ETV Bharat / state

ಬರ ಪರಿಹಾರದ ಹಣವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕ್​ಗಳಿಗೆ ಸಿಎಂ ಸೂಚನೆ - CM Meeting with DCs - CM MEETING WITH DCS

ರಾಜ್ಯದಲ್ಲಿ ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಡಿಯೋ ಸಂವಾದ ನಡೆಸಿದರು.

cm meeting
ಸಿಎಂ ಸಭೆ (Pic: CM's X post)
author img

By ETV Bharat Karnataka Team

Published : May 23, 2024, 1:30 PM IST

Updated : May 23, 2024, 4:16 PM IST

ಬೆಂಗಳೂರು: ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಅಂತ್ಯದ ವೇಳೆಗೆ ಆದೇಶ ಹೊರಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಆಯಾ ಜಿಲ್ಲೆಯ ಸ್ಥಿತಿಗತಿಯ ಮಾಹಿತಿ ಪಡೆದುಕೊಂಡು, ಅಗತ್ಯ ಸಲಹೆ ಸೂಚನೆ ನೀಡಿದರು.

ಅಭಿವೃದ್ಧಿ ಕಡೆ ಹೆಚ್ಚಿನ ಗಮನಹರಿಸಿ: ನಂತರ ಜಿಲ್ಲಾಡಳಿತಗಳನ್ನುದ್ದೇಶಿಸಿ ಮಾತನಾಡಿದ ಸಿಎಂ, ಈಗ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ, ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ, ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಿಎಂ ಸೂಚಿಸಿದರು.

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳೂ ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಗುರಿ ಇರುವುದು 2.95 ಲಕ್ಷ ಹೆಕ್ಟೇರ್‌ ಪ್ರದೇಶ, ಆದರೆ 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿ ಇದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದು, ಕೃಷಿ ಚಟುವಟಿಕೆಗೆ ಪೂರಕ ಕ್ರಮಕ್ಕೆ ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಜೂನ್‌ ಕೊನೆಯವರೆಗೆ ಎಲ್ಲ ಹೊಸ ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಸೂಚಿಸಲಾಗಿದೆ. ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ. ಹಾಗಾಗಿ, ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಆಗಬೇಕು. 500ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚು ಗಮನಹರಿಸಬೇಕು ಎಂದು ಸೂಚಿಸಿದರು.

ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕ್​ಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕ್​ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಾಂಕ್ರಾಮಿಕಗಳಿಗೆ ಹಿರಿಯ ಅಧಿಕಾರಿಗಳೇ ಹೊಣೆ: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಗಡೂರು ಹಾಗೂ ಕೆ.ಸಾಲುಹುಂಡಿ ಗ್ರಾಮಗಳಲ್ಲಿ ಕಾಲರಾ ತಲೆದೋರಿದೆ. ಕಲುಷಿತ ನೀರು ಇದಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಎಂಜಿನಿಯರ್​​ಗಳು ಕುಡಿಯಲು ಯೋಗ್ಯ ನೀರು ಒದಗಿಸಲು ವಿಫಲವಾಗಿದ್ದಾರೆ. ನೀರಿನ ಮೂಲವು ಕುಡಿಯಲು ಯೋಗ್ಯವಾಗಿದೆಯೇ, ಇಲ್ಲವೇ ಎಂದು ಪರಿಶೀಲಿಸದಿರುವುದು ದೊಡ್ಡ ಅಪರಾಧ. ಕೆ. ಸಾಲುಹುಂಡಿಯಲ್ಲಿ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ, ಒಬ್ಬ ಯುವಕ ಮೃತಪಟ್ಟಿದ್ದಾನೆ. ಇದು ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಆಗಿದೆ. ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳನ್ನೇ ಜವಾಬ್ದಾರರನ್ನಾಗಿಸಬಹುದು ಎಂದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಇತರ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ: ಪ್ರತ್ಯೇಕ ಕಾರ್ಯಪಡೆ ರಚಿಸಿ, ಈ ತಿಂಗಳೊಳಗೆ ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಡೆಡ್​​​​ಲೈನ್: ಸಿಎಂ ಸಿದ್ದರಾಮಯ್ಯ - Bengaluru Roads

Last Updated : May 23, 2024, 4:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.