ETV Bharat / state

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ, ಅಗತ್ಯ ಬಿದ್ದರೆ ಎನ್​ಐಎಗೆ ವಹಿಸುವ ಬಗ್ಗೆ ಚಿಂತಿಸಲಾಗುವುದು: ಸಿಎಂ ಸಿದ್ದರಾಮಯ್ಯ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By ETV Bharat Karnataka Team

Published : Mar 3, 2024, 5:48 PM IST

Updated : Mar 3, 2024, 7:33 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿಕ್ಕಮಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್​ಐಎಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದು ಹೇಳಿದರು.

ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಲ್ಲ : ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು?: ಬ್ರಾಂಡ್ ಬೆಂಗಳೂರು ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು?. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು ಎಂದು ಕೇಳಿದ್ರು. ಇದು ಎನ್.ಐ.ಎ RAW ಅವರ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದರು.

ನಾನು ಬಾಂಬ್ ಸ್ಫೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ರಾಜಕೀಯ ಮಾಡಬಾರದು ಎಂದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟವಾಗಿತ್ತು. ಆಗ ಬಿಜೆಪಿಯವರು ಅಧಿಕಾರದಲ್ಲಿದ್ದರು ಎಂದರು.

ಅಧಿಕಾರ ಹಂಚಿಕೊಳ್ಳಬೇಕು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಮಾತನಾಡಿ, ಅಧಿಕಾರ ಹಂಚಿಕೊಳ್ಳದೆ ಇದ್ದರೆ ಅಧಿಕಾರಕ್ಕೆ ಬರಲು ಶ್ರಮಿಸಿದ ಕಾರ್ಯಕರ್ತರು ಏನು ಮಾಡಬೇಕೆಂದರು. ಕರ್ನಾಟಕದ ಬಜೆಟ್ 3.70 ಕೋಟಿಯಾಗಿದೆ. ಅದಕ್ಕೆ 2 ಕೋಟಿ ವೆಚ್ಚವಾಗಬಹುದು ಎಂದರು.

ನಿಯಮಾವಳಿಗಳಂತೆ ಬರಪೀಡಿತ ತಾಲೂಕುಗಳ ಘೋಷಣೆ : ಚಿಕ್ಕಮಗಳೂರು ಜಿಲ್ಲೆಯನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಟ್ಟಿರುವ ಬಗ್ಗೆ ಮಾತನಾಡಿ, ಬರಪೀಡಿತ ಎಂದು ಘೋಷಣೆ ಮಾಡಲು ಕೆಲವು ನಿಯಮಾವಳಿಗಳು ಇವೆ. ಅದರಂತೆ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. 17 ತಾಲೂಕು ಉಳಿದುಕೊಂಡಿವೆ ಎಂದು ಹೇಳಿದರು.

ಮಂಗನ ಕಾಯಿಲೆ, ಆರೋಗ್ಯ ಸಚಿವರ ಬಳಿ ಚರ್ಚೆ : ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಆರೋಗ್ಯ ಸಚಿವರ ಬಳಿ ಈ ಬಗ್ಗೆ ಚರ್ಚಿಸುವುದಾಗಿ ಅವರು ಹೇಳಿದರು.

ಲೋಕಸಭೆಗೆ ತಯಾರಿ ಇನ್ನಷ್ಟು ತೀವ್ರಗೊಳಿಸಲಾಗುವುದು : ಲೋಕಸಭೆಗೆ ತಯಾರಿ ನಡೆದಿದ್ದು, ಸಿದ್ಧತೆ ಇನ್ನಷ್ಟು ತೀವ್ರಗೊಳಿಸುವುದಾಗಿ ತಿಳಿಸಿದರು. ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಅಕ್ರಮ ಭೂ ಒತ್ತುವರಿಗೆ ಸಂಬಂಧಿಸಿದಂತೆ 25 ತಹಶೀಲ್ದಾರರ ನೇಮಕಾತಿಯಾಗಿದ್ದು, ವರದಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲನಾ ಹಂತದಲ್ಲಿದ್ದು, ಕಂದಾಯ ಸಚಿವರ ಬಳಿ ಮಾತನಾಡುವುದಾಗಿ ಹೇಳಿದರು.

ಆರ್. ಅಶೋಕ್ ಅವರು ಏನಾದರೂ ಮಾಡಿ ಕಾಂಗ್ರೆಸ್​ಗೆ ಮತ ಹಾಕಿ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮತ ನೀಡಿ ಎಂದು ಕೇಳಿರಬಹುದು. ಏನಾದರೂ ಮಾಡಿ ಎಂದು ಕೇಳುತ್ತಾರೆಯೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ : ಪಾಕ್ ಪರ ಘೋಷಣೆ ಕೂಗಿದ್ದು ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Last Updated : Mar 3, 2024, 7:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.