ಬೆಂಗಳೂರು: ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಶ್ರೀರಾಮ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ರಾಮ, ಸೀತಾ, ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಹಾ ಕುಂಭಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ನಾಸ್ತಿಕನಲ್ಲ-ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತೇವೆ, ಗುಡಿ ಕಟ್ಟುತ್ತೇವೆ ಎಂದರು.
-
ಮನಸ್ಸು ಶುದ್ಧವಾಗಿರುವ ಪ್ರತಿ ಜೀವದೊಳಗೂ ರಾಮನಿದ್ದಾನೆ..
— Siddaramaiah (@siddaramaiah) January 22, 2024 " class="align-text-top noRightClick twitterSection" data="
ನಮ್ಮ ರಾಮ ಪ್ರೀತಿ, ವಾತ್ಸಲ್ಯ, ಮಮತೆಯ ಪ್ರತಿರೂಪ..
ಶ್ರೀರಾಮ ಸರ್ವರಿಗೂ ಒಳಿತು ಮಾಡಲಿ.
ಜೈ ಶ್ರೀರಾಮ್ #JaiShreeRaam pic.twitter.com/tJyxSmWnYL
">ಮನಸ್ಸು ಶುದ್ಧವಾಗಿರುವ ಪ್ರತಿ ಜೀವದೊಳಗೂ ರಾಮನಿದ್ದಾನೆ..
— Siddaramaiah (@siddaramaiah) January 22, 2024
ನಮ್ಮ ರಾಮ ಪ್ರೀತಿ, ವಾತ್ಸಲ್ಯ, ಮಮತೆಯ ಪ್ರತಿರೂಪ..
ಶ್ರೀರಾಮ ಸರ್ವರಿಗೂ ಒಳಿತು ಮಾಡಲಿ.
ಜೈ ಶ್ರೀರಾಮ್ #JaiShreeRaam pic.twitter.com/tJyxSmWnYLಮನಸ್ಸು ಶುದ್ಧವಾಗಿರುವ ಪ್ರತಿ ಜೀವದೊಳಗೂ ರಾಮನಿದ್ದಾನೆ..
— Siddaramaiah (@siddaramaiah) January 22, 2024
ನಮ್ಮ ರಾಮ ಪ್ರೀತಿ, ವಾತ್ಸಲ್ಯ, ಮಮತೆಯ ಪ್ರತಿರೂಪ..
ಶ್ರೀರಾಮ ಸರ್ವರಿಗೂ ಒಳಿತು ಮಾಡಲಿ.
ಜೈ ಶ್ರೀರಾಮ್ #JaiShreeRaam pic.twitter.com/tJyxSmWnYL
ಯಾವುದೇ ಜಾತಿ-ಧರ್ಮ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದು ಸಿಎಂ ವಿವರಿಸಿದರು.
ಪರಿಶಿಷ್ಟ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ ಎಂದು ವಚನಗಳನ್ನು ಉದಾಹರಿಸಿದರು.
ಜೈ ಶ್ರೀರಾಮ ಘೋಷಣೆ ಕೂಗಿದ ಸಿಎಂ: ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು ಎನ್ನುತ್ತ ತಾವೂ ಜೈ ಶ್ರೀರಾಮ್ ಘೋಷಣೆ ಕೂಗಿದರು. ನೆರೆದಿದ್ದ ಸಾರ್ವಜನಿಕರಿಂದಲೂ ಘೋಷಣೆ ಕೂಗಿಸಿದರು. ಸಚಿವರಾದ ಬೈರತಿ ಸುರೇಶ್, ಈಶ್ವರ್ ಖಂಡ್ರೆ, ಆಯೋಗದ ಉಪಾಧ್ಯಕ್ಷರಾದ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಮಂಜುಳಾ ಅರವಿಂದ ಲಿಂಬಾವಳಿ, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಅರವಿಂದ ಲಿಂಬಾವಳಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಿದ್ದರಾಮಣ್ಣನವರಿಂದ ರಾಮನ ಗುಡಿ ಉದ್ಘಾಟನೆ ಖುಷಿಯ ವಿಷಯ: ತಮ್ಮ ಹೆಸರಲ್ಲೇ ರಾಮನನ್ನು ಹೊಂದಿರುವ ಸಿದ್ದರಾಮಣ್ಣನವರಿಂದ ರಾಮನ ಗುಡಿ ಉದ್ಘಾಟನೆ ಆಗಿರುವುದು ಬಹಳ ಖುಷಿಯ ವಿಷಯ ಎಂದು ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಅವರು ಅತ್ಯಂತ ಮೆಚ್ಚುಗೆ ವ್ಯಕ್ತಪಡಿಸಿದರು. ಬಿದರಹಳ್ಳಿ ಹೋಬಳಿಯ, ಹಿರಂಡಹಳ್ಳಿ ಶ್ರೀರಾಮ ಟೆಂಪಲ್ ಟ್ರಸ್ಟ್ ನಿರ್ಮಿಸಿದ್ದ ಸಕುಟುಂಬ ಸಮೇತನಾಗಿರುವ ಸೀತಾರಾಮ ಲಕ್ಷ್ಮಣ ದೇವಾಲಯ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ವಿಗ್ರಹದ ಶಿಲಾ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಈ ಮಾತುಗಳನ್ನು ಆಡಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು.
