ETV Bharat / state

ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಮೊದಲ ಆರೋಪಿ, ಅವರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ ಹೋರಾಟ: ಆರ್​ ಅಶೋಕ್ - Valmiki Corporation Scam

author img

By ETV Bharat Karnataka Team

Published : Jun 10, 2024, 7:20 PM IST

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಸಿಎಂ A1, ನಾಗೇಂದ್ರ A2 ಆಗಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಅದಕ್ಕಾಗಿ ಸದನ ಒಳಗಡೆಯೂ ನಾವು‌ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

VALMIKI CORPORATION SCAM
ಆರ್.ಅಶೋಕ್ (IANS)

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮೊದಲ ಆರೋಪಿ. ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ, ಸದನದ ಒಳಗೆ ಮತ್ತು ಹೊರಗೆ ನಮ್ಮ ಹೋರಾಟ ನಡೆಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಜಾಲಹಳ್ಳಿ ನಿವಾಸದಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ವಾಲ್ಮೀಕಿ ನಿಗಮ‌ ಹಗರಣ ವಿಚಾರದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅಮಾಯಕ. ಅವರಿಗೆ ಸಿಕ್ಕಿರೋದು ಕೇವಲ‌ 20% ಮಾತ್ರ. ಉಳಿದದ್ದು ಯಾರ ಪಾಲಾಗಿದೆ? ಸಿಎಂ ಗಮನಕ್ಕೆ ಬಾರದೆ ಇದು ನಡೆದಿಲ್ಲ. ನಮ್ಮ ಹೋರಾಟ ನಾಗೇಂದ್ರ ವಿರುದ್ಧ ಅಲ್ಲ, ಸಿಎಂ ಸಿದ್ದರಾಮಯ್ಯ ವಿರುದ್ಧ ಎಂದು ಸಿದ್ದರಾಮಯ್ಯ ನಿನಗೆ ಫೈನಾನ್ಸ್ ಗೊತ್ತಾ? ಎನ್ನುತ್ತಾ ಏಕವಚನದಲ್ಲೇ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಅಶೋಕ್ ನಿಮಗೆ ಫೈನಾನ್ಸ್ ಗೊತ್ತಾ ಅಂತ ಕೇಳ್ತಾರೆ. ನಾನು ಕೇಳ್ತೀನಿ ಸಿದ್ದರಾಮಯ್ಯ ನಿಮಗೆ ಫೈನಾನ್ಸ್ ಗೊತ್ತಾ? ನಿಮ್ಮ ಮೂಗಿನ ಕೆಳಗೆ ಇಷ್ಟೆಲ್ಲಾ ನಡೀತಿದೆ, ನಿಮಗೆ ಗೊತ್ತಾ? ಇಷ್ಟೆಲ್ಲಾ ಹಣ ಲೂಟಿ ಆಗಿದೆ, ಸಿಕ್ಕಿ ಹಾಕಿಕೊಂಡಿದ್ದಾರೆ, ನಿಮ್ಮ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಯಾರಾದರೂ ಹೇಳಿದರಾ? ದಲಿತರ ಹಣ ಸಿಕ್ಕಿದೆ,‌ ಇದು ಲೂಟಿ ಕಾಂಗ್ರೆಸ್ ಸರ್ಕಾರ. ದಲಿತರ ಮಕ್ಕಳು ಓದಲು ಇಟ್ಟಿದ್ದ ಹಣವನ್ನು ಲೂಟಿ ಹೊಡೆಯಲಾಗಿದೆ. ಪ್ರಕರಣ ಈಗ ಸಿಬಿಐಗೆ ಹೋಗಿರೋದ್ರಿಂದ ಹಣ ಸೀಜ್ ಆಗಿದೆ. ಇದು ಕಾಂಗ್ರೆಸ್ ಸರ್ಕಾರದ ತಪ್ಪು. ಹಾಗಾಗಿ ನೀವೇ 187 ಕೋಟಿ ಹಣ ಇಲಾಖೆಗೆ ತುಂಬಿ ಅಂತ ಆಗ್ರಹಿಸಿದರು.

ಸಿದ್ದರಾಮಯ್ಯ ವಿರುದ್ಧ ವಿಧಾನಸೌಧದಲ್ಲಿ ಹೋರಾಟ ಮಾಡಿಯೇ ಮಾಡುತ್ತೇವೆ. ಮುಖ್ಯಮಂತ್ರಿ ಅವರೇ A1, ನಾಗೇಂದ್ರ A2 ಆಗಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಅದಕ್ಕಾಗಿ ಸದನದ ಒಳಗಡೆಯೂ ನಾವು‌ ಹೋರಾಟ ಮಾಡುತ್ತೇವೆ ಎಂದು ಆರ್​ ಅಶೋಕ್​ ತಿಳಿಸಿದರು.

