ETV Bharat / state

ಬೆಂಗಳೂರಿನಲ್ಲಿ ಮಳೆ ಸಂಬಂಧಿ ಸಮಸ್ಯೆಗಳು: ಇಂದು ಸಿಎಂ ಸಿದ್ದರಾಮಯ್ಯ ನಗರ ಪ್ರದಕ್ಷಿಣೆ - CM Siddaramaiah

ಬೆಂಗಳೂರಿನಲ್ಲಿ ಮಳೆ ಸಂಬಂಧಿ ಸಮಸ್ಯೆಗಳು ಶುರುವಾಗಿವೆ. ಇಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ನಗರದ ಕೆಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

bengaluru rain
ಬೆಂಗಳೂರಲ್ಲಿ ಮಳೆ ನೀರು ಅವಾಂತರ (ETV Bharat, IANS)
author img

By ETV Bharat Karnataka Team

Published : May 22, 2024, 6:53 AM IST

Updated : May 22, 2024, 7:03 AM IST

ಬೆಂಗಳೂರು: ಕಳೆದೊಂದು ವಾರದಿಂದ ನಗರದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಮುಂಗಾರುಪೂರ್ವ ವರುಣನ ಅಬ್ಬರಕ್ಕೆ ಹಲವೆಡೆ ನೀರು ನಿಂತು ಸಮಸ್ಯೆಯಾಗಿದೆ. ಸಿಎಂ ಸಿದ್ದರಾಮಯ್ಯ ಇಂದು ನಗರ ಪ್ರದಕ್ಷಿಣೆ ಕೈಗೊಳ್ಳಲಿದ್ದು ಮಳೆನೀರು ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವರು.

ಬೆಳಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ತೆರಳಲಿರುವ ಸಿಎಂ, ಮೊದಲಿಗೆ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ದೇವಸ್ಥಾನ, ಕವಿಕಾ ಕಾರ್ಖಾನೆಗಳಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸುವರು. ಬಳಿಕ ಮೈಸೂರು ರಸ್ತೆಯ ನಾಯಂಡಳ್ಳಿ, ಔಟರ್ ರಿಂಗ್ ರಸ್ತೆಯಲ್ಲಿ ಮಳೆ ನೀರು ಕಾಲುವೆಯಲ್ಲಿನ ಹೂಳೆತ್ತುವ ಕಾಮಗಾರಿ ಕುರಿತು ಮಾಹಿತಿ ಪಡೆಯಲಿದ್ದಾರೆ.

ಬನಶಂಕರಿ ದೇಗುಲ, ಜೆ.ಪಿ.ನಗರ, ದಾಲ್ಮಿಯಾ ಜಂಕ್ಷನ್, ಬನ್ನೇರು ಘಟ್ಟ ರಸ್ತೆ, ವಿಜಯಾ ಬ್ಯಾಂಕ್ ಲೇಔಟ್, ಕೋಡಿಚಿಕ್ಕನಹಳ್ಳಿ, ಹೊಸೂರು ರಸ್ತೆ, ಸಿಲ್ಕ್ ಬೋರ್ಡ್ ಜಂಕ್ಷನ್, ಹೆಚ್‌ಎಸ್‌ಆರ್ ಲೇಔಟ್, ಅಗರ ಕೆರೆ, ಸರ್ಜಾಪುರ, ಬೆಳ್ಳಂದೂರು, ಯಮಲೂರು ರಸ್ತೆ ಭಾಗದಲ್ಲಿ ಸಿಎಂ ಪರಿಶೀಲನೆ ನಡೆಸುವರು. ಬಿಬಿಎಂಪಿ ಅಧಿಕಾರಿಗಳು, ಜಲಮಂಡಳಿ, ಬೆಸ್ಕಾಂ ಅಧಿಕಾರಿಗಳು ಜೊತೆಗಿರಲಿದ್ದಾರೆ.

ಸೋಮವಾರ ಡಿಸಿಎಂ ಡಿ.ಕೆ.ಶಿವಕುಮಾರ್​ ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ರಾಜಕಾಲುವೆಗಳ ಕುರಿತು ಅಧಿಕಾರಿಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದರು.

ಇದನ್ನೂ ಓದಿ: ಧಾರಾಕಾರ ಮಳೆ: ನೆಲಕ್ಕುರುಳಿದ 300 ವರ್ಷದ ಪುರಾತನ ಮರ, ಬಯಲು ಸೀಮೆಯಲ್ಲಿ ಒಡೆದ ಕೆರೆಯ ಕಟ್ಟೆ - tree fell into the ground

Last Updated : May 22, 2024, 7:03 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.