-
ಪ್ರಧಾನಿ @narendramodi ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ.… pic.twitter.com/LeM59JSv9h
— Siddaramaiah (@siddaramaiah) January 22, 2024 " class="align-text-top noRightClick twitterSection" data="
">ಪ್ರಧಾನಿ @narendramodi ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ.… pic.twitter.com/LeM59JSv9h
— Siddaramaiah (@siddaramaiah) January 22, 2024ಪ್ರಧಾನಿ @narendramodi ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ.… pic.twitter.com/LeM59JSv9h
— Siddaramaiah (@siddaramaiah) January 22, 2024
ಇದನ್ನೂ ಓದಿ: ಭಕ್ತನಿಗಾಗಿ ಕಾದ ಶ್ರೀರಾಮಚಂದ್ರ, ನರೇಂದ್ರ ಮೋದಿ ಬಂದು ರಾಮಮಂದಿರ ಸ್ಥಾಪನೆ: ಪ್ರಹ್ಲಾದ್ ಜೋಶಿ ಬಣ್ಣನೆ
ಸಿದ್ದರಾಮಯ್ಯ ವಾಖ್ಯಾನ: ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು ಎಂದು ಸಿಎಂ ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಅವರು, ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ. ಅದೊಂದು ತೋರ್ಪಡಿಕೆಯ ವಿದ್ಯಮಾನವೂ ಅಲ್ಲ. ರಾಮಭಕ್ತಿ ನಿರಂತರ. ವೈಯಕ್ತಿಕವಾಗಿ ನಾನು, ರಾಮನಿಂದ ವಚನ ಪರಿಪಾಲನೆಯನ್ನು, ಭೀಮನಿಂದ (ಡಾ. ಅಂಬೇಡ್ಕರ್) ಸಮತೆ ಅನುಷ್ಠಾನವನ್ನು, ಬಸವನಿಂದ ನುಡಿ, ನಡೆಯ ನಡುವೆ ಅಂತರವಿಲ್ಲದೆ ಬದುಕುವುದನ್ನು ನನ್ನಲ್ಲಿ ಅಳವಡಿಸಿಕೊಳ್ಳುತ್ತಲೇ ಮುಂದುವರಿದಿದ್ದೇನೆ ಎಂದರು.
ಹನುಮನ ನಾಡಿನವರಾದ ನಾವು ಹನುಮನ ಎದೆಗಿಂತ ಮಿಗಿಲಾದ ಗುಡಿ ರಾಮನಿಗೆ ಬೇರಾವುದೂ ಇಲ್ಲ ಎಂದು ತಿಳಿದೇ ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿಲ್ಲ. ಬದಲಿಗೆ ಊರೂರಿನಲ್ಲಿಯೂ ಹನುಮನಿಗೆ ಗುಡಿ ಕಟ್ಟಿದೆವು. ರಾಮನಿಗೆ ಹನುಮನ ಎದೆಗಿಂತ ಬೇರಾವುದಾದರೂ ಶ್ರೇಷ್ಠ ಗುಡಿಯನ್ನು ಈ ಜಗತ್ತಿನಲ್ಲಿ ಯಾರಾದರೂ ಕಟ್ಟಲು ಸಾಧ್ಯವೇ? ನಿಜ ರಾಮಭಕ್ತರು ಉತ್ತರ ಹೇಳಬೇಕು. ರಾಮ ತನ್ನ ಭಕ್ತರಲ್ಲಿ ನೋಡುವುದು ಅವರ ಸತ್ಯಸಂಧತೆ, ವಚನ ಪರಿಪಾಲನೆಯನ್ನೇ ಹೊರತು ಢಾಂಭಿಕತೆಯನ್ನಲ್ಲ. ರಾಜಕಾರಣಿಗಳಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯಿಂದ ಕೂಡಿದ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದಿದ್ದಾರೆ.
