ETV Bharat / state

ಚಿಕ್ಕೋಡಿ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ನಾಮಪತ್ರ ಸಲ್ಲಿಕೆ - Annasaheb Jolle Nomination - ANNASAHEB JOLLE NOMINATION

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಅಣ್ಣಾಸಾಬ್ ಜೊಲ್ಲೆ ನಾಮಪತ್ರ ಸಲ್ಲಿಸಿದರು.

BJP candidate Anna sab Jolle filed nomination paper.
ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ನಾಮಪತ್ರ ಸಲ್ಲಿಸಿದರು.
author img

By ETV Bharat Karnataka Team

Published : Apr 15, 2024, 3:35 PM IST

Updated : Apr 15, 2024, 3:45 PM IST

ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಬ್ ಜೊಲ್ಲೆ ಅವರು ಸೋಮವಾರ ಚುನಾವಣಾಧಿಕಾರಿ ರಾಹುಲ್ ಶಿಂದೆ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಚಿಕ್ಕೋಡಿಯಿಂದ ಎರಡನೇ ಅವಧಿಗೆ ಜೊಲ್ಲೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಶಾಸಕ ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್, ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಹಾಗು ಎಂಎಸ್ಸಿ ಪಿ.ಎಚ್.ಪುಜಾರ ಜತೆಗಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಣ್ಣಾಸಾಬ್ ಜೊಲ್ಲೆ, "ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಮತದಾರರು ತೀರ್ಮಾನ ಮಾಡಿದ್ದಾರೆ. ಹೀಗಾಗಿ, ಕ್ಷೇತ್ರದಲ್ಲಿ ಒಳ್ಳೆಯ ವಾತಾವರಣವಿದೆ. ಈ ಬಾರಿ ನಾನು ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ" ಎಂದು ಹೇಳಿದರು.

"ನನ್ನ ಪರವಾಗಿ ಇಂದು ಸಂಜೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನಪರಿಷತ್ ಸದಸ್ಯ ರವಿ ಕುಮಾರ್, ಬೈರತಿ ಬಸವರಾಜ, ಬಸವನಗೌಡ ಯತ್ನಾಳ್ ಪ್ರಚಾರಕ್ಕೆ ಆಗಮಿಸಲಿದ್ದಾರೆ. ರಾಷ್ಟ್ರ ನಾಯಕರು ಕೂಡಾ ಬೆಳಗಾವಿ ಜಿಲ್ಲೆಯಲ್ಲಿ ಪ್ರಚಾರ ಕಾರ್ಯ ನಡೆಸುವರು" ಎಂದು ಅವರು ತಿಳಿಸಿದರು.

ಇದನ್ನೂಓದಿ:"ರಾಜಕೀಯಕ್ಕೆ ಸಾಫ್ಟ್ ಆಗಿಯೇ ಇರಬೇಕು, ರಫ್ ಆಗಿರಬಾರದು": ಶಿವರಾಜಕುಮಾರ್ - Shivarajkumar

Last Updated : Apr 15, 2024, 3:45 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.