ಸಚಿವ ಶರಣಪ್ರಕಾಶ್ ಪಾಟೀಲ್ ಕೂಡ ಭಾಗಿಯಾಗಿದ್ದಾರೆ, ಕೇವಲ ಸಚಿವರ ಕೊಠಡಿ ಮಾತ್ರವಲ್ಲ, ಗೋವಾದಲ್ಲಿ ಕೂಡ ಸಭೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರೋ‌ ಚಂದ್ರಶೇಖರ್ ಅವರನ್ನೂ ಗೋವಾಗೆ ಕರೆದುಕೊಂಡು ಹೋಗಿದ್ದರು. ಅದಾದ ಬಳಿಕ ನನ್ನ ಕಥೆ ಗೋವಿಂದ ಅಂತ ಹೆದರಿ ಆ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ವಿರುದ್ಧ ಅಶೋಕ್​ ಗಂಭೀರ ಆರೋಪ ಮಾಡಿದರು.

ಗ್ಯಾರಂಟಿಗಳಿಂದ ಕಾಂಗ್ರೆಸ್‌ ಮತ ಬಂದಿಲ್ಲ: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್‌ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್‌ ಸೋತಿದೆ ಎಂದು ಆರ್‌.ಅಶೋಕ ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಪಾಪರ್‌ ಆಗಿರುವ ಸರ್ಕಾರ ಎಲ್ಲ ಕಡೆ ಬಿಲ್‌ ಪಾವತಿ ಬಾಕಿ ಇರಿಸಿಕೊಂಡಿದೆ. ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದರು.

ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಸಹೋದರ ಡಿ.ಕೆ.ಸುರೇಶ್‌ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದರು.

ಕಸಕ್ಕೂ ತೆರಿಗೆ: ಈಗಾಗಲೇ ತೆರಿಗೆ ಭಾರದಿಂದ ಜನರು ಸುಸ್ತಾಗಿದ್ದಾರೆ. ಕಸಕ್ಕೂ ತೆರಿಗೆ ಹಾಕುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಮುಂದೆ ಹಾಲು, ಆಲ್ಕೋಹಾಲ್‌, ಬಸ್‌ ಟಿಕೆಟ್‌ ದರವನ್ನೂ ಹೆಚ್ಚಿಸಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಇನ್ನಷ್ಟು ಹೊಸ ತೆರಿಗೆಗಳನ್ನು ವಿಧಿಸಲಿದ್ದಾರೆ. ಇದರ ವಿರುದ್ಧವೂ ಬಿಜೆಪಿ ಪ್ರತಿಭಟಿಸಲಿದೆ. ಅಲ್ಪಸಂಖ್ಯಾತರು ಏನು ಮಾಡಿದರೂ ನಡೆಯುತ್ತದೆ ಎಂಬ ನಂಬಿಕೆ ಬಂದಿದೆ. ಹಿಂದೂಗಳ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ ಹಾಗೂ ಮಾಫಿಯಾ ರೌಡಿಗಳಿಗೆ ಭಯ ಕಡಿಮೆಯಾಗಿದೆ. ಗೃಹ ಇಲಾಖೆ ದಿಕ್ಕು ದೆಸೆಯಿಲ್ಲದಂತೆ ನಡೆಯುತ್ತಿದೆ. ಜನರು ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ ಎಂದರು.

ಮೋದಿಯೇ ಒಬಿಸಿ: ನರೇಂದ್ರ ಮೋದಿಯವರು ಹಿಂದುಳಿದ ವರ್ಗದ ನಾಯಕರಾಗಿದ್ದು, ಸಚಿವ ಸಂಪುಟದಲ್ಲಿ ಎಲ್ಲ ಜಾತಿ ವರ್ಗಕ್ಕೆ ಸ್ಥಾನಮಾನ ನೀಡಿದ್ದಾರೆ. ಕರ್ನಾಟಕದ ಸಂಸದರಿಗೂ ಅವಕಾಶ ನೀಡಿರುವುದು ಅಭಿನಂದನೀಯ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಹೆಬ್ಬಾಗಿಲಾಗಿದ್ದು, ಇಲ್ಲಿಗೆ ಹೆಚ್ಚು ಅವಕಾಶ ನೀಡಿದ್ದಾರೆ ಎಂದರು.

ಇದನ್ನೂ ಓದಿ: ನಮಗಿದು ಎಚ್ಚರಿಕೆ ಗಂಟೆ, ಸರಿಮಾಡಿಕೊಳ್ಳಬೇಕಿದೆ: ಡಿ.ಕೆ.ಶಿವಕುಮಾರ್ - D K Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.