ಚಿಕ್ಕಬಳ್ಳಾಪುರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 8 ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 19,81,347 ಮತದಾರರಿದ್ದಾರೆ. ಇವರಲ್ಲಿ 9,83,775 ಪುರುಷರು, 9,97,306 ಮಹಿಳೆಯರು, 266 ಇತರರು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದ್ದಾರೆ.
ಚುನಾವಣಾಧಿಕಾರಿ ಅವರು ನೀಡಿದ ಮಾಹಿತಿ ಹೀಗಿದೆ.
ವಿಧಾನಸಭಾ ಕ್ಷೇತ್ರ | ಪುರುಷರು | ಮಹಿಳೆಯರು | ಇತರರು | ಒಟ್ಟು |
1)ಗೌರಿಬಿದನೂರು | 1,03,832 | 1,07,050 | 3 | 2,10,885 |
2)ಬಾಗೇಪಲ್ಲಿ | 1,00,200 | 1,02,603 | 27 | 2,02,830 |
3)ಚಿಕ್ಕಬಳ್ಳಾಪುರ | 1,03,316 | 1,07,236 | 15 | 2,10,567 |
4)ಯಲಹಂಕ | 2,32,343 | 2,26,196 | 78 | 4,58,617 |
5)ಹೊಸಕೋಟೆ | 1,18,662 | 1,20,474 | 21 | 2,39,157 |
6)ದೇವನಹಳ್ಳಿ | 1,07,245 | 1,09,443 | 16 | 2,16,704 |
7)ದೊಡ್ಡಬಳ್ಳಾಪುರ | 1,08,921 | 1,11,346 | 1 | 2,20,268 |
8)ನೆಲಮಂಗಲ | 1,09,256 | 1,12,958 | 105 | 2,22,319 |
8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು - 2,326 ಮತಗಟ್ಟೆಗಳಿವೆ.
- ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ- 259 ಮತಗಟ್ಟೆ.
- ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ- 267 ಮತಗಟ್ಟೆ.
- ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ -252 ಮತಗಟ್ಟೆ.
- ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ - 411 ಮತಗಟ್ಟೆ.
- ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ-293 ಮತಗಟ್ಟೆ.
- ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ- 292 ಮತಗಟ್ಟೆ.
- ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ -276 ಮತಗಟ್ಟೆ.
- ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ- 276 ಮತಗಟ್ಟೆ.
ವಿಶೇಷ ಮತಗಟ್ಟೆಗಳು.
- ಮಹಿಳಾ ಮತಗಟ್ಟೆ- 40.
- ವಿಶೇಷಚೇತನರ ಮತಗಟ್ಟೆ- 8.
- ಯುವ ನೌಕರರ ಮತಗಟ್ಟೆ-8.
- ಎಥ್ನಿಕ್ ಮತಗಟ್ಟೆ-8.
ಎಲ್ಲಾ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ವಿ.ಟಿ, ವಿ.ಎಸ್.ಟಿ, ಸೆಕ್ಟರ್ ಅಧಿಕಾರಿಗಳು ಮತ್ತು ಚುನಾವಣಾ ವೆಚ್ಚ ನಿರ್ವಹಣಾ ತಂಡಗಳು ಕೊನೆಯ 72 ಗಂಟೆಗಳಲ್ಲಿ 24/7 ಕರ್ತವ್ಯ ನಿರ್ವಹಿಸಿ, ಅಭ್ಯರ್ಥಿಗಳ ಚುನಾವಣಾ ವೆಚ್ಚಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ ಎಲ್ಲ ಚೆಕ್‌ಪೋಸ್ಟ್ ಗಳಲ್ಲಿ 24/7 ಗಂಟೆಗಳ ಕಾಲ ನಿಗ ಇಡಲಾಗಿದ್ದು, ಕೊನೆಯ 72 ಗಂಟೆಗಳ ಕಾಲದಲ್ಲಿ ವಾಹನಗಳನ್ನು ಪರಿಶೀಲಿಸಿ ಅಕ್ರಮವಾಗಿ ಸಾಗಣೆ ಮಾಡುವ ಮದ್ಯ, ಹಣ ಮತ್ತು ಇತರ ಉಡುಗೊರೆಗಳನ್ನು ವಶಕ್ಕೆ ಪಡೆಯಲು ಕಟ್ಟು ನಿಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ಯಾರಾದರೂ ರೂ. 50,000/- ಕ್ಕಿಂತ ಹೆಚ್ಚು ಹಣವನ್ನು ನಗದು ರೂಪದಲ್ಲಿ ಕೊಂಡ್ಯೊಯ್ಯುತ್ತಿರುವುದು ಕಂಡುಬಂದಲ್ಲಿ ಕೂಡಲೇ ವಶಕ್ಕೆ ಪಡೆಯಲು ನಿರ್ದೇಶನ ನೀಡಲಾಗಿದೆ.
ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು / ಕಾರ್ಯಕರ್ತರುಗಳು ಒಡ್ಡುವ ಯಾವುದೇ ಆಮಿಷಗಳಿಗೆ ಸಂಬಂಧಿಸಿದಂತೆ ದೂರುಗಳನ್ನು CVigil App ಮೂಲಕ ದಾಖಲಿಸಬಹುದಾಗಿದೆ ಮತ್ತು ಜಿಲ್ಲಾ ಮಟ್ಟದಲ್ಲಿ ತೆರಯಲಾಗಿರುವ ಕಂಟ್ರೋಲ್ ರೂಂ ನಂ. 1950 & 08156-277071 ಕ್ಕೆ ಕರೆ ಮಾಡಿ ದೂರುಗಳನ್ನು ನೀಡಬಹುದಾಗಿದೆ. ಸ್ವೀಕೃತವಾಗುವ ದೂರುಗಳ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ತುರ್ತು ಕ್ರಮವಹಿಸಲಾಗುತ್ತದೆ. ದಂಡ ಪ್ರಕ್ರಿಯೆ ಸಂಹಿತೆ – 1973 ರ ಕಲಂ 144 ರಡಿ ಮತದಾನದ ಪೂರ್ವ 48 ಗಂಟೆಗಳು ಅಂದರೆ ಏಪ್ರಿಲ್ 24 ರ ಸಂಜೆ 6 ಗಂಟೆಯಿಂದ 27 ರ ಬೆಳಿಗ್ಗೆ 6 ಗಂಟೆಯವರೆಗೂ ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿ ಮಾಡಿ ಆದೇಶಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸಭೆ, ಸಮಾರಂಭ ಮತ್ತು ಧ್ವನಿವರ್ಧಕ ಬಳಸುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರು ಕಾರಣವಿಲ್ಲದೇ ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು ಅಥವಾ ಗುಂಪು ಕೂಡುವುದನ್ನು ನಿಷೇಧಿಸಿದೆ ಮತ್ತು ಯಾವುದೇ ಆಯುಧಗಳು ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಿದೆ. ಮತ್ತು ಈ ಅವಧಿಯಲ್ಲಿ ಯಾವುದೇ ಸಂತೆ, ಜಾತ್ರೆ ಮತ್ತು ಇತರ ಜನಸಮೂಹಗಳನ್ನು ನಿಷೇಧಿಸಿದೆ. ಬಹಿರಂಗ ಪ್ರಚಾರ ಏಪ್ರಿಲ್ 24 ರಂದು ಸಂಜೆ 6 ಗಂಟೆಗೆ ಕೊನೆಗೊಂಡಿದ್ದು, ಈ ಅವಧಿಯ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗಬೇಕಿದೆ, ಈಗಾಗಲೇ ಈ ಕುರಿತು ಕಟ್ಟುನಿಟ್ಟಾಗಿ ಆದೇಶ ನೀಡಲಾಗಿದೆ.
ಈ ಅವಧಿಯಲ್ಲಿ ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲ್‌ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿ ಪರಿಶೀಲಿಸಿ, ಕ್ಷೇತ್ರದ ಮತದಾರರಲ್ಲದವರನ್ನು ಹೊರಗೆ ಕಳುಹಿಸಲು ಸೂಚಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 24 ರ ಸಂಜೆ 6 ಗಂಟೆಯಿಂದ 26 ರ ಮಧ್ಯರಾತ್ರಿ 12 ಗಂಟೆಯವರೆಗೂ ಒಣ ದಿನವನ್ನು ಘೋಷಿಸಲಾಗಿದ್ದು, ಈ ಅವಧಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಮುಚ್ಚಲು ಸೂಚಿಸಲಾಗಿದೆ.
