ETV Bharat / state

ಚಿಕ್ಕಬಳ್ಳಾಪುರ: ಮಚ್ಚಿನಿಂದ ಕೊಚ್ಚಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ - Husband killed his wife

ಪತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನಲ್ಲಿ ನಡೆದಿದೆ.

Etv Bharat
Etv Bharat (Etv Bharat)
author img

By ETV Bharat Karnataka Team

Published : Jun 25, 2024, 1:38 PM IST

ಚಿಕ್ಕಬಳ್ಳಾಪುರ: ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಶಿಡ್ಲಘಟ್ಟ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದಲ್ಲಿ ಇಂದು (ಮಂಗಳವಾರ) ಬೆಳಗ್ಗೆ ಸುಮಾರು 6.45ರ ಸಂದರ್ಭದಲ್ಲಿ ಮುನಿರೆಡ್ಡಿ (60) ವರ್ಷ ತನ್ನ ಮೊದಲನೇ ಹೆಂಡತಿ ಪದ್ಮಮ್ಮ (50) ಅವರನ್ನು ಮುಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ.

ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಂಡ, ಹೆಂಡತಿ ನಡುವೆ ಮನಸ್ತಾಪಗಳಿದ್ದು, ಮೃತ ಪದ್ಮಮ್ಮ ಅವರು ಜಮೀನು ವಿವಾದ ಸಂಬಂಧ ಕೋರ್ಟ್​ನಲ್ಲಿ ವ್ಯಾಜ್ಯ ಹೂಡಿರುವುದು ಹಾಗೂ ಜೊತೆಗೆ ತನ್ನ ಪತ್ನಿ ಅದೇ ಗ್ರಾಮದ ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಮುನಿರೆಡ್ಡಿ ಮತ್ತು ಅವರ ಮಗ ಇಬ್ಬರೂ ಸೇರಿ ಪದ್ಮಮ್ಮಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್​ ಮೂಗಳು ತಿಳಿಸಿವೆ.

ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮಾಂತರ ಠಾಣೆಯ ಪೊಲೀಸರು ಹಾಗೂ ಸರ್ಕಲ್ ಇನ್ಸ್​ಪೆಕ್ಟರ್ ಎಂ. ಶ್ರೀನಿವಾಸ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆರೋಪಿಗಳು ತಾವೇ ಪೊಲೀಸರಿಗೆ ಶರಣಾಗಿದ್ದು, ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಕೊಲೆ ಪ್ರಕರಣದ ಹಿನ್ನೆಲೆ ಗ್ರಾಮದಲ್ಲಿ ಆತಂಕ ಮೂಡಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ನಟಿ ಸಂಜನಾ ಗಲ್ರಾಣಿ ಮತ್ತಿತರರ ವಿರುದ್ಧ ಮಾದಕ ದ್ರವ್ಯ ಸೇವನೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ - High Court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.