-
ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ.… pic.twitter.com/r2uuL8Pi7S
— Siddaramaiah (@siddaramaiah) January 22, 2024 " class="align-text-top noRightClick twitterSection" data="
">ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ.… pic.twitter.com/r2uuL8Pi7S
— Siddaramaiah (@siddaramaiah) January 22, 2024ನನಗೆ ತಿಳಿದಿರುವ ರಾಮ, ನಾನು ಪೂಜಿಸುವ ರಾಮ ವಚನ ಪರಿಪಾಲನೆಯನ್ನೇ ತನ್ನ ಉಸಿರಾಗಿಸಿಕೊಂಡವನು. ನನಗೆ ತಿಳಿದಿರುವ ಹನುಮ, ನಾನು ಪೂಜಿಸುವ ಹನುಮ ರಾಮನಾಮಕ್ಕಿಂತ ಮಿಗಿಲಿಲ್ಲ, ರಾಮನೇ ಜಗವೆಲ್ಲಾ ಎಂದು ತಿಳಿದು ರಾಮಭಕ್ತಿಯನ್ನೇ ಎದೆಯೊಳಗೆ ಇಳಿಸಿಕೊಂಡವನು. ಹನುಮನ ನಾಡಿನವರಾದ ನಮಗೆ ರಾಮನ ಬಗ್ಗೆ, ರಾಮಭಕ್ತಿಯ ಬಗ್ಗೆ ಹೇಳಿಕೊಡುವ ಅಗತ್ಯವಿಲ್ಲ.… pic.twitter.com/r2uuL8Pi7S
— Siddaramaiah (@siddaramaiah) January 22, 2024
ಪ್ರಧಾನಿ ನರೇಂದ್ರಮೋದಿ ಅವರೇ, ನೀವು ನಿಜವಾದ ರಾಮಭಕ್ತರೇ ಆಗಿದ್ದರೆ ಚುನಾವಣೆ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ಎಷ್ಟನ್ನು ಈಡೇರಿಸಬೇಕಿದೆ ಎನ್ನುವುದನ್ನು ಅಯೋಧ್ಯೆಯಲ್ಲಿ ತಾವು ಇಂದು ಉದ್ಘಾಟಿಸುತ್ತಿರುವ ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ. ನಿಮಗೆ ಆ ಧೈರ್ಯವಿಲ್ಲ, ಅದು ಬರುವುದೂ ಇಲ್ಲ. ಏಕೆಂದರೆ ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ನೀಡಿದ್ದಿರಿ. ಆದರೆ, ಇದಕ್ಕಾಗಿ ಏನು ಮಾಡಿದಿರಿ? ರೈತರ ಆದಾಯ ದ್ವಿಗುಣಗೊಳಿಸುವುದಿರಲಿ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ಬಿಡಿಗಾಸು ಬರ ಪರಿಹಾರವನ್ನೂ ನೀವು ನೀಡಿಲ್ಲ. ಅದೇ ರೀತಿ, ಒಕ್ಕೂಟ ವ್ಯವಸ್ಥೆಯಲ್ಲಿರುವ ಎಲ್ಲ ರಾಜ್ಯಗಳ ಸಶಕ್ತೀಕರಣಕ್ಕಾಗಿ ಸಹಕಾರಿ ಒಕ್ಕೂಟ ವ್ಯವಸ್ಥೆಯ ನಿರ್ಮಾಣದ ಬಗ್ಗೆ ಭರವಸೆ ನೀಡಿದ್ದಿರಿ. ವಿಪರ್ಯಾಸವೆಂದರೆ, ಇಂದು ರಾಜ್ಯಗಳಿಗೆ ದಕ್ಕಬೇಕಾದ ಅವುಗಳ ನ್ಯಾಯಯುತ ಪಾಲನ್ನು ಕೂಡ ಕಸಿದುಕೊಂಡಿದ್ದೀರಿ. ಇದರೊಟ್ಟಿಗೆ ಕುತಂತ್ರದಿಂದ ಸೆಸ್, ಸರ್ಚಾರ್ಜ್‌ಗಳನ್ನು ಹೆಚ್ಚಿಸಿದ್ದೀರಿ ಎಂದು ತಿಳಿಸಿದ್ದಾರೆ.
ವಚನ ಪರಿಪಾಲನೆ ಎಂದರೇನು ಎಂಬುದೇ ತಿಳಿಯದ ನೀವು ಯಾವ ಸೀಮೆಯ ರಾಮಭಕ್ತ? ಮತ್ತೊಮ್ಮೆ ಹೇಳುತ್ತೇನೆ, ಅಧಿಕಾರದಲ್ಲಿರುವವರಿಂದ ರಾಮ ನಿರೀಕ್ಷಿಸುವುದು ಶಾಂತಿ, ನೆಮ್ಮದಿ, ಸಹಬಾಳ್ವೆಯ ರಾಮರಾಜ್ಯದ ನಿರ್ಮಾಣವನ್ನು ಮಾತ್ರ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಜನವರಿ 22 ಬರೀ ದಿನಾಂಕವಲ್ಲ- ಹೊಸಶಕೆಯ ಆರಂಭ: ಪ್ರಧಾನಿ ಮೋದಿ ಬಣ್ಣನೆ