ETV Bharat / state

ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ - CM SIDDARAMAIAH

ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಏಕೀಕರಣ ಮತ್ತು ಏಳ್ಗೆಗಾಗಿ ಶ್ರಮಿಸಿದದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭ
ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭ (ETV Bharat)
author img

By ETV Bharat Karnataka Team

Published : Nov 1, 2024, 8:32 PM IST

ಬೆಂಗಳೂರು: "ಕನ್ನಡ ಏಕೀಕರಣ ಮತ್ತು ಏಳ್ಗೆಗಾಗಿ ಶ್ರಮಿಸಿದದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸಿಎಂ ಮಾತನಾಡಿದರು.

"1956ರ ನವೆಂಬರ್​ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1ರಂದು ಮೈಸೂರು ರಾಜ್ಯ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕವೆಂದು ಮರುನಾಮಕರಣಗೊಂಡಿತು. ಕರ್ನಾಟಕ ಎಂದು ನಾಮಕರಣಗೊಂಡು 51 ವರ್ಷವಾದ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರವನ್ನು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು 'ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ' ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು. ಕನ್ನಡ ನಾಡಿನ ಏಕೀಕರಣ ಮತ್ತು ಏಳಿಗೆಗೆ 100 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ" ಎಂದರು.

ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭ
ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭ (ETV Bharat)

ವಿಧಾನಸೌಧದ ಆವರಣದಲ್ಲಿ‌ ಶೀಘ್ರ ಭುವನೇಶ್ವರಿ ದೇವಿ ಪ್ರತಿಮೆ: "ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ. 1983ರ ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿದ್ದೆ. ಕನ್ನಡವನ್ನು ಕಾಯಲು ಸಮಿತಿ ಬೇಕೆನ್ನುವ ಪರಿಸ್ಥಿತಿ ಕರ್ನಾಟಕದಲ್ಲಿ ಉಂಟಾಗಿದೆ. ಇಂದಿಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಈ ಸಮಿತಿ ಕಾರ್ಯನಿರ್ವಹಿಸುತ್ತಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ವಿಷಯದಲ್ಲಿ ಉದಾರತನವಿರಬೇಕು, ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನವಿರಬೇಕು. ಬೇರೆ ಭಾಷೆ ಕಲಿತರೂ, ಕನ್ನಡ ತಾಯಿ ಭಾಷೆಯನ್ನು ಮರೆಯಬಾರದು. ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಎಂಬ ಸ್ಥಾನಮಾನ ದೊರೆತಿದೆ. ಕನ್ನಡಕ್ಕೆ ಸೂಕ್ತ ಗೌರವ ಸಿಗುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ತಾಯಿಯ ಪ್ರತಿಮೆಯನ್ನು ಸದ್ಯದಲ್ಲಿಯೇ ಸ್ಥಾಪಿಸಲಾಗುವುದು" ಎಂದು ತಿಳಿಸಿದರು.

"ಅಲ್ಲದೇ, ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ, ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ" ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಧಿಕಾರಕ್ಕೆ ಆಸೆ ಪಡದ ವಾಟಾಳ್: "ಪ್ರತಿ ವರ್ಷದ ನವೆಂಬರ್ 1 ಕನ್ನಡ ಹಬ್ಬದ ದಿನ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಇದೇ ರೀತಿ 100 ರಾಜ್ಯೋತ್ಸವಗಳನ್ನು ಆಚರಿಸುವಂತಾಗಲಿ" ಎಂದು ಸಿಎಂ ಶುಭ ಕೋರಿದರು. "ಕನ್ನಡಪರ ಹೋರಾಟಗಾರರಾದ ಇವರು ದೀರ್ಘ ಕಾಲದಿಂದ ಕನ್ನಡ ನಾಡು, ನುಡಿ, ನೆಲ, ಜಲ ಸಂರಕ್ಷಣೆಗೆ ಶ್ರಮಿಸಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದ್ದರೂ, ಕನ್ನಡ ಚಳವಳಿ ಪಕ್ಷ ಬಿಟ್ಟು ಬೇರೆಡೆಗೆ ಅವರು ಮುಖ ಮಾಡಲಿಲ್ಲ. ನನ್ನನ್ನೂ ಸೇರಿದಂತೆ, ಕೆಂಗಲ್ ಹನುಮಂತಯ್ಯ, ವೀರೇಂದ್ರ ಪಾಟೀಲ್, ದೇವರಾಜ ಅರಸು, ಗುಂಡೂರಾಯರು ಸೇರಿದಂತೆ ಹಲವು ರಾಜಕೀಯ ಧುರೀಣರಿಗೆ ಆಪ್ತರಾಗಿದ್ದರೂ, ಎಂದಿಗೂ ಅಧಿಕಾರಕ್ಕೆ ಹಪಹಪಿಸಿದವರಲ್ಲ. ಮಾತೃಭಾಷೆ, ನೆಲ ಜಲದ ಬಗ್ಗೆ ಬದ್ಧತೆಯಿರುವ ವಾಟಾಳ್ ನಾಗರಾಜ್ ಅವರ ಬಗ್ಗೆ ಅಪಾರ ಗೌರವಾದರವಿದೆ. ನನ್ನ ವಿದ್ಯಾರ್ಥಿದೆಸೆಯಿಂದಲೂ ಅವರ ಭಾಷೆಯನ್ನು ಕೇಳುತ್ತಾ ಬಂದಿದ್ದೇನೆ" ಎಂದು ಸ್ಮರಿಸಿದರು.

ಇದನ್ನೂ ಓದಿ: ಭಾಷೆ, ಬದುಕು, ಸಾಹಿತ್ಯ ಬೆಳವಣಿಗೆಯಲ್ಲಿ ಕನ್ನಡಕ್ಕೆ ತನ್ನದೇ ಅಸ್ಮಿತೆ ಇದೆ: ಸಚಿವ ಮಹದೇವಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.