chief-minister-siddaramaiah-question-to-bjp-jds-congress-mlas-in-meeting
20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ರೂ ಯಾಕಿಂಗಾಯ್ತು?: ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : 4 hours ago

ಬೆಂಗಳೂರು: "20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು? ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು?" ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು - ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಸಿಎಂ ಸಿದ್ದರಾಮಯ್ಯ, "ಅಲ್ರೀ ಎಲ್ಲ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ" ಎಂದು ಪ್ರಶ್ನಿಸಿದರು.

ಪ್ರತ್ಯೇಕ ಸಭೆ ಕರೆಯಲು ಸೂಚನೆ; ಹೊಸ ಬಡಾವಣೆ ಮಾಡುವಾಗ ವಿದ್ಯುತ್‌ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ, ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಬಳಿಕ ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜ.15 ರಂದು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು.

ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ. ಯೋಜನೆಯಡಿ ಇನ್ನೂ 46 ಎಕರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಎಲ್ಲ ಕಾನೂನು ತೊಡಕುಗಳನ್ನ ಬಗೆ ಹರಿಸಿ: ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು. ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ. ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚಿಸಿದರು.

ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚಿಸಿದರು. ಅಂಬೇಡ್ಕರ್‌ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ ನೀಡಿದರು.

ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. "ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ. ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ ವಹಸಿ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ" ಎಂದರು.

ಇದನ್ನೂ ಓದಿ: ಅನರ್ಹರ ಬಿಪಿಎಲ್ ಕಾರ್ಡು ರದ್ದು ಮಾಡಿ, ಆದರೆ ಅರ್ಹರ ಕಾರ್ಡು ರದ್ದಾಗಬಾರದು: ಸಿಎಂ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.