ಬೆಂಗಳೂರು/ಕಾರವಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ಆಗಮಿಸಿ ಉತ್ತರ ಕನ್ನಡದ ಮುರುಡೇಶ್ವರದ ಕಡಲತೀರದಲ್ಲಿ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಇಂದು ಪತ್ತೆಯಾಗಿವೆ.
ಒಟ್ಟು 46 ವಿದ್ಯಾರ್ಥಿಗಳು ಹಾಗೂ 7 ಮಂದಿ ಶಿಕ್ಷಕರು ಪ್ರವಾಸಕ್ಕೆ ಆಗಮಿಸಿದ್ದರು. ಆದರೆ, ನೀರಿನಲ್ಲಿ ಇಳಿದಿದ್ದ ಏಳು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿನಿ ಶ್ರವಂತಿ ಗೋಪಾಲಪ್ಪ(15) ನಿನ್ನೆ (ಮಂಗಳವಾರ) ಮೃತಪಟ್ಟಿದ್ದಳು. ದೀಕ್ಷಾ(15), ಲಾವಣ್ಯಾ(15), ಲಿಪಿಕಾ(15) ಈ ಮೂವರು ಅಲೆಗೆ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದು, ಇಂದು ಅವರ ಮೃತದೇಹಗಳು ಪತ್ತೆಯಾಗಿವೆ.
ಸಿಎಂ ಪರಿಹಾರ: ಕಡಲ ತೀರದಲ್ಲಿ ನೀರುಪಾಲಾದ ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.
— Siddaramaiah (@siddaramaiah) December 11, 2024
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು…
''ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ಎಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.
ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.
ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ನಾಪತ್ತೆ: ಮುಂದುವರೆದ ರಕ್ಷಣಾ ಕಾರ್ಯಾಚರಣೆ