ETV Bharat / state

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು: ಅಂಗಡಿ ಬಿಟ್ಟು ಮಾರಾಟಗಾರ ಎಸ್ಕೇಪ್ - Panipuri

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ
ದಾವಣಗೆರೆ
author img

By ETV Bharat Karnataka Team

Published : Mar 15, 2024, 9:39 PM IST

ದಾವಣಗೆರೆ : ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ. ರಂಜಾನ್ ಹಬ್ಬದ ಹಿನ್ನೆಲೆ ಉಪವಾಸ ಇದ್ದ ಮಕ್ಕಳು, ಉಪವಾಸ ಅಂತ್ಯ ಮಾಡಿ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದಾರೆ. ಇದಾದ ಕೆಲವೇ ಗಂಟೆಯಲ್ಲಿ ಎಲ್ಲ ಮಕ್ಕಳಿಗೆ ಇದ್ದಕ್ಕಿದ್ದಂತೆ ವಾಂತಿ, ಭೇದಿ, ಹೊಟ್ಟೆ ನೋವು ಆರಂಭವಾಗಿದೆ.‌

ತಕ್ಷಣ ಪೋಷಕರು ಮಲೆಬೆನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೇ ನಾಲ್ಕು ಜನ ಮಕ್ಕಳು ಗಂಭೀರವಾಗಿದ್ದು, ಅವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.‌ ಇನ್ನು ಮಾಹಿತಿ ತಿಳಿದು ಹರಿಹರ ತಹಶೀಲ್ದಾರ್ ಗುರು ಬಸವರಾಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಳಿಕ ಮಲೆಬೆನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿ.ಪಂ ಸಿಇಒ ಸುರೇಶ್ ಹಿಟ್ನಾಳ್ ಅವರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಇನ್ನು ಈ ವಿಚಾರ ತಿಳಿದು ಪಾನಿಪುರಿ ಅಂಗಡಿ ಬಿಟ್ಟು ಮಾರಾಟಗಾರ ಎಸ್ಕೇಪ್ ಆಗಿರುವ ಘಟನೆ ಕೂಡ ನಡೆದಿದ್ದು, ಮಾರಾಟಗಾರನ ಹುಡುಕಾಟ ನಡೆಸಲಾಗಿದೆ.

ಪಾನಿಪೂರಿ ಮಾದರಿ ಸಂಗ್ರಹಕ್ಕೆ ಆರೋಗ್ಯಾಧಿಕಾರಿಗಳು ಮುಂದಾಗಿದ್ದಾರೆ. ಹೆಚ್ಚು 15 ವಯಸ್ಸಿನ ಒಳಗಿನ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ‌ಈ ಘಟನೆ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ : ಚಿತ್ರದುರ್ಗ: ಬಿಸಿಯೂಟ ಸೇವಿಸಿ 60 ಮಕ್ಕಳಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.