ETV Bharat / state

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ಪುನರುಜ್ಜೀವನಕ್ಕೆ 5 ಕೋಟಿ ರೂ ನೆರವು: ಸಿಎಂ ಸಿದ್ದರಾಮಯ್ಯ ಭರವಸೆ - Basilica Church - BASILICA CHURCH

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್​ ಪುನರುಜ್ಜೀವನಕ್ಕೆ 5 ಕೋಟಿ ರೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ
ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ (ಕರ್ನಾಟಕ ಸಿಎಂ ಸಾಮಾಜಿಕ ಜಾಲತಾಣ)
author img

By ETV Bharat Karnataka Team

Published : Sep 9, 2024, 7:01 AM IST

ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್​ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಜನ್ಮದಿನ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹಾರೈಸಿದರು. ಬೆಸಿಲಿಕಾ ಚರ್ಚ್​ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮುಖ್ಯ ಅತಿಥಿಗಳಾಗಿದ್ದರು.

ಇದನ್ನೂ ಓದಿ: ಅಮೆರಿಕ ಪ್ರವಾಸ ಖಾಸಗಿಯದ್ದು, ಯಾವ ನಾಯಕರನ್ನೂ ಭೇಟಿ ಮಾಡುತ್ತಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ - D K Shivakumar US Tour

ETV Bharat Logo

Copyright © 2025 Ushodaya Enterprises Pvt. Ltd., All Rights Reserved.