ETV Bharat / state

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಉಪಲೋಕಾಯುಕ್ತರಾಗಿ ನೇಮಕ - Upa Lokayukta - UPA LOKAYUKTA

ಉಪಲೋಕಾಯುಕ್ತ ಸ್ಥಾನಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ (ETV Bharat)
author img

By ETV Bharat Karnataka Team

Published : Jun 24, 2024, 10:52 PM IST

ಬೆಂಗಳೂರು: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪರನ್ನು ಉಪಲೋಕಾಯುಕ್ತರಾಗಿ ನೇಮಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸೋಮವಾರ ಸಿಎಂ ನೇತೃತ್ವದಲ್ಲಿ ಕುಮಾರ ಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಸಭೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಪಾಲ್ಗೊಂಡಿದ್ದರು.

ಎರಡು ಉಪಲೋಕಾಯುಕ್ತ ಸ್ಥಾನ ಇದ್ದು, ಖಾಲಿ ಇದ್ದ ಎರಡನೇ ಉಪಲೋಕಾಯುಕ್ತ ಸ್ಥಾನಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಬಿ.ವೀರಪ್ಪ ಹೆಸರನ್ನು ಪ್ರಸ್ತಾಪಿಸಲಾಯಿತು. ಬಿ.ವೀರಪ್ಪ ಹೆಸರಿಗೆ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲೇ ನೇಮಕ ಆದೇಶ ಹೊರ ಬೀಳಲಿದೆ.

ಇದನ್ನೂ ಓದಿ: ರಾಜ್ಯಾದ್ಯಂತ ಮೀನು, ಚಿಕನ್‌ ಕಬಾಬ್​ಗೆ ಕೃತಕ ಬಣ್ಣ ಬಳಕೆ ನಿಷೇಧ: ಉಲ್ಲಂಘಿಸಿದರೆ ಜೈಲು ಶಿಕ್ಷೆ, ಭಾರೀ ದಂಡ! - ARTIFICIAL COLOURS BAN

2015ರಲ್ಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಬಿ.ವೀರಪ್ಪ ಅವರು, 2016-2023ರವರೆಗೆ ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. ಪ್ರಮುಖವಾಗಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರವನ್ನು ರದ್ದುಗೊಳಿಸಿ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನು ಪುನರ್​ ಸ್ಥಾಪನೆ ಮಾಡಿದ ಹೆಗ್ಗಳಿಕೆ ಬಿ.ವೀರಪ್ಪ ಅವರಿಗೆ ಸಲ್ಲುತ್ತದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳ ತನಿಖೆಯ ಅಧಿಕಾರವನ್ನು ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಮರುಸ್ಥಾಪಿಸಿ ಐತಿಹಾಸಿಕ ತೀರ್ಪು ನೀಡಿದ್ದರು.

ಹೈಕೋರ್ಟ್ ನಿವೃತ್ತ ನ್ಯಾಯಾಮೂರ್ತಿ ಬಿ.ವೀರಪ್ಪ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಾದ ಪಿಎಸ್​​ಐ ನೇಮಕಾತಿ ಹಗರಣದ ತನಿಖೆಗೆ ನೇಮಿಸಲಾಗಿದ್ದ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು‌.

ಇದನ್ನೂ ಓದಿ: ಗ್ರಾ.ಪಂ ಕಾರ್ಯದರ್ಶಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ - Gram Panchayat Secretaries

ETV Bharat Logo

Copyright © 2024 Ushodaya Enterprises Pvt. Ltd., All Rights Reserved.