ETV Bharat / state

ಕಡೆಗಣನೆ ಕೂಗು: ಕಾರ್ಯಕರ್ತರ ವಿಶ್ವಾಸಗಳಿಸಿ, ಪಕ್ಷ ಸಂಘಟಿಸಲು ಸಿಎಂ-ಡಿಸಿಎಂ ತಂತ್ರ - CM DCM program - CM DCM PROGRAM

ಬೆಂಗಳೂರಿನ ಕ್ವೀನ್ಸ್​ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ ಮತ್ತು ಡಿಸಿಎಂ ಕಾರ್ಯಕ್ರಮ ನಡೆಯಲಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Jul 6, 2024, 9:56 AM IST

ಬೆಂಗಳೂರು: ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಭಾವನೆ ತೊಡೆದು ಹಾಕುವ ನಿಟ್ಟಿನಲ್ಲಿ ಇಂದಿನಿಂದ ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ ಮತ್ತು ಡಿಸಿಎಂ ಕಾರ್ಯಕ್ರಮ ಆರಂಭವಾಗಲಿದೆ. ಆ ಮೂಲಕ ಕಾರ್ಯಕರ್ತರ ಜೊತೆ ಸಂಪರ್ಕ ಸಾಧಿಸಿ ಅವರ ಅಹವಾಲು, ಕುಂದು ಕೊರತೆ ನೀಗಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ ಮತ್ತು ಡಿಸಿಎಂ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರ ಹಾಗೂ ಕಾರ್ಯಕರ್ತರ ನಡುವಿನ ಅಂತರವನ್ನು ಕಡಿಮೆ ಮಾಡಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ. ಕಳೆದ ವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಕಾರ್ಯಕ್ರಮ ಆರಂಭಿಸಲು ನಿರ್ಧರಿಸಲಾಗಿತ್ತು. ವಿಧಾನಸಭೆ ಚುನಾವಣೆ ಬಳಿಕ ಕೈ ಕಾರ್ಯಕರ್ತರನ್ನು ಕಡೆಗಣನೆ ಮಾಡಲಾಗಿದೆ ಎಂಬ ದೂರು ಬಲವಾಗಿ ಕೇಳಿ ಬಂದಿತ್ತು. ಈ ನಿಟ್ಟಿನಲ್ಲಿ ಕಾರ್ಯಕರ್ತರ ಜೊತೆ ಸಂಪರ್ಕ ಸಾಧಿಸಲು ಹೊಸ ಕಾರ್ಯಕ್ರಮವನ್ನು ಕಾಂಗ್ರೆಸ್ ರೂಪಿಸಿದೆ.

ಅನಿವಾರ್ಯತೆ ಕಾರಣಗಳಿಂದ ಈ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಳ್ಳುತ್ತಿಲ್ಲ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿಗದಿಯಂತೆ ಸಂಜೆ 3-5 ಗಂಟೆವರೆಗೆ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಸಭಾಂಗಣದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಹವಾಲು ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಮತ್ತು ಡಿಸಿಎಂ ಭೇಟಿಯಾಗಲು ನೋಂದಣಿ ಮಾಡಿಕೊಳ್ಳಬೇಕು.

ಅಧಿಕೃತ ಕಾರ್ಯಕರ್ತರಿಗೆ ಮಾತ್ರ ಅವಕಾಶ: ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡಲು ಬಯಸುವ ಕೈ ಕಾರ್ಯಕರ್ತರು ಮೊಬೈಲ್ ಸಂಖ್ಯೆ 7899116899 ಅನ್ನು ಸಂಪರ್ಕಿಸಿ, ತಮ್ಮ ಹೆಸರು, ಪಕ್ಷದಲ್ಲಿನ ಹುದ್ದೆ ವಿವರಗಳ ಸಮೇತ ನೋಂದಾಯಿಸಿಕೊಳ್ಳಬೇಕು. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸೀಮಿತವಾಗಿ ಏರ್ಪಡಿಸಿರುವ ಭೇಟಿ ಇದಾಗಿದ್ದು, ಶಾಸಕರು ಸೇರಿದಂತೆ ಬೇರೆ ಯಾರೂ ಆಗಮಿಸುವಂತಿಲ್ಲ ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿಎಂ-ಡಿಸಿಎಂ ಕಾರ್ಯಕರ್ತರ ಸಭೆ
ಸಿಎಂ-ಡಿಸಿಎಂ ಕಾರ್ಯಕರ್ತರ ಸಭೆ (ETV Bharat)

ಅಧಿಕೃತ ಪಕ್ಷದ ಕಾರ್ಯಕರ್ತರಿಗೆ ಮಾತ್ರ ಸಿಎಂ ಹಾಗೂ ಡಿಸಿಎಂರನ್ನು ಭೇಟಿ ಮಾಡಲು ಅವಕಾಶ ಇದೆ. ಕಾರ್ಯಕರ್ತರ ಅಹವಾಲು ಸ್ವೀಕರಿಸಿ, ಅವರ ಕುಂದುಕೊರತೆಗಳನ್ನು ಪರಿಹರಿಸುವ ಯತ್ನ ಮಾಡಲಿದ್ದಾರೆ. ಆ ಮೂಲಕ ಕಾರ್ಯಕರ್ತರ ವಿಶ್ವಾಸಗಳಿಸುವ ಕಾರ್ಯತಂತ್ರ ಇದಾಗಿದೆ. ರಾಜ್ಯ ಮಟ್ಟದಲ್ಲಿ ತಿಂಗಳಿಗೆ ಒಂದು ಬಾರಿ ಸಿಎಂ ಹಾಗೂ ಡಿಸಿಎಂ ಕಾರ್ಯಕರ್ತರನ್ನು ಭೇಟಿ ಮಾಡಿ ಅಹವಾಲು ಸ್ವೀಕರಿಸಲು ಪ್ಲಾನ್ ರೂಪಿಸಲಾಗಿದೆ.

