ETV Bharat / state

ಮನೆಗೊಂದು ಗ್ರಂಥಾಲಯಕ್ಕೆ ಸಿಎಂ ಚಾಲನೆ: ಏನಿದು ಮನೆಗೊಂದು ಗ್ರಂಥಾಲಯ ಯೋಜನೆ? - ONE HOME ONE LIBRARY

ಗೃಹ ಕಚೇರಿ ಕೃಷ್ಣಾದಲ್ಲಿ ಸ್ಥಾಪಿಸಿದ ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ ಚಾಲನೆ ನೀಡಿದರು.

CM inagurated One Home One Library in Home Office Krishna
ಗೃಹ ಕಚೇರಿ ಕೃಷ್ಣಾದಲ್ಲಿ ಮನೆಗೊಂದು ಗ್ರಂಥಾಲಯಕ್ಕೆ ಸಿಎಂ ಚಾಲನೆ ನೀಡಿದರು (ETV Bharat)
author img

By ETV Bharat Karnataka Team

Published : Jan 13, 2025, 3:40 PM IST

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮನೆಗೊಂದು ಗ್ರಂಥಾಲಯ'ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಉದ್ಘಾಟಿಸಿದರು.

'ಮನೆಗೊಂದು ಗ್ರಂಥಾಲಯ'ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸುತ್ತಿದ್ದು, ಗ್ರಂಥಾಲಯಕ್ಕೆ ಹಿರಿಯ ಸಾಹಿತಿ ನಾಡೋಜ ಡಾ.ಹಂಪ ನಾಗರಾಜಯ್ಯ ಚಾಲನೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ ಫಲಕ ಅನಾವರಣಗೊಳಿಸಿದರು.

ಏನಿದು ಮನೆಗೊಂದು ಗ್ರಂಥಾಲಯ?: ಈ ಯೋಜನೆಯು ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯಡಿ ರಾಜ್ಯದಾದ್ಯಂತ ಪ್ರಸಕ್ತ ಸಮಿತಿಯ ಅವಧಿಯಲ್ಲಿ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. ಪುಸ್ತಕಾಭಿರುಚಿಯನ್ನು ಇಂದಿನ ಯುವಪೀಳಿಗೆಯಲ್ಲಿ ಬೆಳೆಸುವುದು ಇದರ ಮುಖ್ಯ ಉದ್ದೇಶ. ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸು.

ಪ್ರಾಧಿಕಾರ ತಮ್ಮ ಮನೆಗಳಲ್ಲಿ ಗ್ರಂಥಾಲಯ ಆರಂಭಿಸುವ ಇಚ್ಛೆ ಉಳ್ಳವರನ್ನು ಸಂಪರ್ಕಿಸಿ ಆ ಭಾಗದ ಸಾಹಿತಿ ಬರಹಗಾರರನ್ನು ಅವರ ಮನೆಗೆ ಕರೆದೊಯ್ದು, ಅಲ್ಲೊಂದು ಕಾರ್ಯಕ್ರಮವನ್ನು ಆಯೋಜಿಸಿ ಪ್ರಾಧಿಕಾರದ ಪರವಾಗಿ ಅವರಿಗೊಂದು ಪ್ರಮಾಣ ಪತ್ರ ನೀಡಲಾಗುತ್ತದೆ.

ಈ ಯೋಜನೆಯ ವಿಶೇಷತೆ ಏನು?: ಮನೆ ಮನೆಯಲ್ಲಿ, ಸಂಘ ಸಂಸ್ಥೆಗಳಲ್ಲಿ ಕಚೇರಿಗಳಲ್ಲಿ ಗ್ರಂಥಾಲಯ ಸ್ಥಾಪಿಸಲಾಗುತ್ತದೆ. ಮನೆಯ ಒಡೆಯರು 100 ಪುಸ್ತಕಗಳಿಂದ ಆರಂಭಿಸಿ ಗ್ರಂಥಾಲಯ ಸ್ಥಾಪನೆ ಮಾಡಬೇಕು. ಪುಸ್ತಕಗಳ ಖರೀದಿ ಹಾಗೂ ಅವುಗಳನ್ನು ಸುಸಜ್ಜಿತವಾಗಿ ಇಡುವ ಜವಾಬ್ದಾರಿ ಮನೆಯ ಒಡೆಯರದ್ದಾಗಿರುತ್ತದೆ. ಗ್ರಂಥಾಲಯವನ್ನು ಗಣ್ಯರಿಂದ/ವಿದ್ವಾಂಸರುಗಳಿಂದ/ಕಲಾವಿದರುಗಳಿಂದ ಉದ್ಘಾಟನೆ ಮಾಡಿಸುವ ಜವಾಬ್ದಾರಿ ಪ್ರಾಧಿಕಾರದ್ದಾಗಿದೆ.

