ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದ ಚರ್ಚ್ ಪಾದ್ರಿಯನ್ನು ದಾವಣಗೆರೆ ಪೊಲೀಸರು ಹೈದರಾಬಾದ್ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಾವಣಗೆರೆ ನಗರದ ಚರ್ಚ್‌ವೊಂದರ ಪಾದ್ರಿ ಬಿ.ರಾಜಶೇಖರ್ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ನಗರದ ನಿವಾಸಿಯಾದ ಸಂತ್ರಸ್ತ ಮಹಿಳೆ ವೃತ್ತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಂದ ಪತಿ ದೂರವಾಗಿದ್ದಾರೆ. ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಆಗಮಿಸುತ್ತಿದ್ದ ಸಂತ್ರಸ್ತೆ ತನ್ನ ನೋವನ್ನು ಪಾದ್ರಿ ಬಳಿ ಹೇಳಿಕೊಂಡಿದ್ದರು. ಅದನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರಲಾಗಿದೆ.
ಲೈಂಗಿಕ ಕಿರುಕುಳ ನೀಡಿದ್ದಲ್ಲದೇ 25ರಿಂದ 35 ಲಕ್ಷ ರೂ. ಹಣ ಪಡೆದು ವಂಚಿಸಿದ್ದಾನೆ. ಹಣ ವಾಪಸ್ ಕೇಳಿದ್ದಕ್ಕೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾನೆ. ಇತರ ನಾಲ್ವರು ಮಹಿಳೆಯರಿಗೂ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾರ್ಚ್ 9ರಂದು ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪಾದ್ರಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಪೊಲೀಸರು ಹೈದರಾಬಾದ್‌ಗೆ ತೆರಳಿ ಆರೋಪಿಯನ್ನು ಬಂಧಿಸಿ ದಾವಣಗೆರೆಗೆ ಕರೆತಂದಿದ್ದಾರೆ.
ಇದನ್ನೂ ಓದಿ: ಬೆಂಗಳೂರು: 55 ವರ್ಷದ ಮಹಿಳೆ ಮೇಲೆ ಆತ್ಯಾಚಾರವೆಸಗಿ ಹತ್ಯೆ: 19 ವರ್ಷದ ಯುವಕನ ಬಂಧನ - RAPE AND MURDER CASE