ಕಾರ್ಯಕರ್ತರ ಮನವೊಲಿಸುವ ತಂತ್ರ: ನಮ್ಮ ಸರ್ಕಾರ ಇದ್ದರೂ ಯಾವುದೇ ಕೆಲಸಗಳು ಆಗುತ್ತಿಲ್ಲ. ಅದರಲ್ಲೂ ವಿಧಾನಸಭೆ ಚುನಾವಣೆ ಬಳಿಕ ಸರ್ಕಾರ ಕಾರ್ಯಕರ್ತರನ್ನು ಕಡೆಗಣಿಸುತ್ತಿದೆ ಎಂಬ ದೂರುಗಳು ಆಗಾಗ ಕೇಳಿ ಬರುತ್ತಲೇ ಇದೆ‌. ಪಕ್ಷದ ವೇದಿಕೆಯಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ತಮ್ಮ ಅಸಮಾಧಾನ ಹೊರಹಾಕಿದ್ದರು. ಪಕ್ಷದ ಕಾರ್ಯಕರ್ತರಾಗಿದ್ದರೂ ಸಿಎಂ, ಸಚಿವರು ಕೈಗೆ ಸಿಗುತ್ತಿಲ್ಲ ಎಂಬ ತೀವ್ರ ಅಸಮಾಧಾನ ಇತ್ತು. ಇತ್ತ ಲೋಕಸಭೆ ಚುನಾವಣೆ ಫಲಿತಾಂಶ ಕಾರ್ಯಕರ್ತರಲ್ಲಿನ ಸಿಟ್ಟಿನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಗಂಟೆಯನ್ನು ನೀಡಿದೆ. ಹೀಗಾಗಿ ಅವರ ವಿಶ್ವಾಸಗಳಿಸಿ, ಮತ್ತೆ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಕಾರ್ಯಕರ್ತರೊಂದಿಗೆ ಸಿಎಂ ಹಾಗೂ ಡಿಸಿಎಂ ಎಂಬ ಕಾರ್ಯಕ್ರಮ ರೂಪಿಸಲಾಗಿದೆ.

ಕಳೆದ ವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕಾರ್ಯಕರ್ತರನ್ನು ಸರ್ಕಾರ ಕಡೆಗಣಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಸಚಿವರು ಯಾರೂ ಕೈಗೆ ಸಿಗುತ್ತಿಲ್ಲ ಎಂಬ ಬಗ್ಗೆ ತೀವ್ರ ಅಸಮಾಧಾನ ಹೊಹಾಕಿದ್ದರು. ನಮ್ಮದೇ ಸರ್ಕಾರ ಇದ್ದರೂ ಕೆಲಸಗಳು ಆಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ವಿಶ್ವಾಸ ಗಳಿಸಿ, ಪಕ್ಷ ಸಂಘಟನೆಗೆ ಹೆಚ್ಚು ಬಲ ನೀಡುವ ನಿಟ್ಟಿನಲ್ಲಿ ಸರ್ಕಾರ ಈ ಕಾರ್ಯತಂತ್ರ ರೂಪಿಸಿದೆ‌.

ಉಸ್ತುವಾರಿ ಸಚಿವರುಗಳಿಂದ ಜಿಲ್ಲಾವಾರು ಸಭೆ: ಜಿಲ್ಲಾ ಉಸ್ತುವಾರಿ ಸಚಿವರು 15 ದಿನಕ್ಕೊಮ್ಮೆ ತಮ್ಮ ಜಿಲ್ಲೆಗಳಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿ ಅಹವಾಲು ಸ್ವೀಕರಿಸಲು ತೀರ್ಮಾನಿಸಲಾಗಿದೆ. ಉಸ್ತುವಾರಿ ಸಚಿವರು ಯಾರೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರ ಕೈಗೆ ಸಿಗುತ್ತಿಲ್ಲ. ತಮ್ಮ ಯಾವುದೇ ಕೆಲಸಗಳನ್ನು ಮಾಡುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ‌. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳಲ್ಲಿ ಪಕ್ಷದ ಕಚೇರಿಗಳಲ್ಲಿ ಕಡ್ಡಾಯವಾಗಿ 15 ದಿನಕ್ಕೊಮ್ಮೆ ಸಭೆ ನಡೆಸಿ ಕಾರ್ಯಕರ್ತರ ಸಹವಾಲು ಸ್ವೀಕರಿಸುವಂತೆ ಸೂಚಿಸಲಾಗಿದೆ.

ಮುಂದಿನ ವಾರದಿಂದ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿ ಅವರ ಕುಂದು ಕೊರತೆ ಸ್ವೀಕರಿಸಲಿದ್ದಾರೆ‌. ಆ ಮೂಲಕ ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು, ಪಕ್ಷ ಸಂಘಟನೆ ಮಾಡಲು ರಾಜ್ಯ ಕಾಂಗ್ರೆಸ್ ಪ್ಲಾನ್ ಮಾಡಿದೆ.

ಇದನ್ನೂ ಓದಿ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್​ಡಿಕೆ ಜನತಾ ದರ್ಶನ: ಅಧಿಕಾರಿಗಳಿಗೆ ನಿರ್ಬಂಧ - Janata Darshana in Mandya

ETV Bharat Logo

Copyright © 2025 Ushodaya Enterprises Pvt. Ltd., All Rights Reserved.