ETV Bharat / state

ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಸಿಐಡಿ ನೋಟಿಸ್; ಕೇಸ್​ ರದ್ದು ಕೋರಿ ಬಿಎಸ್‌ವೈ ಹೈಕೋರ್ಟ್​ ಮೊರೆ - CID notice to B S Yediyurappa

ಪೋಕ್ಸೋ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಿಐಡಿ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Yediyurappa
ಯಡಿಯೂರಪ್ಪ (Photo: IANS)
author img

By ETV Bharat Karnataka Team

Published : Jun 12, 2024, 12:07 PM IST

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸೋಮವಾರ ಸಂಜೆ ನೋಟಿಸ್ ನೀಡಲಾಗಿದೆ.

ಸದ್ಯ ದೆಹಲಿಯಲ್ಲಿರುವುದರಿಂದ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ವಕೀಲರ ಮೂಲಕ ಬಿ.ಎಸ್. ಯಡಿಯೂರಪ್ಪ ಉತ್ತರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಯಡಿಯೂರಪ್ಪ ವಿರುದ್ಧ ಕೇಳಿ ಬಂದಿತ್ತು.

ಫೆಬ್ರವರಿ ತಿಂಗಳಿನಲ್ಲಿ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ಬಾಲಕಿಯ ತಾಯಿ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆ ಸಿಐಡಿಗೆ ವರ್ಗಾಯಿಸಲಾಗಿತ್ತು. ಇತ್ತೀಚೆಗಷ್ಟೇ ದೂರು ದಾಖಲಿಸಿದ್ದ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ಹೈಕೋರ್ಟ್​ಗೆ ಬಿಎಸ್​​ವೈ ಅರ್ಜಿ: ಈ ನಡುವೆ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪ ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

''ತಮ್ಮ ವಿರುದ್ಧದ ದಾಖಲಾದ ಪೋಕ್ಸೋ ಕೇಸ್​ ಆಧಾರರಹಿತವಾಗಿದೆ.‌ ನಾನು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ನಾಯಕರ ವಿರುದ್ಧ ದೂರು ನೀಡುವುದೇ ಹವ್ಯಾಸವಾಗಿತ್ತು. ಪ್ರಕರಣ ದಾಖಲಾದ ನಂತರ ಏಪ್ರಿಲ್ 12 ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ, ಧ್ವನಿ ಮಾದರಿ ಮಾತ್ರ ಸಂಗ್ರಹಿಸಿದರು. ದೂರಿನಲ್ಲಿ ಅಪರಾಧದ ಅಂಶಗಳಿಲ್ಲ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು'' ಎಂದು ಅರ್ಜಿಯಲ್ಲಿ ಬಿಎಸ್​ವೈ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ವಾದಿಸಲು ನೇಮಕವಾಗಿದ್ದ ಹಿರಿಯ ವಕೀಲೆ ರಾಜೀನಾಮೆ! - Lawyer Jayna Kothari Resigned

ETV Bharat Logo

Copyright © 2024 Ushodaya Enterprises Pvt. Ltd., All Rights Reserved.