ETV Bharat / state

ಕರುನಾಡಲ್ಲಿ ವಾಸಿಸುವವರೆಲ್ಲರು ಕನ್ನಡ ಕಲಿಯಲೇಬೇಕು: ಸಿಎಂ ಸಿದ್ದರಾಮಯ್ಯ - CM SIDDARAMAIAH - CM SIDDARAMAIAH

ವಿಧಾನಸೌಧದ ಆವರಣದಲ್ಲಿ ಅನಾವರಣವಾಗಲಿರುವ ಕನ್ನಡಾಂಭೆಯ 25 ಅಡಿ ಎತ್ತರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಇದೇ ವೇಳೆ ಕರುನಾಡಲ್ಲಿ ವಾಸಿಸುವವರೆಲ್ಲರೂ ಕನ್ನಡ ಕಲಿಯಬೇಕು ಎಂದು ಹೇಳಿದರು.

ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ
ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ (ETV Bharat)
author img

By ETV Bharat Karnataka Team

Published : Jun 20, 2024, 4:12 PM IST

ಬೆಂಗಳೂರು: ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ಅಂಗವಾಗಿ ವಿಧಾನಸೌಧದ ಪಶ್ಚಿಮದ್ವಾರದ ಬಳಿ ನಾಡದೇವಿ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ, ನೆಲ, ಜಲ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದಾಮಯ್ಯ ಕರೆ ನೀಡಿದರು.

ರಾಜ್ಯದಲ್ಲಿ ಪ್ರತಿಯೊಬ್ಬರೂ ಕೂಡ ಕನ್ನಡದಲ್ಲಿಯೇ ಮಾತನಾಡುತ್ತೇನೆ, ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡುವುದಿಲ್ಲ ಎಂದು ತೀರ್ಮಾನ ಮಾಡಬೇಕು. ಕನ್ನಡಿಗರು ಉದಾರಿಗಳು. ಹಾಗಾಗಿಯೇ ಬೇರೆ ಭಾಷೆ ಮಾತನಾಡುವವರೂ ಕೂಡ ಕನ್ನಡ ಕಲಿಯದೆ ಬದುಕುವ ವಾತಾವರಣ ರಾಜ್ಯದಲ್ಲಿದೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಹೋದರೆ ಅವರ ಮಾತೃಭಾಷೆಯಲ್ಲಿಯೇ ಮಾತನಾಡುತ್ತಾರೆ. ನಾವೂ ಕೂಡ ನಮ್ಮ ಮಾತೃಭಾಷೆಯಲ್ಲಿಯೇ ವ್ಯವಹರಿಸಬೇಕು. ಅದು ನಮಗೆ ಹೆಮ್ಮೆಯ ವಿಷಯವಾಗಬೇಕು. ಅದರಲ್ಲಿ ಕೀಳರಿಮೆ ಅಗತ್ಯವಿಲ್ಲ ಎಂದರು.

ಕರ್ನಾಟಕದಲ್ಲಿ ವಾಸ ಮಾಡುವವರು ಕನ್ನಡ ಕಲಿಯಬೇಕು: ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯ. ಅದಕ್ಕಾಗಿ ಇಲ್ಲಿ ವಾಸ ಮಾಡುವವರೆಲ್ಲರೂ ಕನ್ನಡವನ್ನು ಕಲಿಯಲೇಬೇಕು. ಹಾಗೆಂದು ನಾವು ಸುಮ್ಮನಿರುವಂತಿಲ್ಲ. ಕನ್ನಡಿಗರು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಬೇರೆ ರಾಜ್ಯಗಳಲ್ಲಿರುವ ದುರಭಿಮಾನಿಗಳಂತೆ ನಾವು ಆಗಬೇಕಿಲ್ಲ. ಆದರೆ ನಮ್ಮ ಭಾಷೆ, ನೆಲ, ನಾಡಿನ ಬಗೆ ಗೌರವ, ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ
ಕನ್ನಡಾಂಬೆಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ (ETV Bharat)