ಹಾಗೇ, ಚಿಕ್ಕಬಳ್ಳಾಪುರ ಜಿಲ್ಲೆಯು ಆಂಧ್ರಪ್ರದೇಶ ರಾಜ್ಯಕ್ಕೆ ಹೊಂದಿಕೊಂಡಿರುವುದರಿಂದ ಆಂಧ್ರಪ್ರದೇಶ ರಾಜ್ಯದ ಶ್ರೀ ಸತ್ಯಸಾಯಿ ಜಿಲ್ಲೆ ಮತ್ತು ಅನ್ನಮಯ್ಯ ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಗಡಿ ಭಾಗದಿಂದ 5.00 ಕಿ.ಮೀ ವ್ಯಾಪ್ತಿಯ ಸರಹದ್ದಿನಲ್ಲಿ ಇರುವ ಎಲ್ಲ ಮದ್ಯದ ಅಂಗಡಿಗಳನ್ನು ಏಪ್ರಿಲ್ 24ರ ಸಂಜೆ 6 ಗಂಟೆಯಿಂದ 26 ರ ಮಧ್ಯರಾತ್ರಿ 12 ಗಂಟೆಯವರೆಗೂ ಒಣ ದಿನವನ್ನು ಘೋಷಿಸಿ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಗೆ ಒಟ್ಟು 3 CAPF ಕಂಪನಿಗಳು ನಿಯೋಜಿಸಲಾಗಿದ್ದು, ಈ ಎಲ್ಲಾ CAPF Company ಗಳನ್ನು Critical, Vulnerable ಮತಗಟ್ಟೆಗಳಿಗೆ ಹಾಗೂ Cluster Booth ಗಳಿಗೆ ಭದ್ರತೆಗಾಗಿ ನಿಯೋಜಿಸಲಾಗಿದೆ.
ಮತದಾನ ದಿನದಂದು ಯಾವುದೇ ಅಭ್ಯರ್ಥಿಯು ಮತಗಟ್ಟೆ ವ್ಯಾಪ್ತಿಯ 100 ಮೀಟರ್ ಒಳಗೆ ಪ್ರಚಾರ ಮಾಡುವಂತಿಲ್ಲ. ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನ್, ಕಾರ್ಡ್ಲೆಸ್ ಪೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ನಿರತರಾದ ಅಧಿಕಾರಿಗಳು/ಸಿಬ್ಬಂದಿಗಳನ್ನು ಹೊರತುಪಡಿಸಿ).
ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ನೆರಳಿನ ವ್ಯವಸ್ಥೆ, ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ವಿಶೇಷ ಚೇತನರಿಗೆ ಗಾಲಿಕುರ್ಚಿ, ರ್ಯಾಂಪ್ ವ್ಯವಸ್ಥೆ ಇದೆ. ವೋಟರ್ ಸ್ಲಿಪ್ಗಳನ್ನು ಬಿ.ಎಲ್.ಓ ಗಳ ಮೂಲಕ ತಲುಪಿಸಲಾಗಿದೆ. ಒಟ್ಟು 29 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಈ ಪೈಕಿ ಪಕ್ಷೇತರ ಅಭ್ಯರ್ಥಿ ರಾಜಾರೆಡ್ಡಿ ಎಂಬುವವರು ನಿಧನರಾಗಿದ್ದಾರೆ. ಈ ಕುರಿತು ಎಲ್ಲ ಮತಗಟ್ಟೆಗಳಲ್ಲಿ ಮಾಹಿತಿಯನ್ನು ಪ್ರಚುರ ಪಡಿಸಲಾಗುತ್ತದೆ.
ವಿಧಾನಸಭಾ ಕ್ಷೇತ್ರವಾರು ಗುರುತಿಸಲಾಗಿರುವ ಕೇಂದ್ರಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ನಡೆಯಲಿದ್ದು, ಬಳಿಕ ಮತ ಚಲಾವಣೆಯಾದ ಇವಿಎಂಗಳನ್ನು ಪೊಲೀಸ್ ಬಿಗಿ ಭದ್ರತೆಯೊಂದಿಗೆ ಜಿ.ಪಿ.ಎಸ್ ಅಳವಡಿಕೆಯ ಕ್ಲೋಸ್ಡ್ ಕಂಟೈನರ್ ವಾಹನದಲ್ಲಿ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂಗೆ ತಂದು ಇಡಲಾಗುತ್ತದೆ. ಇಲ್ಲಿಯೇ ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಏಪ್ರಿಲ್ 26 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಮತದಾನ ಪ್ರಕ್ರಿಯೆಗೆ ಸಮರ್ಪಕವಾಗಿ ಎಲ್ಲ ಸಿದ್ದತಾ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ. ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಸಂಕ್ಷಿಪ್ತವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದ್ದಾರೆ.