ETV Bharat / state

ಕ್ಯಾನ್ಸರ್​ಗೆ ರಾಜ್ಯದಲ್ಲಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ : ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ - CANCER TREATMENT

ಕಾಮಗಾರಿಗಳನ್ನು ನಿಗದಿ ಅವಧಿಯಲ್ಲಿ ಪೂರ್ಣಗೊಳಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ, ಸಚಿವರು ಮತ್ತು ಅಧಿಕಾರಿಗಳು
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ, ಸಚಿವರು ಮತ್ತು ಅಧಿಕಾರಿಗಳು (ETV Bharat)
author img

By ETV Bharat Karnataka Team

Published : Jan 9, 2025, 4:05 PM IST

ಬೆಂಗಳೂರು: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲ ಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿ​​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಈ ಸೂಚನೆ ನೀಡಿದರು. ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ. ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಿದ್ದರಾಮಯ್ಯ ಸೂಚಿಸಿದರು.

2023-24 ಸಾಲಿನಲ್ಲಿ ಅನುಮೋದನೆಗೊಂಡು, ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು. ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕ್ಯಾನ್ಸರ್‌ ಪ್ರಮಾಣ ಹೆಚ್ಚಳವಾಗಲು ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ನಿರ್ದೇಶಿಸಿದರು.

2024-25ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4331 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, ಈವರೆಗೆ 3,099 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 3005 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ.96.97 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ: ಬಳ್ಳಾರಿಯಲ್ಲಿ ಶೀಘ್ರದಲ್ಲೇ ಜೀನ್ಸ್ ಪಾರ್ಕ್ ಸ್ಥಾಪನೆ, 154 ಎಕರೆ ಭೂ ಸ್ವಾಧೀನ: ಸಚಿವ ಎಂ.ಬಿ.ಪಾಟೀಲ್

ಇದನ್ನೂ ಓದಿ: ಹಿಂದುಳಿದ, ಎಸ್​​ಸಿ ಅಭಿವೃದ್ಧಿ ನಿಗಮಗಳಿಗೆ ಅನುದಾನ ಬಿಡುಗಡೆ ಶೂನ್ಯ; ಅಧಿಕಾರಿಗಳ ವಿರುದ್ಧ ಸಿಎಂ ಗರಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.