ನವೆಂಬರ್ 1ರೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು: ಭುವನೇಶ್ವರಿ ತಾಯಿ ಎಲ್ಲರಿಗೂ ಈ ನಿಟ್ಟಿನಲ್ಲಿ ಸ್ಫೂರ್ತಿ ಕೊಡಲಿ ಎಂದು ಆಶಿಸುತ್ತೇನೆ. ನವೆಂಬರ್ 01, 2024 ರೊಳಗೆ ಪ್ರತಿಮೆ ಕಾಮಗಾರಿ ಪೂರ್ಣಗೊಳ್ಳಬೇಕು. ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಣದ ಕೊರತೆಯೂ ಇಲ್ಲ. ಇದೊಂದು ಉತ್ತಮವಾದ ಕೆಲಸ. ವಿಧಾನಸೌಧದ ಆವರಣದಲ್ಲಿ ಸುಮಾರು 25 ಅಡಿ ಎತ್ತರ ಇರುವ ಕಂಚಿನ ಪ್ರತಿಮೆ ನಿರ್ಮಾಣವಾಗಲಿದೆ. ಜನರಿಗೆ ಆಕರ್ಷಣೆಯಾಗುವ ರೀತಿಯಲ್ಲಿ ಇರಬೇಕೆಂದು ಸೂಚಿಸಲಾಗಿದೆ. ಪ್ರತಿಮೆ ವಿಧಾನಸೌಧದ ಆಕರ್ಷಣೆಯನ್ನು ಇಮ್ಮಡಿಗೊಳಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ಸಿಎಂ ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿ ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕರು ಮೊದಲಾದವರು ಉಪಸ್ಥಿತರಿದ್ದರು.

ಪುತ್ಥಳಿ ವಿಶೇಷತೆ ಏನು?: ವಿಧಾನಸೌಧದ ಆವರಣದಲ್ಲಿ ಅನಾವರಣವಾಗಲಿರುವ ಕನ್ನಡಾಂಭೆಯ ಕಂಚಿನ ಪುತ್ಥಳಿ ಸುಮಾರು 25 ಅಡಿ ಎತ್ತರದ್ದಾಗಿದೆ. ಶಿಲ್ಪಿ ಕೆ.ಶ್ರೀಧರ್ ಮೂರ್ತಿ ಈ ಕನ್ನಡಾಂಬೆಯ ಪುತ್ಥಳಿಯನ್ನು ನಿರ್ಮಾಣ ಮಾಡಲಿದ್ದಾರೆ. ಪುತ್ಥಳಿಯ ಅಂದಾಜು ವೆಚ್ಚ 21.24 ಕೋಟಿ ರೂಪಾಯಿಯಾಗಿದೆ. ಪುತ್ಥಳಿಯನ್ನು ಕನ್ನಡ ಸಂಸ್ಕೃತಿ ಇಲಾಖೆ ನಿರ್ಮಾಣ ಮಾಡಲಿದೆ. ಪುತ್ಥಳಿ ಹಿಂದಿನ ಕಂಚಿನ ಕರ್ನಾಟಕ ನಕ್ಷೆಯ ಉಬ್ಬು ಶಿಲ್ಪದ ಎತ್ತರ 30 ಅಡಿ ಇರಲಿದೆ. ಒಟ್ಟಾರೆ ಎತ್ತರ ನೆಲಮಟ್ಟದಿಂದ 41 ಅಡಿ ಇರಲಿದೆ. ಪ್ರತಿಮೆಯ ಕಲ್ಲಿನ ಪೀಠದ ಉದ್ದಳತೆ ಮತ್ತು ಎತ್ತರ 6.30 X 8.87 X 1.80 ಮೀಟರ್ ಇರಲಿದೆ. ಪ್ರತಿಮೆ ಹಾಗೂ ಕರ್ನಾಟಕ ನಕ್ಷೆಯ ಒಟ್ಟು ತೂಕ 31.50 ಟನ್ ಇರಲಿದ್ದು, ಒಟ್ಟು ವಿಸ್ತೀರ್ಣ (ಫೆಡಸ್ಟ್ರಾಲ್, ಪಾತ್ ವೇ ಮತ್ತು ಉದ್ಯಾನವನ ಸೇರಿದಂತೆ) 4500 ಚದರ್​ ಮೀಟರ್ ಇರಲಿದೆ.

ಇದನ್ನೂ ಓದಿ: ಚಿತ್ರಮಂದಿರಗಳಲ್ಲಿ ಡಾಲಿ ಧನಂಜಯ್ ಸಿನಿಮಾದ ದರ್ಬಾರ್: ನಟರಾಕ್ಷಸನಿಗೆ ಸಿಗುತ್ತಾ 'ಕೋಟಿ' - KOTEE MOVIE RELEASED

ETV Bharat Logo

Copyright © 2024 Ushodaya Enterprises Pvt. Ltd., All Rights Reserved.