ಪ್ರಚಾರದ ಜವಾಬ್ದಾರಿ ಪ್ರಾಧಿಕಾರದ್ದಾಗಿದೆ. ಈ ಸಂಬಂಧ ತಾಲ್ಲೂಕು/ಜಿಲ್ಲಾಮಟ್ಟದಲ್ಲಿ ಗ್ರಂಥಾಲಯ ಜಾಗೃತ ಸಮಿತಿ ರಚನೆ ಮಾಡಲಾಗುವುದು. ಗ್ರಂಥಾಲಯ ಸ್ಥಾಪಿಸಲು ಪ್ರೋತ್ಸಾಹ ನೀಡುವುದು, ಅದರ ಜೊತೆ ನಿಕಟ ಸಂಪರ್ಕ ಸಮಿತಿಯ ಜವಾಬ್ದಾರಿಯಾಗಿರುತ್ತದೆ.

ಕುಮಾರವ್ಯಾಸ ಭಾರತ ಕೃತಿ ಲೋಕಾರ್ಪಣೆ: ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಕೃತಿಯ ಸಂಪುಟಗಳನ್ನು ಲೋಕಾರ್ಪಣೆ ಮಾಡಿದರು. ಆಡು ಭಾಷೆಯಲ್ಲಿ ಮಹಾಕಾವ್ಯ ಕಟ್ಟಿಕೊಟ್ಟ ಹಿರಿಮೆ ಗದುಗಿನ ನಾರಾಣಪ್ಪ ಅವರದ್ದು. ಕುಮಾರವ್ಯಾಸ ಎಂದೇ ಪ್ರಖ್ಯಾತರಾದ ಗದುಗಿನ ನಾರಾಣಪ್ಪ ರಚಿಸಿದ ಕರ್ಣಾಟ ಭಾರತ ಕಥಾಮಂಜರಿ' ಕುಮಾರವ್ಯಾಸ ಭಾರತ ಎಂದೇ ಪ್ರಖ್ಯಾತವಾಗಿದೆ.

ಕನ್ನಡ ಸಾಹಿತ್ಯ ಲೋಕದ ಅಜರಾಮರ ಕೃತಿಯಾದ ಕುಮಾರವ್ಯಾಸ ಭಾರತವನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಓದುಗರಿಗೆ ಒದಗಿಸಲಾಗುವುದು ಎಂದು ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಕಳೆದ ವರ್ಷ ಗದಗಿನಲ್ಲಿ ಆಚರಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಘೋಷಿಸಿದ್ದರು. ಅದರಂತೆ ಕನ್ನಡ ಗಣಕ ಪರಿಷತ್ತು ಈ ಹಿಂದೆ ಪ್ರಕಟಿಸಿದ್ದ ಕುಮಾರವ್ಯಾಸ ಭಾರತದ ಕೃತಿಯ ಹಕ್ಕುಗಳನ್ನು ಪುಸ್ತಕ ಪ್ರಾಧಿಕಾರ ಪಡೆದುಕೊಂಡು ಈ ಕೃತಿ ಪ್ರಕಟಿಸಿದೆ. ಕನ್ನಡ ಪುಸ್ತಕ ಪ್ರಾಧಿಕಾರ ಈ ಕುಮಾರವ್ಯಾಸ ಭಾರತವನ್ನು ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಎರಡೂ ಸಂಪುಟಗಳು ಸೇರಿ ಒಟ್ಟು 500 ರೂ.ಗಳ ಬೆಲೆ ನಿಗದಿ ಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಇಲಾಖೆ ನಿರ್ದೇಶಕ ಡಾ.ಧರಣೀದೇವಿ ಮಾಲಗತ್ತಿ ಹಾಗೂ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ಮಾನಸ, ಕನ್ನಡ ಸಾಹಿತ್ಯ ಅಧ್ಯಕ್ಷ ಡಾ.ಮಹೇಶ್ ಜೋಶಿ, ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕಿರಣ್ ಸಿಂಗ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: 1 ರೂಪಾಯಿ ಕಾನ್ವೆಂಟ್​ ಶಾಲೆ : ಮಕ್ಕಳಿಗೆ ಪುಸ್ತಕ, ಸಮವಸ್ತ್ರ, ಶೂ ಉಚಿತ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.