ETV Bharat / state

ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ: ನಬಾರ್ಡ್ ಸಾಲ ಮಿತಿ ಹೆಚ್ಚಿಸಲು ಮನವಿ - CM MEETS NIRMALA SITHARAMAN

ದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ನಬಾರ್ಡ್ ಸಾಲ ಮಿತಿ ಹೆಚ್ಚಿಸುವಂತೆ ಮನವಿ ಸಲ್ಲಿಸಿದರು.

CM meets Nirmala Sitharaman
ನವದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 21, 2024, 2:22 PM IST

ಬೆಂಗಳೂರು: ಕರ್ನಾಟಕದ ರೈತರ ಹಿತದೃಷ್ಟಿಯಿಂದ, ಉತ್ತಮ ಬೆಳೆ ಬೆಳೆಯಲು ಅನುಕೂಲವಾಗುವಂತೆ 2024-25ನೇ ಸಾಲಿನಲ್ಲಿ ಅಲ್ಪಾವಧಿ ಕೃಷಿ ಸಾಲದ ಮಿತಿ ಹೆಚ್ಚಿಸುವಂತೆ ನಬಾರ್ಡ್‌ ಹಾಗೂ ಆರ್‌ಬಿಐಗೆ ನಿರ್ದೇಶನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ.

"2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ 35 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ ಅಲ್ಪಾವಧಿ ಕೃಷಿ ಸಾಲ ವಿತರಿಸುವ ಗುರಿ ಹೊಂದಿದೆ. 2023-24ನೇ ಹಣಕಾಸು ವರ್ಷದಲ್ಲಿ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ ಕರ್ನಾಟಕದಲ್ಲಿ ರೂ. 22,902 ಕೋಟಿ ಅಲ್ಪಾವಧಿ ಕೃಷಿ ಸಾಲವನ್ನು ವಿತರಿಸಲಾಗಿದೆ. 2024-25ನೇ ಸಾಲಿನಲ್ಲಿ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ 9,162 ಕೋಟಿ ರೂ ಕೃಷಿ ಸಾಲ ಮಿತಿಗೆ ಅನುಮೋದನೆ ನೀಡುವಂತೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ ನಬಾರ್ಡ್‌ಗೆ ಪ್ರಸ್ತಾವನೆ ಸಲ್ಲಿಸಿತ್ತು" ಎಂದು ಮನವಿಯಲ್ಲಿ ತಿಳಿಸಿದ್ದಾರೆ.

"ಕಳೆದ ಐದು ವರ್ಷಗಳ ಅವಧಿಯಲ್ಲಿ ನಬಾರ್ಡ್‌ ಕರ್ನಾಟಕ ರಾಜ್ಯಕ್ಕೆ ಅನುಮೋದಿಸಿರುವ ಕೃಷಿ ಸಾಲದ ಮಿತಿಯ ವಿವರವನ್ನು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ 2019-20ರಲ್ಲಿ 4,200 ಕೋಟಿ ರೂ. ಮೊತ್ತ ಮಂಜೂರು ಮಾಡಲಾಗಿತ್ತು. ಸುಮಾರು15% ಮಿತಿ ಹೆಚ್ಚಿಸಿತ್ತು. 2020-21 ಸಾಲಿನಲ್ಲಿ 5,500 ಕೋಟಿ ರೂ. ಮಂಜೂರು ಮಾಡಲಾಗಿತ್ತು. 27% ಮಿತಿ ಹೆಚ್ಚಿಸಿತ್ತು.‌ 2021-22 ಸಾಲಿನಲ್ಲಿ 5,483 ಕೋಟಿ ರೂ. ಸಾಲವನ್ನು ಮಂಜೂರು ಮಾಡಲಾಗಿದ್ದು, 1% ಕಡಿತವಾಗಿತ್ತು. 2022-23 ಸಾಲಿನಲ್ಲಿ 5,550 ಕೋಟಿ ರೂ. ಸಾಲದ ಮೊತ್ತು ಮಂಜೂರು ಮಾಡಿತ್ತು. 1% ಮಿತಿ ಹೆಚ್ಚಿಸಿತ್ತು. 2023-24 ಸಾಲಿನಲ್ಲಿ 5600 ಕೋಟಿ ರೂ‌. ಮಂಜೂರು ಮಾಡಿದ್ದು, 1% ಮಿತಿ ವೃದ್ಧಿಯಾಗಿತ್ತು. 2024-25 ಸಾಲಿನಲ್ಲಿ 2,340 ಕೋಟಿ ರೂ‌. ಮಂಜೂರು ಮಾಡಲಾಗಿದೆ‌. ಆ ಮೂಲಕ 58% ಕಡಿತ ಮಾಡಿದೆ" ಎಂದು ವಿವರಿಸಿದ್ದಾರೆ.

"2023-24ನೇ ಸಾಲಿನಲ್ಲಿ ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ ರೂ.5600 ಕೋಟಿ ಮೊತ್ತದ ರಿಯಾಯಿತಿ ದರದ ಸಾಲದ ಮಿತಿಗೆ ಅನುಮೋದನೆ ನೀಡಿತ್ತು. 2024-25ನೇ ಸಾಲಿನಲ್ಲಿ ರೂ.9,162 ಕೋಟಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರೂ, ನಬಾರ್ಡ್‌ ಕೃಷಿ ಚಟುವಟಿಕೆಗಳಿಗೆ ಕೇವಲ ರೂ.2340 ಕೋಟಿ ರಿಯಾಯಿತಿ ದರದ ಸಾಲವನ್ನು ಅನುಮೋದಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ.58ರಷ್ಟು ಕಡಿಮೆಯಾಗಿದೆ. ಆರ್‌ಬಿಐ ಸಾಮಾನ್ಯ ಸಾಲದ ಮಿತಿ (ಎಲ್ಒಸಿ)ಯನ್ನು ಕಡಿಮೆಗೊಳಿಸಿರುವುದೇ ಪ್ರಸ್ತುತ ವರ್ಷ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿಮೆಗೊಳಿಸಲು ಕಾರಣ ಎಂದು ನಬಾರ್ಡ್‌ ಮಾಹಿತಿ ನೀಡಿದೆ" ಎಂದಿದ್ದಾರೆ.

ಕರ್ನಾಟಕದಲ್ಲಿ ಈ ಬಾರಿ ಉತ್ತಮ ಮಾನ್ಸೂನ್‌ ಮಳೆಯಾಗಿದ್ದು, ರೈತರ ಕೃಷಿ ಸಹಕಾರಿ ಚಟುವಟಿಕೆಗಳಿಗಾಗಿ ರಿಯಾಯಿತಿ ದರದ ಸಾಲದ ಮಿತಿ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಕರ್ನಾಟಕಕ್ಕೆ 2024-25ನೇ ಸಾಲಿಗೆ ರಿಯಾಯಿತಿ ದರದ ಸಾಲದ ಮಿತಿಯನ್ನು ಕಡಿತಗೊಳಿಸಿರುವುದು ಅಲ್ಪಾವಧಿ ಕೃಷಿ ಸಹಕಾರಿ ಸಾಲದ ವಿತರಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶೀಘ್ರದಲ್ಲೇ MSMEಗಳಿಗಾಗಿ ₹100 ಕೋಟಿ ವರೆಗಿನ ಸಾಲ ಖಾತ್ರಿ ಯೋಜನೆ ಜಾರಿ: ನಿರ್ಮಲಾ ಸೀತಾರಾಮನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.