ETV Bharat / state

ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ: ಸಮಾಜ ಒಡೆಯುವ ಶಕ್ತಿ ನಾಶ ಮಾಡಿ - ಸಿಎಂ ಕರೆ - International democracy Day

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ಆಯೋಜಿಸಿರುವ ವಿಶ್ವ ದಾಖಲೆಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನಿಡಿದರು.

CM flag off to human chain for Democracy Day
ಪ್ರಜಾಪ್ರಭುತ್ವ ದಿನ ಪ್ರಯುಕ್ತ ಮಾನವ ಸರಪಳಿಗೆ ಸಿಎಂ ಚಾಲನೆ (ETV Bharat)
author img

By ETV Bharat Karnataka Team

Published : Sep 15, 2024, 12:21 PM IST

ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ (ETV Bharat)

ಬೆಂಗಳೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿರುವ ಭವ್ಯ ಮೆಟ್ಟಿಲುಗಳ ಬಳಿ ನಗಾರಿ ಭಾರಿಸುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಈ ವಿಶ್ವ ದಾಖಲೆಯ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ಸುಮಾರು 2500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು.‌ ಕಾರ್ಯಕ್ರಮದಲ್ಲಿದ್ದ ಎಲ್ಲರೂ ಸಾಂಕೇತಿಕವಾಗಿ ಪರಸ್ಪರ ಕೈ ಜೋಡಿಸಿ ಮಾನವ ಸರಪಳಿ ರಚಿಸಿದರು. ಇದೇ ವೇಳೆ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು.

ಸಮಾಜ ಒಡೆಯುವ ಶಕ್ತಿ ನಾಶಮಾಡಲು ಎದ್ದು ನಿಲ್ಲಬೇಕು: ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಿ. ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದು ಕರೆ ನೀಡಿದರು.

"ನಮ್ಮ ಬುದ್ಧ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ. ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ, ಪಾಲಿಸುವ ಪ್ರಯತ್ನ‌ ಮುನ್ನಡೆಸಿದ್ದೇವೆ. ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು" ಎಂದು ಕರೆ ನೀಡಿದರು.

"ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ಏಕತೆ ಭಜನೆ ಮಾಡುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು, ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ" ಎಂದರು.

"ಈ ಬಿಜೆಪಿ ಮತ್ತು ಇವರ ಜೊತೆಗಿರುವ ವಿಚ್ಚಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು. 20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟ ಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ" ಎಂದು ತಿಳಿಸಿದರು.

ಉದ್ಘಾಟನಾ ಸಂದರ್ಭದಲ್ಲಿ ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಗಮನ ಸೆಳೆದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ: ಇಂದು ಚಾಮರಾಜನಗರ - ಬೀದರ್​​ವರೆಗೆ 2500 ಕಿಮೀ ಮಾನವ ಸರಪಳಿ - International Democrocy Day

ETV Bharat Logo

Copyright © 2024 Ushodaya Enterprises Pvt. Ltd., All Rights Reserved.