ETV Bharat / state

150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ - Mysuru Film City

ಮೈಸೂರಿನ ಇಮ್ಮಾವು ಗ್ರಾಮದಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Dasara Film Festival
ದಸರಾ ಚಲನಚಿತ್ರೋತ್ಸವ ಉದ್ಘಾಟನೆ (ETV Bharat)
author img

By ETV Bharat Karnataka Team

Published : Oct 3, 2024, 5:56 PM IST

ಮೈಸೂರು: ಮೈಸೂರಿನ ಇಮ್ಮಾವು ಗ್ರಾಮದ 150 ಎಕರೆ ಪ್ರದೇಶದಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ದಸರಾ ಉತ್ಸವದ ಅಂಗವಾಗಿ ಚಲನಚಿತ್ರೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

"ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ಭೂಮಿ ಮೀಸಲಿರಿಸಲಾಗಿತ್ತು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಜಮೀನು ಗುರುತಿಸಿ, ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿ ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶ. ಇನ್ನು ಮೂರು ವರ್ಷದೊಳಗೆ ಫಿಲಂ ಸಿಟಿಯನ್ನು ನಿರ್ಮಿಸಲು ನಿರ್ಧರಿಸಲಾಗಿದೆ" ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ (ETV Bharat)

"ಚಿತ್ರರಂಗದ ಬೆಳವಣಿಗೆಗೆ ಸರ್ಕಾರ ಎಲ್ಲ ರೀತಿಯ ಬೆಂಬಲ ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ತೆರೆಕಂಡು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕು" ಎಂದರು.

chief-minister-siddaramaiah
ದಸರಾ ಕಾರ್ಯಕ್ರಮದಲ್ಲಿ ಗಣ್ಯರು (ETV Bharat)

ಅ.4ರಿಂದ 10ರವರೆಗೆ ಸಿನಿಮಾ ಪ್ರದರ್ಶನ: "ದಸರಾ ಚಲನಚಿತ್ರೋತ್ಸವ ಅಕ್ಟೋಬರ್ 4ರಿಂದ 10ರವರೆಗೆ ನಡೆಯಲಿದ್ದು, ದೇಶ-ವಿದೇಶಗಳ ಪ್ರಶಸ್ತಿ ಪುರಸ್ಕೃತ ಚಲನಚಿತ್ರಗಳು ಪ್ರದರ್ಶನವಾಗಲಿವೆ. ಚಲನಚಿತ್ರೋತ್ಸವದಲ್ಲಿ ಹಳೆಯ ಹಾಗೂ ಹೊಸ ಸಿನಿಮಾಗಳನ್ನು ವೀಕ್ಷಿಸುವ ಸುವರ್ಣ ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕು'' ಎಂದು ಸಿಎಂ ಮನವಿ ಮಾಡಿದರು.

Sadhu Kokila
ದಸರಾ ಉತ್ಸವದಲ್ಲಿ ಸಂಗೀತ ನಿರ್ದೇಶಕ ಸಾಧು ಕೋಕಿಲ (ETV Bharat)

ಕನ್ನಡ ಚಿತ್ರರಂಗ ಮರೆಯಲಾಗದ ವ್ಯಕ್ತಿ ದ್ವಾರಕೀಶ್: "ನಟ, ನಿರ್ಮಾಪಕ ದಿವಂಗತ ದ್ವಾರಕೀಶ್ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿ ದಸರಾ ಚಿತ್ರೋತ್ಸವವನ್ನು ದ್ವಾರಕೀಶ್ ಗೌರವಾರ್ಥವಾಗಿ ಹಮ್ಮಿಕೊಳ್ಳಲಾಗಿದೆ. ದ್ವಾರಕೀಶ್ ಕನ್ನಡ ಚಿತ್ರರಂಗದಲ್ಲಿ ಮರೆಯಲಾಗದ ವ್ಯಕ್ತಿ ಎಂದರು. ಇದೇ ವೇಳೆ, ದ್ವಾರಕೀಶ್ ಅವರ ಮಕ್ಕಳು ಕನ್ನಡ ಚಿತ್ರರಂಗಕ್ಕೆ ಉತ್ತಮ ಸೇವೆ ಸಲ್ಲಿಸುವಂತಾಗಲಿ" ಎಂದು ಶುಭ ಹಾರೈಸಿದರು.

Mysuru dasara
ನೃತ್ಯದಲ್ಲಿ ತೊಡಗಿರುವ ನಟಿಯರು (ETV Bharat)

ಹಂಪನಾ ಅವರಿಗೆ ಈ ಮೊದಲೇ ಅವಕಾಶ ದೊರೆಯಬೇಕಿತ್ತು: "ಈ ಬಾರಿ ದಸರಾ ಮಹೋತ್ಸವಕ್ಕೆ ಹಂ.ಪಾ.ನಾಗರಾಜಯ್ಯ ಅವರು ವಿಧ್ಯುಕ್ತ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಅವಕಾಶ ದೊರೆಯಬೇಕಿತ್ತು. ಹಂಪನಾ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ" ಎಂದರು.

Dasara
ದಸರಾ ಉತ್ಸವದ ನೃತ್ಯದಲ್ಲಿ ತೊಡಗಿರುವ ಸಿನಿಮಾ ತಾರೆಯರು (ETV Bharat)

ನಾನು ಯಾವುದೇ ತಪ್ಪು ಮಾಡಿಲ್ಲ: ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಸರ್ಕಾರದ ಮೇಲೆ ಇರುವತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ಇಲ್ಲಿಯವರೆಗೆ ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿರಲು ಸಾಧ್ಯವಿರಲಿಲ್ಲ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: 'ಯುದ್ಧಗಳು ನಿಲ್ಲಲಿ, ಸರ್ಕಾರ ಉರುಳಿಸುವ ದುರಾಲೋಚನೆ ಬಾರದಿರಲಿ': ಹಂಪ ನಾಗರಾಜಯ್ಯ ಪ್ರಾರ್ಥನೆ - Hampa Nagarajaiah Inagurates Dasara

ETV Bharat Logo

Copyright © 2024 Ushodaya Enterprises Pvt. Ltd., All Rights Reserved.